ರೇಷ್ಮೆ ಕೃಷಿ ಇಲಾಖೆಯಿಂದ 2019-20ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಅರ್ಹ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ರೈತರು ಕನಿಷ್ಠ 1 ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಸಾಕಾಣಿಕಾ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆ.ಜಿ ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆ.ಜಿ ಗಿಂತ ಕಡಿಮೆ ಇರಬಾರದು.
ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್ ಬುಕ್, ರೇಷ್ಮೆ ಮೊಟ್ಟೆ/ಬಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿಗಳನ್ನು ಹೊಂದಿರಬೇಕು.
ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿಗಳು ಅಥವಾ ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅಗತ್ಯ ಮಾಹಿತಿಗಳನ್ನು ದಾಖಲಾತಿಗಳೊಂದಿಗೆ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೆ.25 ರೊಳಗಾಗಿ ರೇಷ್ಮೆ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು.
Share your comments