1. ಸುದ್ದಿಗಳು

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿಗಾಗಿ ಅರ್ಜಿ ಆಹ್ವಾನ

Kalmesh T
Kalmesh T
Application Invitation for 10 Months Horticultural Training for Farmers Children

Horticultural Training: 2023-24 ನೇ ಸಾಲಿನಲ್ಲಿ ಜಿಲ್ಲೆಯ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿಗಾಗಿ ಅರ್ಜಿ ಆಹ್ವಾನ ಮಾಡಲಾಗಿದೆ.

10 Months Horticultural Training: ಧಾರವಾಡ ಜಿಲ್ಲೆಯ ರೈತ ಮಕ್ಕಳಿಗೆ 2023-24 ನೇ ಸಾಲಿಗೆ, 10 ತಿಂಗಳ ಅವಧಿಗೆ ಅಂದರೆ ಜೂನ್.1, 2023 ರಿಂದ ಮಾರ್ಚ್ 30, 2024 ರ ವರೆಗೆ ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 5 ಮಹಿಳೆಯರಿಗೆ ಹಾಗೂ 10 ಪುರುಷರಿಗೆ ಸೇರಿ ಒಟ್ಟು-15 ಅಭ್ಯರ್ಥಿಗಳಿಗೆ ತೋಟಗಾರಿಕಾ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿಗಳನ್ನು ಧಾರವಾಡ ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರು, ಜಿಲ್ಲಾ ಪಂಚಾಯತ, ಧಾರವಾಡ ಇವರ ಕಛೇರಿಯಲ್ಲಿ ಸಲ್ಲಿಸಬೇಕು.

ಅರ್ಜಿ ಶುಲ್ಕದ ಮೊತ್ತ ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 30/- ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.15/- ಮೌಲ್ಯದ ಇಂಡಿಯನ್ ಪೋಸ್ಟಲ್ ಆರ್ಡರ್ ಅಥವಾ ಬ್ಯಾಂಕ್ ಡಿಮ್ಯಾಂಡ್ ಡ್ರಾಫ್ಟ್‍ನ್ನು ತೋಟಗಾರಿಕೆ ಉಪನಿರ್ದೇಶಕರು (ಜಿಪಂ) ಧಾರವಾಡ ರವರ ಹೆಸರಿನಲ್ಲಿ ಪಡೆದು, ಅರ್ಜಿ ಜೊತೆಗೆ ಲಗತ್ತಿಸಬೇಕು.

ಅರ್ಜಿ ಫಾರಂಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ) ಸ್ಟೇಷನ್ ರಸ್ತೆ, ಧಾರವಾಡ ರವರ ಕಛೇರಿಯಲ್ಲಿ ಅಥವಾ ಇಲಾಖಾ ವೆಬ್‍ಸೈಟ್ https://horticulturedir.karnataka.gov.in ನಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿ ಪೂರ್ಣ ಪ್ರಮಾಣದ ದಾಖಲಾತಿಗಳೊಂದಿಗೆ ಮೇ.22 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ) ಧಾರವಾಡ ಇವರ ಕಛೇರಿ ದೂ.ಸಂ:0836-2957801 ಸಂಪರ್ಕಿಸಬೇಕೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

* ರೈತರಿಂದ ರೈತರಿಗೆ ಬಿತ್ತನೆ ಬೀಜ ವಿತರಣೆ; ಗುಣಮಟ್ಟ ಪರಿಶೀಲನೆಗೆ ಕಳುಹಿಸಿ

ಪ್ರತಿ ಹಂಗಾಮಿನಲ್ಲಿ ರೈತರು ಗುಣಮಟ್ಟದ ಬಿತ್ತನೆ ಬೀಜಗಳನ್ನು ಬಳಸುವ ಅವಶ್ಯಕತೆ ಇರುತ್ತದೆ. ಸ್ವಕೀಯ ಪರಾಗಸ್ಪರ್ಶ ಜಾತಿಯ ಬೆಳೆಗಳ ಬಿತ್ತನೆ ಬೀಜಗಳನ್ನು ರೈತರು ರೈತರಿಂದಲೇ ಪಡೆಯಬಹುದಾಗಿದೆ.

ರೈತರು ತಮ್ಮ ದಾಸ್ತಾನಿನಲ್ಲಿರುವ ಉತ್ತಮ ಗುಣಮಟ್ಟದ ಮತ್ತು ಬಿತ್ತನೆಗೆ ಯೋಗ್ಯವಾದ ಬೆಳೆಗಳ, ತಳಿಗಳ ಬೀಜದ ಮಾದರಿಯನ್ನು ಧಾರವಾಡ ಬೀಜ ಪರೀಕ್ಷಾ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಬಹುದಾಗಿದೆ.

ಆದ್ದರಿಂದ ರೈತರು ಪ್ರತಿ ಬೀಜ ಮಾದರಿಗೆ 5 ರೂಪಾಯಿ ಶುಲ್ಕವನ್ನು ಭರಿಸಿ, ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರದ ಮುಖಾಂತರ ಬಿತ್ತನೆ ಗುಣಮಟ್ಟದ ವಿಶ್ಲೇಷಣೆಗಾಗಿ ಈ ಪ್ರಯೋಗಾಲಯಕ್ಕೆ ಕಳುಹಿಸಿಕೊಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಹತ್ತಿರದ ಕೃಷಿ ಇಲಾಖೆ ಕಛೇರಿಯನ್ನು ಸಂಪರ್ಕಿಸಬಹುದೆಂದು ಧಾರವಾಡ ಬೀಜ ಪರೀಕ್ಷಾ ಪ್ರಯೋಗಾಲಯದ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೇಸಿಗೆಯಲ್ಲಿ ಹೈನುರಾಸುಗಳ ನಿರ್ವಹಣೆ ಕುರಿತು ಮಾಹಿತಿ

Published On: 22 May 2023, 05:52 PM English Summary: Application Invitation for 10 Months Horticultural Training for Farmers Children

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.