1. ಸುದ್ದಿಗಳು

ರೈತರೇ ಗಮನಿಸಿ: ಗಂಗಾ ಕಲ್ಯಾಣ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ! ಅರ್ಜಿ ಸಲ್ಲಿಕೆಗೆ ಅ.20 ಕೊನೆ ದಿನ..

Kalmesh T
Kalmesh T
Application Invitation for Subsidy under Ganga Kalyan Yojana

Ganga Kalyan Irrigation Scheme 2022:  ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2022 23ನೇ ಸಾಲಿಗೆ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ (Seva Sindhu Portal) ಮುಖಾಂತರ ಆಹ್ವಾನಿಸಲಾಗಿದ್ದು, ರೈತರು ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಅ.20ರೊಳಗೆ ಆನ್ ಲೈನ ಮೂಲಕ ಸಲ್ಲಿಸಬಹುದು.

ಇದನ್ನೂ ಓದಿರಿ: ಕರ್ನಾಟಕದಲ್ಲಿ ಇನ್ನೂ 2 ದಿನ ಮಳೆ ಸಾಧ್ಯತೆ! ಯಾವ ಜಿಲ್ಲೆಯಲ್ಲಿ ಏನೇನಾಗಲಿದೆ ಗೊತ್ತೆ?

Ganga Kalyan Irrigation Scheme 2022: ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಈ ಕೆಳಕಂಡ ಅರ್ಹತೆಗಳನ್ನು ಹೊಂದಿರಬೇಕು.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಜಾತಿ ಸಮುದಾಯಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಾಗಿದ್ದು ಹಾಲಿ ಜಮೀನುಗಳು ಋಷ್ಠಿಯಾಗಿದ್ದು ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು.

* ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.

* ಅರ್ಜಿದಾರರ ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/- ಹಾಗೂ ಪಟ್ಟಣ ಪದೇಶದವರಿಗೆ ರೂ.1,20,000/-ಗಳ ಒಳಗಿರಬೇಕು.

ಸಿಹಿಸುದ್ದಿ: ರೈತರಿಗೆ 5 ತಾಸಿನ ಬದಲು 7 ತಾಸು ವಿದ್ಯುತ್‌ ಪೂರೈಕೆ ಸಿಎಂ ಬೊಮ್ಮಾಯಿ!

* ಅರ್ಜಿದಾರರು ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 12 ಎಕರೆ ಜಮೀನು ಹೊಂದಿರಬೇಕು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 01 ಎಕರೆ ಜಮೀನು ಹೊಂದಿರಬೇಕು.

* ವೈಯಕ್ತಿಕ ಕೊಳವೆ ಬಾವಿ ಯೋಜನೆಯಲ್ಲಿ ಘಟಕ ವೆಚ್ಚ ರೂ.2.50 ಲಕ್ಷಗಳು, ಇದರಲ್ಲಿ ರೂ.2.00ಲಕ್ಷ ಸಹಾಯಧನ ಹಾಗೂ ರೂ.50,000/- ನಿಗಮದಿಂದ ಶೇ.4ರ ಬಡ್ಡಿದರದಲ್ಲಿ ನೀಡುವ ಸಾಲದ ಮೊತ್ತ ಒಳಗೊಂಡಿದೆ.

* ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆ ಬಾವಿ ಘಟಕ ವೆಚ್ಚ ರೂ.4.00ಲಕ್ಷಗಳು ಇದರಲ್ಲಿ ರೂ.3.50ಲಕ್ಷ ಸಹಾಯಧನ ಹಾಗೂ ರೂ.50,000/- ನಿಗಮದಿಂದ ಶೇ.4ರ ಬಡ್ಡಿದರದಲ್ಲಿ ನೀಡುವ ಸಾಲದ ಮೊತ್ತ ಒಳಗೊಂಡಿದೆ.

ಲಂಪಿ ರೋಗಕ್ಕೆ ಬಲಿಯಾದ ಜಾನುವಾರುಗಳಿಗೆ ಸಿಎಂ ಬೊಮ್ಮಾಯಿ ಪರಿಹಾರ ಘೋಷಣೆ: ! ಎಷ್ಟು ಗೊತ್ತೆ?

* ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ರೈತರ ಹೆಸರು (ಶ್ರೀ ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಇದ್ದು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಆಧಾರ್ ಕಾರ್ಡ್ನಲ್ಲಿರುವಂತೆ ಹೆಸರು ಹೊಂದಾಣಿಕೆಯಾಗಬೇಕು.

ಈ ಹಿಂದೆ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅರ್ಜಿದಾರರು ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಜನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ https://www.dbcdc.karnataka.gov.in   ವೆಬ್ಸೈಟ್ ನಲ್ಲಿ ಸಂಪರ್ಕಿಸಿ ಅಥವಾ ನಿಗಮದ ದೂರವಾಣಿ/ ಸಹಾಯವಾಣಿ ಸಂಖ್ಯೆ 080-22374832 ಮತ್ತು 9606066389 ಅಥವಾ 8824300400 FADO.

Published On: 03 October 2022, 10:59 AM English Summary: Attention Farmers: Application Invitation for Subsidy under Ganga Kalyan Yojana

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.