ಕೃಷಿ ಇಲಾಖೆಯು 20202-21ನೇ ಸಾಲಿನ ತಾಡಪಲ (tarpaulin )ವಿತರಣೆಗಾಗಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು ಯಾದಗಿರಿ ಜಿಲ್ಲೆಯಲ ಸುರಪುರ ಹೋಬಳಿ ವ್ಯಾಪ್ತಿಯ ರೈತರು ಹಸನಾಪುರ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಏಪ್ರೀಲ್ 10 ಕೊನೆಯ ದಿನವಾಗಿದೆ. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಫಲಾನುಭವಿಗಳು ಆದಾರ್ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್ ನೀಡವುದು ಕಡ್ಡಾಯವಾಗಿದೆ. ನಿಗದಿಗಿಂತಲು ಫಲಾನುಭವಿಗಳು ಹೆಚ್ಚಾದಲ್ಲಿ ಲಾಟ್ರಿ ಮೂಲಕ ಫಲಾನುಭವಿಗಳ ಆಯ್ಕೆ ಮಾಡಲಾಗುವುದು ಎಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಡಾ. ಭೀಮರಾಯ ಅವಾಲ್ದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳೆಗಳನ್ನು ಬಿಸಿಲಿಗೆ ಒಣಗಿಸಲು ಸಹ ತಾಡಪತ್ರಿಯ ಅವಶ್ಯಕತೆ ಹೆಚ್ಚಿರುತ್ತದೆ. ಹಾಗಾಗಿ ಸರ್ಕಾರದಿಂದ ಸಿಗುವ ಸೌಲಭ್ಯದಲ್ಲಿ ತಾಡಪತ್ರಿ ಪಡೆದುಕೊಂಡರೆ ನಿಮ್ಮ ದವಸಧಾನ್ಯಗಳ ರಕ್ಷಣೆಗೂ ಸಹಾಯವಾಗುತ್ತದೆ. ಕೊನೆಯ ದಿನದವರೆಗೆ ಕಾಯದೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ತಾಡಪತ್ರಿ ಪಡೆಯಬಹುದು.
ಹನಿ ನೀರಾವರಿ ಅಳವಡಿಸಲು ಯಾದಗಿರಿ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ
ಪ್ರಧಾನ ಮಂತ್ರಿಗಳ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ತುಂತುರು ನೀರಾವರಿ ಮತ್ತು ಹನಿ ನೀರಾವರಿ ಘಟಕ ಅಳವಡಿಕೆಗೆ ಯಾದಗಿರಿ ಜಿಲ್ಲೆಯ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಹಾಗೂ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಂಟಿ ಕೃಷಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೋಟಗಾರಿಕಾ ಬೆಳೆಗಳಿಗೆ ಹಾಗೂ ಕೃಷಿ ಬೆಳೆಗಳಿಗೆ ಸೂಕ್ಷ್ಮ ನೀರಾವರಿಯನ್ನು ಅಳವಡಿಸಲು ರೈತರ ನೀರಾವರಿ ಉಪಕರಣಗಳಿಗೆ ಶೇ. 90 ರಷ್ಟು ಸಹಾಯಧನವನ್ನು ಸರ್ಕಾರ ನೀಡುತ್ತದೆ. ಹತ್ತಿರದ ಕೃಷಿ ತಾಲೂಕು ಕೇಂದ್ರ ಅಥವಾ ರೈತ ಸಂಪರ್ಕ ಕೇಂದ್ರಗಳಿಂದ ಅರ್ಜಿ ಪಡೆದು ಸಂಬಂಧಿಸಿದ ದಾಖಲೆಗಳನ್ನು ಒದಗಿಸಿದ ನಂತರ 40 ದಿನದೊಳಗೆ ಈ ಸಹಾಯಧನ ಮಂಜೂರಾಗುತ್ತದೆ.
ತೋಟಗಾರಿಕೆ ಮಾಡುತ್ತಿರುವ ಸಣ್ಣ ರೈತರಿಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ನೀಡುವ ಸಹಾಯಧನ ಅನುಕೂಲವಾಗುತ್ತದೆ.ಆರ್ಥಿಕವಾಗಿ ಹಿಂದುಳಿದ ಜನರಿಗೆ ನೀರಾವರಿ ಮಾಡಲು ಹಣವಿಲ್ಲದೆ ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ರೈತರಿಗೆ ಅನುಕೂಲವಾಗಲೆಂದು ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ. ಗ್ರಾಮಾಂತರ ರೈತರು ನೀರಾವರಿ ಮಾಡಲು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಸಲ್ಲಿಸಿ ತೋಟಗಾರಿಕೆ ಇಲಾಖೆಯಿಂದ ಸಿಗುವ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಬಹುದು.
Share your comments