ನವಂಬರ್‌ 1 ರಂದು ಮತ್ತೇ ಜಾರಿಯಾಗಲಿದೆ ಯಶಸ್ವಿನಿ ಯೋಜನೆ..ಇದರ ಫಲಾನುಭವಿಗಳು ಯಾರು ಗೊತ್ತಾ..?

Maltesh
Maltesh
Yashasvini Yojana will be implemented again on November 1

ಯಶಸ್ವಿನಿ ಯೋಜನೆಯನ್ನು ಮತ್ತೇ ಜಾರಿಗೊಳಿಸುವುದಾರ ಸಿಎಂ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಾಕಷ್ಟು ವರ್ಷಗಳಿಂದ ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಲು ಚಿಂತನೆ ಇತ್ತು. ಕನ್ನಡ ರಾಜ್ಯೋತ್ಸವದಂದು ಇದನ್ನು ಮತ್ತೇ ಜಾರಿಗೊಳಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

ಏನಿದು ಯಶಸ್ವಿನಿ ಯೋಜನೆ ..?

ಯಶಸ್ವಿನಿ ಗ್ರಾಮೀಣ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆ. ಕರ್ನಾಟಕದ ರಾಜ್ಯದ ಗ್ರಾಮೀಣ ಸಹಕಾರಿಗಳಿಗಾಗಿಯೇ ರೂಪಗೊಂಡಿರುವ ಒಂದು ಸ್ವಯಂ-ನಿಧಿ ಶಸ್ತ್ರಚಿಕಿತ್ಸಾ ಯೋಜನೆ. ಈ ಯೋಜನೆಯಡಿ ಗ್ರಾಮೀಣ ಸಹಕಾರಿಯೊಬ್ಬರು ತಿಂಗಳಿಗೆ ಇಂತಿಷ್ಟರಂತೆ ನಿಗಧಿತ ಪ್ರಮಾಣದಲ್ಲಿ ಒಂದು ವರ್ಷದ ಅವಧಿಯಲ್ಲಿ ಯೋಜನೆಯಲ್ಲಿ ಒಳಗೊಂಡ ಯಾವುದೇ ಶಸ್ತ್ರ ಚಿಕಿತ್ಸೆಯನ್ನು ನಿಗದಿತ ಮಿತಿಯೊಳಗೆ, ಷರತ್ತು ಮತ್ತು ನಿಯಮಗಳಿಗೆ ಒಳಪಟ್ಟು ಟ್ರಸ್ಟಿನಿಂದ ಅಂಗೀಕೃತ ಯಾವುದೇ ಆಸ್ಪತ್ರೆಗಳಲ್ಲಿ ನಗದುರಹಿತವಾಗಿ ಪಡೆಯಬಹುದು .

ಇದನ್ನೂ ಓದಿರಿ: 1 ಕೋಟಿಗೂ ಹೆಚ್ಚು ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕೇಂದ್ರದಿಂದ ದೀಪಾವಳಿ ಬಂಪರ್‌ ಗಿಫ್ಟ್‌!

ಯೋಜನೆಯ ಫಲಾಭವಿಯಾಗಲು ಇರಬೇಕಾದ ಅರ್ಹತೆಗಳೇನು ?

ಈ ಯೋಜನೆಯ ಫಲಾನುಭವಿಯಾಗಲು ಕನಿಷ್ಟ 3 ತಿಂಗಳು ಮುಂಚಿತ ಅರ್ಹ ಗ್ರಾಮೀಣ ಸಹಕಾರ ಸಂಘವೊಂದರ ಸದಸ್ಯರಾಗಿರಬೇಕು. ಅಲ್ಲದೇ ಗ್ರಾಮೀಣ ಸಹಕಾರ ಸಂಘ/ಬ್ಯಾಂಕುಗಳೊಡನೆ ವ್ಯವಹರಿಸುತ್ತಿರುವ ಗ್ರಾಮೀಣ ಸ್ತ್ರೀಶಕ್ತಿ ಗುಂಪು, ಸ್ವ-ಸಹಾಯ ಗುಂಪಿನ ಸದಸ್ಯರು ಮತ್ತು ಅವರ ಕುಟುಂಬದ ಎಲ್ಲಾ ಸದಸ್ಯರು ಯೋಜನೆಯ ಫಲಾನುಭವಿಯಾಗಬಹುದು .

ಫಲಾನುಭವಿತ್ವ ಬಯಸುವವರು ಪಾವತಿಸಬೇಕಾದ ವಂತಿಗೆ ಹಣ ಎಷ್ಟು ?

