ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಇಂದಿನಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆ ಸೇರಿದಂತೆ ರಾಜ್ಯಾದ್ಯಂತ ಎಲ್ಲ ಸರ್ಕಾರಿ ಕಚೇರಿಗಳ ಸೇವೆಗಳ ಮೇಲೆ ತೀವ್ರ ಪರಿಣಾಮ ಬೀರಿದೆ.
7ನೇ ವೇತನ ಆಯೋಗದ ವರದಿ ಮತ್ತು ನೌಕರರ ಹಿತಾಸಕ್ತಿಗಳಿಗೆ ಅನುಗುಣವಾಗಿ ಸರಕಾರ ಆದೇಶ ಹೊರಡಿಸದ ಹೊರತು ಮುಷ್ಕರ ಕರೆ ವಾಪಸ್ ಪಡೆಯುವದಿಲ್ಲ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದ್ದಾರೆ.
ಶೇ 90 ರಷ್ಟು ಸಬ್ಸಿಡಿಯಲ್ಲಿ ಕೃಷಿ ಉತ್ಪನ್ನಗಳ ಸಂಸ್ಕರಣಾ ಸಲಕರಣೆಗಳಿಗಾಗಿ ಅರ್ಜಿ ಆಹ್ವಾನ
ಇನ್ನು ಮಧ್ಯಾಹ್ನದೊತ್ತಿಗೆ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಿ ನೌಕರರ ಬೇಡಿಕೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಬಳಿಕ ಮಾತನಾಡಿ "ಸರ್ಕಾರಿ ನೌಕರರಿಗೆ ಮಧ್ಯಂತರವಾಗಿ ಶೇ 17ರಷ್ಟು ವೇತನ ಹೆಚ್ಚಳ ಮಾಡುವ ತೀರ್ಮಾನ ಆಗಿದೆ.
PMKSY ಸಬ್ಸಿಡಿಗೆ ಅರ್ಜಿ ಆಹ್ವಾನ | SSLC, PUC ವಿದ್ಯಾರ್ಥಿಗಳಿಗೆ Exam ನಲ್ಲಿ ಈ ಬಾರಿಯು ಕೃಪಾಂಕ
ಈ ಕುರಿತು ಆದೇಶ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ." ಎಂದು ತಿಳಿಸಿದ್ದಾರೆ. ಇತ್ತ ಅಧಿಕೃತ ಆದೇಶ ಹೊರ ಬೀಳುವವರೆಗೂ ಮುಷ್ಕರ ವಾಪಸ್ ಪಡೆಯುವುದಿಲ್ಲ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದ್ದಾರೆ.
Share your comments