1. ಸುದ್ದಿಗಳು

ವಿವಿಧ ಸ್ವ ಉದ್ಯೋಗಕ್ಕಾಗಿ ತರಬೇತಿ ನೀಡಲು ಅರ್ಜಿ ಆಹ್ವಾನ

ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಹುಲಕೋಟಿ (ಎಸ್.ಬಿ.ಐ.-ಎ.ಎಸ್.ಎಫ್. ಆರಸೆಟಿ) ಭಾರತೀಯ ಸ್ಟೇಟ್ ಬ್ಯಾಂಕ್ ಹಾಗೂ ಅಗ್ರಿಕಲ್ಚರಲ್ ಸೈನ್ಸ್ ಫೌಂಡೇಶನ ಹುಲಕೋಟಿಸಂಯುಕ್ತ ಆಶ್ರಯದಲ್ಲಿ ವಿವಿಧ ಸ್ವ-ಉದ್ಯೊಗ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪುರುಷರಿಗಾಗಿ ದ್ವಿ-ಚಕ್ರ ವಾಹನ ರಿಪೇರಿ ಮತ್ತು ಫೊಟೋಗ್ರಾಫಿ ಮತ್ತು ವಿಡಿಯೋಗ್ರಾಫಿಗೆ ಅವಕಾಶವಿದ್ದು, ಗ್ರಾಮೀಣ ಪ್ರದೇಶದ ನಿರುದ್ಯೋಗಿ 18 ರಿಂದ 45 ವಯಸ್ಸಿನೊಳಗಿನ ಯುವಕರು ಅರ್ಜಿ ಸಲ್ಲಿಸಬಹುದು. ಈ ತರಬೇತಿಗಳನ್ನು ಆರ್‍ಸೆಟಿ ಸಂಸ್ಥೆಯಲ್ಲಿ ಆಯೋಜಿಸಲಾಗುವದು.

ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿರುತ್ತದೆ. ತರಬೇತಿ ಪಡೆಯಲು ಇಚ್ಚಿಸುವವರು ತಮ್ಮ ಹೆಸರು, ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ಬಿ.ಪಿ.ಎಲ್ ಕಾರ್ಡ್, ಆಧಾರ್ ಕಾರ್ಡ್, ಹೊಂದಿರಬೇಕು. ತರಬೇತಿ ವಿಷಯದಲ್ಲಿ ಅನುಭವ ಮುಂತಾದ ವಿವರಗಳನ್ನು ಆರ್‍ಸೆಟಿ ಸಂಸ್ಥೆಯಲ್ಲಿ ದೊರೆಯುವ ಅರ್ಜಿ ಫಾರಂನಲ್ಲಿ ತುಂಬಿ ನಿರ್ದೇಶಕರು ಆರ್‍ಸೆಟಿ ಸಂಸ್ಥೆ, ಕೆ.ಎಚ್. ಪಾಟೀಲ ಕೃಷಿ ವಿಜ್ಞಾನ ಕೇಂದ್ರದ ಆವರಣ, ಹುಲಕೋಟಿ ಇವರಿಗೆ ನವಂಬರ್ 10 ರ ಒಳಗಾಗಿ ಅರ್ಜಿ ಸಲ್ಲಿಸಬೇಕು.

 ಈ ಮೊದಲು ಅರ್ಜಿ ಸಲ್ಲಿಸಿದವರು ಮರಳಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಹೆಚ್ಚಿನ ಮಾಹಿತಿಗಾಗಿ 08372-289843, 9632866195, 8880169996, 9632635268 ನ್ನು ಸಂಪರ್ಕಿಸಲು ಕೋರಲಾಗಿದೆ.

 ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಅಹ್ವಾನ

ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ 18 ರಿಂದ 45 ವಯಸ್ಸಿನ ನಿರುದ್ಯೋಗಿ ಯುವಕರಿಗಾಗಿ 30ದಿನಗಳ ಉಚಿತ ಏರ್ ಕಂಡಿಷನರ್ ಮತ್ತು ರೆಫ್ರಿಜಿರೇಟರ್‍ಗಳ ದುರಸ್ಥಿ ತರಬೇತಿಯನ್ನು ಪ್ರಾರಂಭಿಸಲಾಗಿದೆ.

ಈ ತರಬೇತಿಯಿಂದ ಸ್ವ ಉದ್ಯೋಗ, ಸ್ವಾವಲಂಭಿ ಜೀವನ ನಡೆಸಲು ಅನುಕೂಲವಾಗಲಿದೆ. ತರಬೇತಿಯಲ್ಲಿ ಊಟ ವಸತಿ ಉಚಿತವಾಗಿ ನೀಡಲಾಗುತ್ತದೆ. ಮೋದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ತರಬೇತಿಯಲ್ಲಿ ಸಾಫ್ಟ್ ಸೀಲ್ಕ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್ ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗೆಗಿನ ಮಾಹಿತಿಯನ್ನು ಉಚಿತವಾಗಿ ನೀಡಲಾಗುತ್ತದೆ. ಆಸಕ್ತರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ಹಾಗೂ 9483485489,9482188780,08284-220807, 08284-295307 ಸಂಖ್ಯೆಗೆ ಸಂಪರ್ಕಿಸಲು ಕೋರಿದೆ.

Published On: 30 October 2020, 08:12 AM English Summary: Application invited free self employment training

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.