ಫಲಾನುಭವಿಯಾಗಬಯಸುವ ಪ್ರತಿಯೊಬ್ಬರೂ ವರ್ಷಕ್ಕೆ ನಿಗದಿತ ಪ್ರಮಾಣದ ವಂತಿಗೆ ಹಣ ನೀಡಬೇಕು. :2014-15ನೇ ಸಾಲಿಗೆ ವಾರ್ಷಿಕ ವಂತಿಗೆ ರೂ.250/- ಆಗಿರುತ್ತದೆ.ಒಂದೇ ಕುಟುಂಬದ 5 ಅಥವಾ 5 ಕ್ಕಿಂತ ಹೆಚ್ಚು ಸದಸ್ಯರು ನೊಂದಣಿಯಾದಲ್ಲಿ ವಂತಿಗೆಯಲ್ಲಿ ಶೇ.15 ರಿಯಾಯಿತಿ ಇರುತ್ತದೆ .

ಯಶಸ್ವಿನಿ ಸದಸ್ಯರಾಗಲು ಸಹಕಾರ ಕುಟುಂಬದ ಎಲ್ಲಾ ಸದಸ್ಯರು ಸದಸ್ಯತ್ವವನ್ನು ಹೊಂದಿರಬೇಕೆ ?

ಕುಟುಂಬದ ಯಾವುದೇ ಒಬ್ಬ ಸದಸ್ಯನು/ಸದಸ್ಯಳು ಮೇಲೆ ತಿಳಿಸಿರುವ ಅರ್ಹ ಸಹಕಾರ ಸಂಘದ ಸದಸ್ಯನಾಗಿ/ಳಾಗಿ ಯಶಸ್ವಿನಿ ವರ್ಷದ ಮೊದಲ ದಿನ ಅಂದರೆ 01.06.2014ಕ್ಕೆ ಮೂರು ತಿಂಗಳಾಗಿದ್ದಲ್ಲಿ, ಕುಟುಂಬದ ಪ್ರತಿಯೊಬ್ಬ ಸದಸ್ಯನೂ ನಿಗದಿತ ಅವಧಿಯಲ್ಲಿ ವಾರ್ಷಿಕ ವಂತಿಗೆ ಸಲ್ಲಿಸುವ ಮೂಲಕ ಯಶಸ್ವಿನಿ ಯೋಜನೆಯ ಸೌಲಭ್ಯ ಪಡೆಯಬಹುದು0

ಕರ್ನಾಟಕದಲ್ಲಿ ಇನ್ನೂ 5 ದಿನ ಭಾರೀ ಮಳೆ; ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು ಗೊತ್ತೆ?

.

ಯೋಜನೆಯಲ್ಲಿ ಯಾರು ಯಾರು ಸದಸ್ಯರುಗಳು ಸೇರಿರುತ್ತಾರೆ ?

  • ಗ್ರಾಮೀಣ ಪ್ರದೇಶದಲ್ಲಿರುವ ಸಹಕಾರಿ ಸಂಘ/ಸಹಕಾರಿ ಬ್ಯಾಂಕುಗಳಲ್ಲಿ ಹಣಕಾಸಿನ ವಹಿವಾಟು ಹೊಂದಿರುವ ಸ್ವ-ಸಹಾಯ ಗುಂಪಿನ ಸದಸ್ಯರು ಕೂಡ ಯೋಜನೆಯ ಸೌಲಭ್ಯ ಪಡೆಯಬಹುದು.ನಗರ/ಪಟ್ಟಣ ಪ್ರದೇಶದಲ್ಲಿ ಸಹಕಾರಿ ಮೀನುಗಾರರು, ಸಹಕಾರಿ ಬೀಡಿ ಕಾರ್ಮಿಕರು ಮತ್ತು ಸಹಕಾರಿ ನೇಕಾರರು ಕೂಡ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. .

ಯಶಸ್ವಿನಿ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ದೊರೆಯುವ ಇತರ ಸೌಲಭ್ಯಗಳು ಯಾವುವು ?

ಟ್ರಸ್ಟನಿಂದ ಅಂಗೀಕೃತವಾದ ಆಸ್ಪತ್ರೆಗಳಲ್ಲಿ ಯಶಸ್ವಿನಿ ಫಲಾನುಭವಿಗಳು ಹೊರರೋಗಿ ಸಲಹೆಯನ್ನು ರೂ 100ಗಳನ್ನು ಸಾಮಾನ್ಯ ಪರೀಕ್ಷೆಗೆ ಮತ್ತು ವಿಶೇಷ ತಜ್ಙರಿಂದ ಪರೀಕ್ಷೆ ಮಾಡಿಸಿಕೊಳ್ಳಲು ರೂ.200ಗಳನ್ನು ಪಾವತಿಸಿ ಮೂರು ತಿಂಗಳವರೆಗೆ ಅದೇ ಕಾರ್ಡನಲ್ಲಿ ತಪಾಸಣೆ ಮಾಡಿಸಿಕೊಳ್ಳಬಹುದು. ಯಶಸ್ವಿನಿ ಕಾರ್ಡ್ ದಾರರು ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಕ್ಲಿನಿಕ್ ಅಥವಾ ಇನ್ನಾವುದೇ ಇನ್ವೆಸ್ಟಿಗೇಷನ್ ಗಳನ್ನು ಶೇ 25% ರಿಯಾಯಿತಿ ದರದಲ್ಲಿ ಪಡೆಯಬಹುದು

ಯಶಸ್ವಿನಿ ಯೋಜನೆಯಡಿಯಲ್ಲಿ ಒಳಪಡದ ಶಸ್ತ್ರಚಿಕಿತ್ಸೆಗಳು ಯಾವುವು ?

