1. ಸುದ್ದಿಗಳು

ರಾಜ್ಯದಲ್ಲಿ ಖಾಲಿಯಿರುವ 4000 ಪೊಲೀಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

job notification

ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 4000 ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 26ರೊಳಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಅರ್ಜಿ ಸಲ್ಲಿಕೆಗೆ ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗಿ ಅಭ್ಯರ್ಥಿಗೆ ಕನಿಷ್ಟ 19 ರಿಂದ ಗರಿಷ್ಟ 25 ವಯೋಮಾನದೊಳಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಠ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು.

ವಿದ್ಯಾರ್ಹತೆ: ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 26 ಜೂನ್ 2021ಕ್ಕೆ ಅನ್ವಯವಾಗುವಂತೆ ಪಿಯುಸಿ ಪಾಸಾಗಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು

ವೇತನ ಶ್ರೇಣಿ: ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅನುಸಾರವಾಗಿ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ 23,500 ರೂಪಾಯಿಯಿಂದ 47,670 ರೂಪಾಯಿಯವರೆಗೆ ವೇತನವಿರುತ್ತದೆ.

ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ನಡೆಯಲಿದೆ. ದೇಹದಾರ್ಡತೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳು 400 ರೂಪಾಯಿ, ಪ.ಜಾ., ಪಪಂ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 200ರೂಪಾಯಿ ಪಾವತಿಸಬೇಕು.

ಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ https://recruitment.ksp.gov.in/ ಗೆ ಭೇಟಿ ನೀಡಿ ಕೇಳಲಾದ ಶೈಕ್ಷಣಿಕ ದಾಖಲಾತಿ, ಜಾತಿ,ಆದಾಯ ಪ್ರಮಾಣ ಪತ್ರಗಳೊಂದಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಇದೇ ತಿಂಗಳ ಜೂನ್ 26 ರೊಳಗೆ ಅರ್ಜಿ ಸಲ್ಲಿಸಬೇಕು.

Published On: 08 June 2021, 04:39 PM English Summary: application invited for recruitment of police

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.