ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಕಾರ್ಯಕ್ರಮ ಯೋಜನೆಗಳಡಿ ಶಿಕ್ಷಣಕ್ಕಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ.
ಅವಳಿ ನಗರದಲ್ಲಿ ವಾಸಿಸುತ್ತಿರುವ ಐಐಟಿ/ಡಿಪ್ಲೊಮಾ ಅಥವಾ ವೃತ್ತಿಪರ ಕೋರ್ಸ್ ಅನ್ನು ಖಾಸಗಿ ವಿದ್ಯಾ ಸಂಸ್ಥೆಗಳಲ್ಲಿರುವ ವಿದ್ಯಾರ್ಥಿಗಳಿಗೆ 20 ಸಾವಿರ, ಟೂಲ್ ಕಿಟ್ ಖರೀದಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನಕ್ಕೆ ತರಬೇತಿ ಪಡೆಯವ ವಿದ್ಯಾರ್ಥಿಗಳಿಗೆ 30 ಸಾವಿರ, ಶೌಚಾಲಯ ನಿರ್ಮಾಣಕ್ಕೆ 20 ಸಾವಿರ, ಬಿಪಿಎಲ್ ಕಾರ್ಡ್ ಹೊಂದಿರುವ ಎಸ್ಸಿ ಹೆಣ್ಣು ಮಕ್ಕಳಿಗೆ ಬ್ಯೂಟಿಷನ್ ಕಿಟ್ ಖರೀದಿಗೆ 25 ಸಾವಿರ, ವಾಹನ ತರಬೇತಿ ಹಾಗೂ ಚಾಲನಾ ಪರವಾನಗಿ ಹೊಂದಿದ ನಿರುದ್ಯೋಗಿ ಯುವಕರಿಗೆ ರಿಕ್ಷಾ ಖರೀದಿಗೆ 50 ಸಾವಿರ, ಬಿಪಿಎಲ್ ಕಾರ್ಡ್ ಹೊಂದಿರುವ ಎಸ್ಸಿ ಫಲಾನುಭವಿಗಳಿಗೆ ಮನೆ ದುರಸ್ತಿಗೆ 50 ಸಾವಿರ ಹಾಗೂ ಬಿ.ಇ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಖರೀದಿಗೆ 50 ಸಾವಿರ ಸಹಾಯಧನ ನೀಡಲಾಗುವುದು.
ಪಾಲಿಕೆ ವಲಯ ಕಚೇರಿಗಳಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ಮೇ 3ರ ಸಂಜೆ 5ರೊಳಗೆ ವಲಯ ಕಚೇರಿಗಳಿಗೆ ಸಲ್ಲಿಸಬೇಕು ಎಂದು ಆಯುಕ್ತ ಡಾ. ಸುರೇಶ ಇಟ್ನಾಳ್ ತಿಳಿಸಿದ್ದಾರೆ.
Share your comments