ಕಳೆದ ಐದು ವರ್ಷಗಳಲ್ಲಿ ಬರೋಬ್ಬರಿ 9018 ಮಕ್ಕಳು ಕಾಣೆಯಾಗಿದ್ದಾರೆ.
ಇದನ್ನು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.
ಹೌದು ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 9,018 ಮಕ್ಕಳ ನಾಪತ್ತೆ ಮತ್ತು ಅಪಹರಣ ಪ್ರಕರಣಗಳು ದಾಖಲಾಗಿವೆ ಎಂದು ಅವರು ತಿಳಿಸಿದ್ದಾರೆ.
ಸೋಮವಾರ ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಅವರು ಮಾತನಾಡಿದ್ದಾರೆ.
ಈ ಹಿಂದೆ ನಾಪತ್ತೆ ಮತ್ತು ಅಪಹರಣ ಪ್ರಕರಣ ವರದಿಯೇ ಆಗುತ್ತಿರಲಿಲ್ಲ. ಮಕ್ಕಳ ಮೇಲಿನ ಅಪರಾಧ ಪ್ರಕರಣಗಳ
ಅಂಕಿ ಅಂಶಗಳನ್ನು ವಿಶ್ಲೇಷಿಸಿದರೆ ಸರಾಸರಿ ಶೇ 10ರಿಂದ 20ರಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.
Aadhar Card -Sim Card Link ಸಿಮ್ ಕಾರ್ಡ್‌ಗೂ ಆಧಾರ್ ಕಾರ್ಡ್ ಜೋಡಣೆ: ಕಾರಣ ಏನು ಗೊತ್ತೆ ?
12,592 ಐದು ವರ್ಷಗಳಲ್ಲಿ ಪೋಕ್ಸೊ ಪ್ರಕರಣಗಳು ಸಹ ವರದಿಯಾಗಿವೆ.
ಅತ್ಯಾಚಾರ, ಪೋಕ್ಸೊ ಪ್ರಕರಣಗಳ ತನಿಖೆಯನ್ನು 60 ದಿನಗಳ ಕಾಲಮಿತಿಯಲ್ಲಿ ತನಿಖೆಯನ್ನು ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದರು.
ಇನ್ನು ಈಗಾಗಲೇ 4000 ಸಿಸಿಟಿವಿ ಕ್ಯಾಮೆರಾಗಳನ್ನು ಅಳಡಿಸಲಾಗಿದೆ. ಇದೀಗ ಪ್ರತಿ ಠಾಣೆಯಲ್ಲೂ ಕನಿಷ್ಠ ಮೂವರು ಮಹಿಳಾ ಕಾನ್‌ಸ್ಟೆಬಲ್‌ಗಳಿದ್ದಾರೆ.
Pension ಪಿಂಚಣಿದಾರರಿಗೆ ಈ ರಾಜ್ಯದ ಸರ್ಕಾರದಿಂದ ಅಚ್ಚರಿ!
ನಿರ್ಭಯಾ ನಿಧಿ ಅಡಿಯಲ್ಲಿ 500ಕೋಟಿ ವೆಚ್ಚದಲ್ಲಿ 3,200 ಸ್ಥಳಗಳಲ್ಲಿ 7500 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ನಾಗರಿಕ ವಿಮಾನ ತಯಾರಿಕಾ ಘಟಕ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಸಂಪೂರ್ಣ ವಾಣಿಜ್ಯ ನಾಗರಿಕ ವಿಮಾನ ತಯಾರಿಕಾ ಘಟಕಗಳ ಸ್ಥಾಪನೆ ಮಾಡುವ ಉದ್ದೇಶವನ್ನು ಹಾಕಿಕೊಳ್ಳಲಾಗಿದೆ ಎಂದು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿಳಿಸಿದ್ದಾರೆ.
ಸೋಮವಾರ ವಿಧಾನಮಂಡಲದಲ್ಲಿ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮಂಡಿಸಿದ ಮೇಲೆ ಅವರು ಮಾತನಾಡಿದರು.
