ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನಲ್ಲಿ ಅರಿವು ಸಾಲ ಯೋಜನೆಯಡಿ ಸಿ.ಇ.ಟಿ./ನೀಟ್ ಪರೀಕ್ಷೆಗೆ ಹಾಜರಾಗಿ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಸೇರಬಯಸುವ ಅರ್ಹ ವಿದ್ಯಾರ್ಥಿಗಳಿಗೆ ಗರಿಷ್ಠ 75,000 ರೂ. ಗಳವರೆಗೆ (ಶೇ. 2 ರಷ್ಟು ಸೇವಾ ಶುಲ್ಕ ಆಧಾರದ ಮೇಲೆ) ಹೊಸದಾಗಿ ಸಾಲ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಬೌದ್ಧರು, ಪಾರ್ಸಿ ಮತ್ತು ಆಂಗ್ಲೋ ಇಂಡಿಯನ್ ಜನಾಂಗಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಹ ವಿದ್ಯಾರ್ಥಿಗಳ ನಿಗಮದ www.kmdc.kar.nic.in/Arivu2 ವೆಬ್ಸೈಟ್ನಲ್ಲಿ ಸೆಪ್ಟೆಂಬರ್ 18 ರೊಳಗಾಗಿ ಅರ್ಜಿ ಸಲ್ಲಿಸಬೇಕು. ನಂತರ ವಿದ್ಯಾರ್ಥಿಗಳು ಅರ್ಜಿಯ ಪ್ರಿಂಟ್ಔಟ್ನ್ನು ತೆಗೆದುಕೊಂಡು ಕ್ಯೂಆರ್ ಕೋಡದೊಂದಿಗೆ ಇತರ ಅವಶ್ಯಕ ದಾಖಲಾತಿಗಳೊಂದಿಗೆ ಆಯಾ ಜಿಲ್ಲಾ ನಿಗಮದ ಜಿಲ್ಲಾ ಕಚೇರಿಯಲ್ಲಿ ಸಲ್ಲಿಸಬೇಕು. ನಂತರ ಅರ್ಹ ವಿದ್ಯಾರ್ಥಿಗಳಿಗೆ ಭೋಧನಾ ಶುಲ್ಕಕ್ಕಾಗಿ ಮಂಜೂರು ಮಾಡುವ ಸಾಲವನ್ನು ನೇರವಾಗಿ (KEA) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಪಾವತಿಸಲಾಗುತ್ತದೆ.
ವಿದ್ಯಾರ್ಥಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ, ಆಯಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ),ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
Share your comments