ಕೃಷಿ ಇಲಾಖೆಯ ವತಿಯಿಂದ 2020-21ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿ (Krishi pandit award), ಆತ್ಮ ಯೋಜನೆಯಡಿ ತಾಲ್ಲೂಕು, ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ (Best agriculturist award)ಮತ್ತು ಜಿಲ್ಲಾ ಮಟ್ಟದ ಆಸಕ್ತ ಗುಂಪು ಪ್ರಶಸ್ತಿಗೆ ರೈತರಿಂದ (Farmers) ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಸೆ.07 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು/ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆಯಲ್ಲಿ ತಿಳಿಸಿದೆ.
Share your comments