ಶಸ್ತ್ರಚಿಕಿತ್ಸೆ ಅವಶ್ಯವಿಲ್ಲದ ಯಾವುದೇ ವೈದ್ಯಕೀಯ ಚಿಕಿತ್ಸೆ ಯೋಜನೆಯಲ್ಲಿ ಲಭ್ಯವಿರುವುದಿಲ್ಲ. ಇದಲ್ಲದೇ ಚಿಕಿತ್ಸೆಗಳಾದ ಕೀಮೊಥೆರಪಿ, ರೇಡಿಯೋಥೆರಪಿ, ಜಾಯಿಂಟ್ ಬದಲಾವಣೆ, ಸುಟ್ಟು ಗಾಯಗಳು, ರಸ್ತೆ ಅಪಘಾತಗಳು, ಹಲ್ಲಿನ ಶಸ್ತ್ರಚಿಕಿತ್ಸೆ, ಚರ್ಮದ ಗ್ರಾಫ್ಟಿಂಗ್,ಸ್ಟಂಟ್, ಇಂಪ್ಲಾಂಟ್ಸ್ ಇತ್ಯಾದಿ ಸೌಲಭ್ಯಗಳು ಯೋಜನೆಯಲ್ಲಿ ಸೇರಿರುವುದಿಲ್ಲ. ಇಂತಹ ಅನಾರೋಗ್ಯಗಳಿಗೆ ಫಲಾನುಭವಿ ಪಡೆಯುವ ವೈದ್ಯಕೀಯ ಚಿಕಿತ್ಸೆ, ಔಷದೋಪಚಾರಗಳ ಹಾಗೂ ಶಸ್ತ್ರಚಿಕಿತ್ಸಾ ವೆಚ್ಚವನ್ನು ಫಲಾನುಭವಿಗಳೇ ಭರಿಸಬೇಕು

ಯಶಸ್ವಿನಿ ಯೋಜನೆಯಡಿಯಲ್ಲಿ ಇನ್ನೂ ಹೆಚ್ಚಿನ ದೊರೆಯುವ ಸೌಲಭ್ಯಗಳು ಯಾವುವು ?

ಈ ಕೆಳಗಿನ ತುರ್ತು ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳು ಕೆಲವೊಂದು ಷರತ್ತುಗಳಿಗೊಳಪಟ್ಟು ಲಭ್ಯವಿರುತ್ತವೆ. .  ಸಾಮಾನ್ಯ ಹೆರಿಗೆ, ನವಜಾತ ಶಿಶುವಿನ ಶುಶ್ರೂಷೆಕೃಷಿ ಉಪಕರಣಗಳಿಂದಾಗುವ ಅಪಘಾತಗಳು,ನೀರಿನಲ್ಲಿ ಮುಳುಗುವುದು, ನಾಯಿಕಡಿತ, ಹಾವು ಕಡಿತ, ಹೋರಿ ಇರಿತ ವಿದ್ಯತ್ ಆಘಾತಗಳು ಇತ್ಯಾದಿಗಳು.

ಯಶಸ್ವಿನಿ ಸದಸ್ಯರಿಗೆ ಮರುಪಾವತಿಯಾಗುವ ಮೊತ್ತವೆಷ್ಟು ?

ಒಂದು ವರ್ಷದಲ್ಲಿ ಒಬ್ಬ ಸದಸ್ಯ ಒಂದು ಬಾರಿ ಆಸ್ಪತ್ರೆಗೆ ದಾಖಲಾದರೆ ಆತ ರೂ. 1.25 ಗರಿಷ್ಠ ಮಿತಿಯಲ್ಲಿ ಚಿಕಿತ್ಸೆ ಪಡೆಯಬಹುದು, ಅದೇ ವರ್ಷದಲ್ಲಿ ಆ ವ್ಯಕ್ತಿ ಅನೇಕ ಬಾರಿ ಶಸ್ತ್ರ ಚಿಕಿತ್ಸೆ ಪಡೆಯುವ ಪ್ರಕರಣಗಳಲ್ಲಿ ಗರಿಷ್ಠ ಮಿತಿ ರೂ2.00 ಲಕ್ಷದವರೆಗೆ ಚಿಕಿತ್ಸೆ ಪಡೆಯಬಹುದು .

Published On: 12 October 2022, 02:30 PM English Summary: Yashasvini Yojana will be implemented again on November 1

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.