ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಕಿಟಸರ್ಡ್)ದಿಂದ 2020ರ ನವೆಂಬರ್ 22 ರಿಂದ ಡಿಸೆಂಬರ್ 1 ವರೆಗೆ ಹತ್ತು ದಿನಗಳ ಕಾಲ ಉಚಿತವಾಗಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಕಲಬುರಗಿ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗದ 18 ರಿಂದ 45 ವರ್ಷದೊಳಗಿನ ಬಿ.ಪಿ.ಎಲ್. ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ತರಬೇತಿ ಸಮಯದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ಒದಗಿಸಲಾಗುತ್ತದೆ.
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ತರಬೇತಿ ಸಂಸ್ಥೆಯಿಂದ ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಬಿ.ಪಿ.ಎಲ್ ಪಡಿತರ ಚೀಟಿ, ಅಕೌಂಟ್ ಪಾಸ್ಬುಕ್ ಹಾಗೂ ಇತ್ತೀಚಿನ 5 ಇತ್ತೀಚಿನ ಭಾವಚಿತ್ರ ದಾಖಲಾತಿಗಳೊಂದಿಗೆ 2020 ನವೆಂಬರ್ 22ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅದೇ ದಿನದಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ತರಬೇತಿ ಸಂಸ್ಥೆ ಕಚೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.
ಅಭ್ಯರ್ಥಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9243602888, 9886781239ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
Share your comments