ಕೃಷಿ ಆಧಾರಾತ ಹಾಗೂ ಇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಮಹಿಳೆಯರಿಗೆ ಉದ್ಯೋಗಿನಿ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ನೀಡಲಾಗುತ್ತಿದೆ. ಸ್ವಯಂ ಉದ್ಯೋಗ ಕೈಗೊಳ್ಳಲು ಜ್ಞಾನ ಹೊಂದಿದವರಿಗೆ ಹಾಗೂ ಯಾವುದಾದರೂ ಚಟುವಟಿಕೆಯಲ್ಲಿ ತರಬೇತಿ ಪಡೆಯದವರಿಗೆ ವಿಶೇಷ ಸಾಲ ನೀಡಲಾಗುವುದು. ಅದು ಹೇಗೆ ಅಂದುಕೊಂಡಿದ್ದೀರಾ.. ಇಲ್ಲಿದೆ ಮಾಹಿತಿ
ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗಾಗಿ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಿದೆ.
ಪರಿಶಿಷ್ಟ ಜಾತಿ/ಪಂಗಡದ ಮಹಿಳೆಯರಿಗೆ ಸಾಲದ ಗರಿಷ್ಠ ಮಿತಿಯನ್ನು 1ಲಕ್ಷದಿಂದ 3 ಲಕ್ಷಕ್ಕೆ, ಸಹಾಯಧನದ ಮೊತ್ತವನ್ನು ಸಾಲದ ಮೊತ್ತದ ಶೇ 50ರಷ್ಟಕ್ಕೆ ಹಾಗೂ ವಿಶೇಷ ವರ್ಗ, ಸಾಮಾನ್ಯ ವರ್ಗದ ಮಹಿಳೆಯರಿಗೆ ಸಾಲದ ಗರಿಷ್ಠ ಮಿತಿಯನ್ನು 1ಲಕ್ಷದಿಂದ 3 ಲಕ್ಷಕ್ಕೆ, ಸಹಾಯಧನದ ಮೊತ್ತವನ್ನು ಸಾಲದ ಮೊತ್ತದ ಶೇ 30ರಷ್ಟಕ್ಕೆ ನಿಗದಿಪಡಿಸಲಾಗಿದೆ.
ಅರ್ಜಿದಾರರು 18ರಿಂದ 55ವರ್ಷ ವಯಸ್ಸಿನೊಳಗಿರಬೇಕು. ಆಧಾರ್ ಪ್ರತಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಪರಿಶಿಷ್ಟ ಜಾತಿ/ಪಂಗಡದ ಮಹಿಳೆಯರ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ, ವಿಶೇಷ ವರ್ಗ ಮತ್ತು ಸಾಮಾನ್ಯ ವರ್ಗದ ಮಹಿಳೆಯರ ಕುಟುಂಬದ ವಾರ್ಷಿಕ ಆದಾಯ 1.50 ಲಕ್ಷ ಮೀರಿರಬಾರದು.
ವಿಧವಾ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣ ಪತ್ರ, ಆದಾಯ, ಜಾತಿ ದೃಢೀಕರಣ ಪತ್ರ ಹಾಗೂ ಈಚಿನ ಭಾವಚಿತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಬ್ಯಾಂಕಿನಿಂದ ಸಾಲ ಮಂಜೂರಾತಿ ಪತ್ರ ನೀಡಲು ಒಪ್ಪಿದ್ದಲ್ಲಿ ಸಹಾಯಧನ ಬಿಡುಗಡೆ ಮಾಡಲಾಗುತ್ತದೆ. ಅಪೂರ್ಣವಾದ ಅರ್ಜಿ ಪರಿಗಣಿಸಲಾಗುವುದಿಲ್ಲ ಹಾಗೂ ಅಂತಹ ಅರ್ಜಿದಾರರಿಗೆ ಆಯ್ಕೆ ಸಂದರ್ಶನ ಪತ್ರವನ್ನು ಕಳುಹಿಸಲಾಗುವುದಿಲ್ಲ.
ಕೃಷಿ ಆಧರಿತ ಹಾಗೂ ಇತರೆ ಚಟುವಟಿಕೆಗಳಿಗೆ ಸಾಲ ನೀಡಲಾಗುತ್ತದೆ. ಅರ್ಜಿದಾರರು ಸೌಲಭ್ಯ ಪಡೆಯಲು ಇಚ್ಛಿಸುವ ಸ್ವಯಂ ಉದ್ಯೋಗದಲ್ಲಿ ಸಾಕಷ್ಟು ಜ್ಞಾನ ಮತ್ತು ಅನುಭವ ಪಡೆದಿರಬೇಕು. ಯಾವುದೇ ಚಟುವಟಿಕೆಯಲ್ಲಿ ತರಬೇತಿ ಪಡೆದವರಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ. ಪರಿಶಿಷ್ಟ ಜಾತಿ/ಪಂಗಡ, ಅಲ್ಪಸಂಖ್ಯಾತರು, ವಿಧವೆಯರು, ಸಂಕಷ್ಟಕ್ಕೊಳಗಾದ ಮಹಿಳೆಯರು ಹಾಗೂ ಅಂಗವಿಕಲ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ.
ಅರ್ಜಿಯನ್ನು ಚಾಮರಾಜನಗರ ಜಿಲ್ಲೆಯ ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರಿಂದ ಉಚಿತವಾಗಿ ಪಡೆದು, ಭರ್ತಿ ಮಾಡಿ ಆಯಾ ಕಚೇರಿಗೆ ಇದೇ 30ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
Share your comments