ಹಣದುಬ್ಬರ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್ ಮಾಡ್ತಿದೆ ಕೇಂದ್ರ; ಪೆಟ್ರೋಲ್, ಡಿಸೇಲ್ ದರ ಇಳಿಕೆ ?!
ಇದೀಗ ಭಾರತದಲ್ಲಿ ರಕ್ಷಣಾ ಮತ್ತು ಏರೋಸ್ಪೇಸ್‌ನಲ್ಲಿ ಬಳಸಲಾಗುವ ಶೇ.65 ರಷ್ಟು ಭಾಗಗಳನ್ನು ಕರ್ನಾಟಕದಲ್ಲಿ ತಯಾರಿಸಲಾಗುತ್ತದೆ.
ಸಂಪೂರ್ಣ ವಾಣಿಜ್ಯ ವಿಮಾನ ತಯಾರಿಕಾ ಘಟಕ ಕರ್ನಾಟಕದಲ್ಲಿ ಸ್ಥಾಪನೆಯಾಗಬೇಕೆಂಬುದು ನನ್ನ ಆಸೆ.
ಈ ಸಂಬಂಧ ನಾವು ಖಾಸಗಿ ವಿಮಾನ ತಯಾರಕರೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದಿದ್ದಾರೆ.
ಸಾಂಕ್ರಾಮಿಕ ರೋಗದ ಹೊರತಾಗಿಯೂ, ಕರ್ನಾಟಕಕ್ಕೆ ಹೂಡಿಕೆಗಳು ಹೆಚ್ಚಿವೆ. ಕರ್ನಾಟಕದಲ್ಲಿ ವ್ಯಾಪಾರ ಮಾಡುವುದು ಸುಲಭವಾಗಿರುವುದು
ಹಾಗೂ ಕೈಗಾರಿಕಾ ಸ್ನೇಹಿ ರಾಜ್ಯವಾಗಿರುವುದಾಗಿದೆ.
ಇದರಿಂದಾಗಿ ಹೆಚ್ಚು ವಿದೇಶಿ ನೇರ ಬಂಡವಾಳ ಬರುತ್ತಿದ್ದು, ಹೂಡಿಕೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ.
ಉದ್ಯೋಗ ಸೃಷ್ಟಿಸುವ ಕಂಪನಿಗಳಿಗೆ ನಾವು ಪ್ರೋತ್ಸಾಹ ನೀಡುತ್ತೇವೆ ಎಂದರು.
Gold Rate Today ಚಿನ್ನದ ಬೆಲೆಯಲ್ಲಿ ಮುಂದುವರಿದ ಏರುಪೇರು!
ರಾಜ್ಯ ಸರ್ಕಾರವು ಏರೋಸ್ಪೇಸ್ ಕ್ಷೇತ್ರದಲ್ಲಿ 3,500 ಕೋಟಿ ರೂಪಾಯಿ ಮೌಲ್ಯದ ಒಪ್ಪಂದ ಪತ್ರಕ್ಕೆ ಸಹಿ ಹಾಕಿದೆ.
ನಾವು ವಿಮಾನಗಳ ಬಿಡಿ ಭಾಗಗಳನ್ನು ತಯಾರಿಸುವುದಾದರೆ, ವಿಮಾನವನ್ನೂ ಕೂಡ ಸಿದ್ಧಪಡಿಸುವ ಸಾಮರ್ಥ್ಯ ಹೊಂದಿರುತ್ತೇವೆ.
ಈಗಾಗಲೇ ಏರ್‌ಬಸ್ ಮತ್ತು ಬೋಯಿಂಗ್‌ನೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದರು.
ಅಲ್ಲದೇ ಕರಾವಳಿಯಲ್ಲಿ ಮರೀನಾ ಅಭಿವೃದ್ಧಿ ಕುರಿತು ವಿವರಿಸಿದ ಅವರು, ರಾಜ್ಯ ಸರ್ಕಾರ ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ನಿಯಮಗಳನ್ನು ಸಡಿಲಿಸಿದೆ.
ಇದು ಕರಾವಳಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿರೀಕ್ಷೆ ಹೊಂದಿದೆ.
ಇದನ್ನು ಈ ವರ್ಷವೇ ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
Share your comments