1. ಪಶುಸಂಗೋಪನೆ

ಪಲ್ಸ್ ಪೋಲಿಯೋ ರೀತಿ ಕಾಲುಬಾಯಿ ರೋಗಕ್ಕೆ ಲಸಿಕಾ ಅಭಿಯಾನ

ಕರ್ನಾಟಕ ರಾಜ್ಯದಲ್ಲಿ ಪಲ್ಸ್ ಪೋಲಿಯೋ ಮಾದರಿಯಲ್ಲಿ ಕಾಲುಬಾಯಿ ರೋಗಕ್ಕೆ ವ್ಯವಸ್ಥಿತ ಲಸಿಕಾ ಅಭಿಯಾನ ನಡೆಸಲಾಗುವುದು  ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.

ರಾಜ್ಯದ 38 ತಾಲೂಕುಗಳ 419 ಹಳ್ಳಿಗಳಲ್ಲಿ 4418 ಜಾನುವಾರುಗಳಲ್ಲಿ ಕಾಲುಬಾಯಿ ರೋಗ ಕಂಡುಬಂದಿದೆ. ಉಳಿದ ಜಾನುವಾರುಗಳು ಚಿಕಿತ್ಸೆಯಿಂದ ಗುಣಮುಖವಾಗಿವೆ. ಪಶು ವೈದ್ಯರು ರೋಗ ಕಂಡು ಬಂದ ತಾಲೂಕುಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಪಶುಸಂಗೋಪನೆ ಇಲಾಖೆಯ ವೈದ್ಯಾಧಿಕಾರಿಗಳು ನಿರಂತರವಾಗಿ ರೋಗ ಕಂಡು ಬಂದ ತಾಲೂಕುಗಳಿಗೆ ತೆರಳಿ ತೀವ್ರ ನಿಗಾವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಇದುವರೆಗೆ 57 ರಾಸುಗಳು ಮೃತಪಟ್ಟಿದ್ದು, 4066 ಜಾನುವಾರುಗಳು ಚಿಕಿತ್ಸೆಯಿಂದ ಗುಣಮುಖವಾಗಿವೆ ಎಂದು ಅವರು ತಿಳಿಸಿದ್ದಾರೆ.

ಕಾಲುಬಾಯಿ ರೋಗ ಕಂಡು ಬಂದ 5 ಕಿ.ಮೀ ವ್ಯಾಪ್ತಿಯಲ್ಲಿ ರಿಂಗ್ ವ್ಯಾಕ್ಸಿನ್ ನಡೆಸಲಾಗುತ್ತಿದೆ. ಸದ್ಯ ನಾಲ್ಕು ಲಕ್ಷಕ್ಕೂ ಹೆಚ್ಚು ಜಾನುವಾರುಗಳಿಗೆ ಲಸಿಕೆ ನೀಡಲಾಗಿದೆ. ಕಾಲು-ಬಾಯಿ ರೋಗವನ್ನು ಆದ್ಯತೆ ಮೇರೆಗೆ ಪರಿಗಣಿಸಿ ರೋಗ ನಿಯಂತ್ರಣಕ್ಕೆ ಶ್ರಮವಹಿಸುವಂತೆ ಅಧಅಧಿಕಾರಿಗಳು ಹಾಗೂ ಪಶು ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ.

ಈ ಮೊದಲು ರಾಜ್ಯದಲ್ಲಿ 60:40 ಅನುಪಾತದಲ್ಲಿ ಲಸಿಕೆ ನೀಡಲಾಗುತ್ತಿತ್ತು. ಆದರೆ ಈಗ ರಾಜ್ಯಗಳಿಗೆ ಕೇಂದ್ರ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಲಸಿಕೆ ಪೂರೈಕೆ ಮಾಡುತ್ತಿರುವುದರಿಂದ ಲಸಿಕೆ ಕಾರ್ಯಕ್ರಮ ವಿಳಂಬವಾಗಿದೆ ಎಂದರು.

ನವೆಂಬರ್, ಡಿಸೆಂಬರ್ ತಿಂಗಳಲ್ಲಿ 2020 ರ ವರೆಗೆ 17 ಸುತ್ತಿನ ಲಸಿಕಾ ಕಾರ್ಯಕ್ರಮ ನಡೆಸಿದೆ. ಜೂನ್ ತಿಂಗಳಲ್ಲಿ ಲಸಿಕಾ ಕಾರ್ಯಕ್ರಮ ನಡೆಯಬೇಕಿತ್ತು. ದೇಶದ ಎಲ್ಲಾ ರಾಜ್ಯಗಳಲ್ಲಿ ಏಕ ಕಾಲಕ್ಕೆ ಲಸಿಕಾ ಕಾರ್ಯಕ್ರಮ ನಡೆಸುವ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿರುವ ಕಾರಣ ಲಸಿಕೆ ಪೂರೈಕೆಯಲ್ಲಿ ವಿಳಂಬವಾಗಿದೆ  ತಿಂಗಳ ಅಂತ್ಯದವರೆಗೆ ಕೇಂದ್ರ ಸರ್ಕಾರದಿಂದ 25 ಲಕ್ಷ ಡೋಸ್ ಲಸಿಕೆ ಸರಬರಾಜು ಆಗಲಿದೆ ಎಂದರು.

Published On: 24 September 2021, 03:57 PM English Summary: Cattle will be vaccinated a la pulse polio' - Minister Prabhu Chauhan

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.