1. ಸುದ್ದಿಗಳು

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

ಅಲ್ಪಸಂಖ್ಯಾಂತರ ಕಲ್ಯಾಣ ಇಲಾಖೆಯಿಂದ ಆಳಂದ, ಅಫಜಲಪುರ, ಚಿತ್ತಾಪುರ ಜೇವರ್ಗಿ, ಕಲಬುರಗಿ ಹಾಗೂ ಸೇಡಂ ತಾಲೂಕುಗಳಲ್ಲಿರುವ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿಯಿರುವ ಸ್ಥಾನಗಳನ್ನು ಭರ್ತಿ ಮಾಡಲು ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಹಿಮೂದ್  ಅವರು ತಿಳಿಸಿದ್ದಾರೆ.

6ನೇ ತರಗತಿಯಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಆಯಾ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2021ರ ಮಾರ್ಚ್ 10 ರೊಳಗಾಗಿ ಸಂಬಂಧಪಟ್ಟ ಆಯಾ ತಾಲೂಕಿನ ಮಾಹಿತಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ಕೋವಿಡ್-19 ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಅರ್ಜಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಅಥವಾ ಆಳಂದ ಮೊಬೈಲ್ ಸಂಖ್ಯೆ-6362197585, ಅಫಜಲಪೂರ-7899755427, ಚಿತ್ತಾಪೂರ-9741168681, ಜೇವರ್ಗಿ-9535775141, ಕಲಬುರಗಿ-7899755427 ಹಾಗೂ ಸೇಡಂ-7892369798 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ವಿವಿಧ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ

2019-20 ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯ ವಿಶೇಷ ಕೇಂದ್ರೀಯ ನೆರವಿನಿಂದ ಕೆಳಕಂಡ ವಿವಿಧ ಕೌಶಲ್ಯ ತರಬೇತಿಗಾಗಿ ಕಲಬುರಗಿ ಜಿಲ್ಲೆಯ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಲೆಕ್ಕಶಾಸ್ತ್ರ ಮತ್ತು ಟ್ಯಾಲಿ, ಕಂಪ್ಯೂಟರ್ ಪ್ರೊಗ್ರಾಮ್, ಕಾಲ್ ಸೆಂಟರ್ ತರಬೇತಿ ಹಾಗೂ ಫ್ಯಾಶನ್ ಡಿಸೈನ್ ಟೈಲರಿಂಗ್ ಕೋರ್ಸ್‍ಗಳಿಗೆ ತರಬೇತಿ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಮಾರ್ಚ್ 3 ರೊಳಗಾಗಿ ಕಲಬುರಗಿಯ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯದಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278660ಗೆ  ಸಂಪರ್ಕಿಸಲು ಕೋರಲಾಗಿದೆ.

Published On: 27 February 2021, 08:13 AM English Summary: Application invitation for various skill training

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.