ಸಮಾಜ ಕಲ್ಯಾಣ ಇಲಾಖೆಯಿಂದ ರೈತರಿಗಾಗಿ ಪಾಲಿ ಹೌಸ್ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಸೂಕ್ತ ಅರ್ಹತೆ ಹೊಂದಿದ ರೈತರು ಅರ್ಜಿ ಸಲ್ಲಿಸಬಹುದು.
ಫೆಬ್ರುವರಿ 22ರಿಂದ 25ರವರೆಗೆ “ರಾಷ್ಟ್ರೀಯ ತೋಟಗಾರಿಕೆ ಮೇಳ – 2023” ಆಯೋಜನೆ
ಮಳೆ, ಚಳಿ, ಗಾಳಿ ಮತ್ತು ಬೇಸಿಗೆ ಕಾಲ ಎನ್ನದೇ ಅಲ್ಪ ಸ್ಥಳದಲ್ಲಿ ನಿರಂತರವಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಬಹುದಾದ, ಬೆಳೆಗಳಿಗೆ ತಗಲುವ ಕೀಟ ರೋಗಗಳಿಂದ ಸುರಕ್ಷಿತವಾಗಿಡಬಹುದು.
ಸಸಿ ಕಸಿ ಗಿಡಗಳನ್ನು ತಯಾರಿಸಲು ಮತ್ತು ಬೆಳೆಸಲು ಈ ನೆರಳು ಪರದೆ ಅತ್ಯಂತ ಉಪಯುಕ್ತವಾಗಿದೆ. ಪಾಲಿಹೌಸ್ ನಿರ್ಮಾಣ ಮಾಡಿ ಹೆಚ್ಚು ಆದಾಯ ಗಳಿಸಿಕೊಳ್ಳಬೇಕೆಂದು ಸರ್ಕಾರ ರೈತರಿಗೆ ಸಹಾಯ ಧನ ನೀಡುತ್ತಿದೆ.
ಧಾರವಾಡ: 2018-19ನೇ ಸಾಲಿನ ವಿಶೇಷ ಕೇಂದ್ರಿಯ ನೆರವಿನಡಿ ಧಾರವಾಡ ಜಿಲ್ಲಾ ವ್ಯಾಪ್ತಿಯಡಿ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಸಹಾಯಧನ ಕಾರ್ಯಕ್ರಮದಡಿ “ಪರಿಶಿಷ್ಟ ಪಂಗಡದ ರೈತರಿಗೆ” ಪಾಲಿಹೌಸ್ ನಿರ್ಮಾಣ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.
ಈ ಸರ್ಕಾರಿ ನೌಕರರಿಗೆ ಸಿಹಿಸುದ್ದಿ : ಹಳೆ ಪಿಂಚಣಿ ಮರು ಜಾರಿಗೆ ಸುಪ್ರೀಂ ಕೋರ್ಟ್ ತೀರ್ಪು!
ಸಂಬಂಧಿಸಿದ ದಾಖಲೆಗಳು ಹೊಂದಿದ ಪರಿಶಿಷ್ಟ ಪಂಗಡದ ರೈತರು ಅರ್ಜಿಯನ್ನು ಸಂಬಂಧಿಸಿದ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕಾರ್ಯಾಲಯದಿಂದ ಸ್ವೀಕೃತಿ ಪಡೆದು ಫೆ.10 ರೊಳಗಾಗಿ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕಛೇರಿಗೆ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸಮಾಜ ಕಲ್ಯಾಣ ಇಲಾಖೆ ಧಾರವಾಡ ದೂರವಾಣಿ ಸಂಖ್ಯೆ: 0836-2447201 ಅಥವಾ 9902475108 ಗೆ ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತೀಯ ಅಂಚೆ ಇಲಾಖೆಯಲ್ಲಿವೆ 40,889 ಭರ್ಜರಿ ಉದ್ಯೋಗಾವಕಾಶ! ಅರ್ಜಿ ಸಲ್ಲಿಕೆಗೆ ಫೆ.16 ಕೊನೆ ದಿನ
ನಶಿಸಿ ಹೋಗುತ್ತಿರುವ ತಳಸಮುದಾಯದ ವಿಶಿಷ್ಟ ಕಲೆಗಳ ತರಬೇತಿ ಶಿಬಿರಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಧಾರವಾಡ : 2022-23ನೇ ಸಾಲಿನ ಆಯವ್ಯಯದಲ್ಲಿ ಉಲ್ಲೇಖಿಸಿರುವಂತೆ ನಶಿಸಿ ಹೋಗುತ್ತಿರುವ ತಳಸಮುದಾಯದ ವಿಶಿಷ್ಟ ಕಲೆಗಳನ್ನು ಗುರುತಿಸಿ, ಅಂತಹ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಲೆಗಳನ್ನು ಕಲಿಯಲು ಆಸಕ್ತರಿರುವ ಕಲಾವಿದರನ್ನು ಗುರುತಿಸಿ, ಅವರಿಗೆ ತರಬೇತಿ ನೀಡಲಾಗುವುದು.
ಆಸಕ್ತಿ, ಇರುವ ಕಲಾವಿದರು ತಮ್ಮ ಸ್ವವಿವರದೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಧಾರವಾಡ ಕಚೇರಿಗೆ ಖುದ್ದಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 2 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 0836-2442909 ನ್ನು ಸಂಪರ್ಕಿಸಬಹುದೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Share your comments