ಸಿರಿಧಾನ್ಯ ಬೆಳೆಗಾರರಿಗೆ ಉತ್ತೇಜನ ನೀಡಲು ‘ರೈತಸಿರಿ’ ಯೋಜನೆ ಅಡಿ ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ. ನಗದು ಪ್ರೋತ್ಸಾಹ ನೀಡಲಾಗುವುದು. ಈ ಯೋಜನೆಯಡಿ ನವಣೆ,ಕೂರಲೆ, ಸಾಮೆ, ಬರಗು, ಊದಲು ಬೆಳೆಗಳನ್ನು ಬೆಳೆಯುವ ರೈತರಿಗೆ ಒಂದು ಹೆಕ್ಟೆರ್ಗೆ 10,000 ರುಪಾಯಿಗಳಂತೆ 2 ಹೆಕ್ಟೆರ್ ವರೆಗೆ ಪ್ರೋತ್ಹಾಹ ಧನ ನೀಡಲಾಗುವುದು.
ಸಿರಿಧಾನ್ಯಗಳ ಪ್ರದೇಶ ವಿಸ್ತರಣೆ ಹಾಗೂ ಸಿರಿಧಾನ್ಯಗಳ ಉತ್ಪಾದನೆಗೆ ಪೂರಕವಾಗ ಸುಧಾರಿತ ತಾಂತ್ರಿಕತೆಗಳ್ನು ಸೂಕ್ತ ಸಮಯದಲ್ಲಿ ಅಳವಡಿಸಿ ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಸಿರಿಧಾನ್ಯಗಳ ಪ್ರಾಥಮಿಕ ಸಂಸ್ಕರಣ ಘಟಕಗಳ ಸ್ಥಾಪನೆಗಾಗಿ ಪ್ರೋತ್ಸಾಹ ಧನ ಪಡೆಯಬಹುದು.
ಸಿರಿಧಾನ್ಯಗಳು ಪ್ರಮುಖವಾಗಿ ಮಳೆಯಾಶ್ರಿತ ಬೆಳೆಗಳಾಗಿದ್ದು, ಮುಂಗಾರು ಹಂಗಾಮಿನಲ್ಲಿ ಬೆಳೆಯಲಾಗುತ್ತದೆ. ಇದರಿಂದ ಹೆಚ್ಚಿನ ರೈತರು ಸಿರಿಧಾನ್ಯಗಳನ್ನು ಬೆಳೆಯಲು ಪ್ರೋತ್ಸಾಹಿಸಿದಂತಾಗುತ್ತದೆ. ಸಿರಿಧಾನ್ಯ ಬೆಳೆಯುವ ರೈತರಿಗೆ ನೇರ ಸೌಲಭ್ಯ ವರ್ಗಾವಣೆ ಮೂಲಕ (Direct Benefit Transfer) ರೈತರ ಬ್ಯಾಂಕ್ ಖಾತೆಗೆ ಪ್ರೋತ್ಸಾಹಧನ ಜಮೆ ಮಾಡಲಾಗುವುದು. ಪ್ರತಿ ಫಲಾನುಭವಿ ರೈತರಿಗೆ ಗರಿಷ್ಠ ಎರಡು ಹೆಕ್ಟೇರ್ ಮಾತ್ರ ಸೀಮಿತವಾಗುವಂತೆ ಪ್ರೋತ್ಸಾಹಧನ ನೀಡಲಾಗುವುದು.
ಫಲಾನುಭವಿಗಳ ಅರ್ಹತೆ:
ಫಲಾನುಭವಿಗಳು ರೈತರಾಗಿದ್ದು ಜಮೀನು ಅವರ ಹೆಸರಿನಲ್ಲಿರಬೇಕು. ಜಂಟಿ ಖಾತೆಯಾಗಿದ್ದಲ್ಲಿ ಇತರೆ ಖಾತೆದಾರರ ಒಪ್ಪಿಗೆ ಪತ್ರ ಪಡೆದಿರಬೇಕು ತಂದೆ ಅಥವಾ ತಾಯಿ ಹೆಸರಿನಲ್ಲಿ ಜಮೀನಿದ್ದು, ಅವರು ಮರಣ ಹೊಂದಿದ್ದಲ್ಲಿ ಮಾತ್ರ ಗ್ರಾಮಲೆಕ್ಕಿಗರಿಂದ ದೃಢೀಕರಿಸಿ, ಕುಟುಂಬದ ಇತರೆ ಸದಸ್ಯರಿಂದಒಪ್ಪಿಗೆ ಪಡೆದುತಮ್ಮ ಹೆಸರಿನಲ್ಲಿ ಅರ್ಜಿ ಸಲ್ಲಿಸುವುದು.
ಮಹಿಳೆಯ ಹೆಸರಿನಲ್ಲಿ ಖಾತೆ ಹೊಂದಿದ್ದು, ಕುಟುಂಬದ ಇತರೆ ಪುರುಷ ಸದಸ್ಯರ ಹೆಸರಿನಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ ಯಾವುದೇ ಕಾರಣಕ್ಕೂ ಮಾನ್ಯ ಮಾಡಬಾರದು. ಮಹಿಳೆಯರ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸುವುದನ್ನು ಉತ್ತೇಜಿಸಬೇಕು.
ಫಲಾನುಭವಿ ರೈತರು ಸಿರಿಧಾನ್ಯಗಳಾದ ಊದಲು, ನವಣೆ, ಹಾರಕಾ, ಕೊರಲೆ, ಸಾಮೆ ಮತ್ತು ಬರಗು ಸಿರಿಧಾನ್ಯಗಳಿಗೆ ಬೆಳೆದಿರಬೇಕು.
ಫಲಾನುಭವಿಗಳ ಆಯ್ಕೆ:
ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ತಮ್ಮಕಛೇರಿಯ ಸೂಚನಾ ಫಲಕದಲ್ಲಿ ಯೋಜನೆಯ ಮಾಹಿತಿಯನ್ನು ಪ್ರಚುರ ಪಡಿಸಿ ಆಸಕ್ತ ರೈತರ ಹೆಸರುಗಳನ್ನು ನೋಂದಾಯಿಸಿಕೊಳ್ಳುವರು. ರೈತರಿಂದ ಪಹಣಿ, ರೈತರ ಬ್ಯಾಂಕ್ ಪಾಸ್ ಪುಸ್ತಕದ ನೆರಳಚ್ಚು, ಆಧಾರಕಾರ್ಡ್ ನೆರಳಚ್ಚು, ಪ ಜಾ/ಪ ಪಂ ರೈತರಾದಲ್ಲಿ ಜಾತಿ ಪ್ರಮಾಣ ಪತ್ರದ ದಾಖಲೆಗಳನ್ನು ಕಡ್ಡಾಯವಾಗಿ ಪಡೆಯುವರು.
Share your comments