ರಾಜ್ಯ ಸರ್ಕಾರವು ಜನರಿಗೆ ಮತ್ತೊಂದು ಸುತ್ತಿನ ಬೆಲೆ ಏರಿಕೆಯ ಶಾಕ್ ನೀಡಿದೆ.
ಟ್ವಿಟರ್: ಇನ್ಮುಂದೆ ಬ್ಲೂಟಿಕ್ಗೂ ಕೊಡ್ಬೇಕಾ ದುಡ್ಡು ?
ರಾಜ್ಯ ಸರ್ಕಾರವು ಜನರಿಗೆ ಮತ್ತೊಂದು ಸುತ್ತಿನ ಬೆಲೆ ಏರಿಕೆಯ ಶಾಕ್ ನೀಡಿದ್ದು, ಇದೀಗ ನಂದಿನಿ ಹಾಲಿನ ದರವನ್ನು ಮೂರು ರೂಪಾಯಿ ಹೆಚ್ಚಳ ಮಾಡಲು ಮುಂದಾಗಿದೆ.
ತಿಂಗಳಲ್ಲಿ 36 ಲಕ್ಷ ಆದಾಯ ಗಳಿಸಿದ ಎಂಬಿಎ ಪದವೀಧರ; ಈ ಯಶೋಗಾಥೆ ನಿಮಗೂ ಪ್ರೇರಣೆ!
ಶೀಘ್ರದಲ್ಲಿಯೇ ನಂದಿನಿ ಹಾಲಿನ ದರವನ್ನು ಪರಿಷ್ಕರಣೆ ಮಾಡಲಾಗುವುದು. ಪ್ರತಿ ಲೀಟರ್ ಹಾಲಿಗೆ 3 ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಚನ್ನಮ್ಮನ ಕಿತ್ತೂರಿನ ಹೂಲಿಕಟ್ಟಿ ಕ್ರಾಸ್ನಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೂಲಿಕಟ್ಟಿ ಶೀಥಲೀಕರಣ ಕೇಂದ್ರಕ್ಕೆ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು, ಕೆಎಂಎಫ್ ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾವನೆ ಸಲ್ಲಿಸಿದ್ದು, ದರ ಹೆಚ್ಚಳ ಅನಿವಾರ್ಯವಾಗಿದೆ.
ಅಲ್ಲದೇ ಹೈನುಗಾರರ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯ.
Pm kisan, ಕಿಸಾನ್ ಪಿಂಚಣಿ ಯೋಜನೆ: 200 ರೂಪಾಯಿ ಹೂಡಿಕೆ ಮಾಡಿ 3 ಸಾವಿರ ಪಿಂಚಣಿ ಗಳಿಸಬಹುದು!
ಹಾಲಿನ ದರ ಪರಿಷ್ಕರಣೆ ಸಂಬಂಧ ಈಗಾಗಲೇ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಇನ್ನು ನಂದಿನಿ ಹಾಲಿನ ದರ ಪರಿಷ್ಕರಣೆಯ ಹಣ ಸಂಪೂರ್ಣವಾಗಿ ರೈತರಿಗೆ ಸಂದಾಯವಾಗಲಿದೆ ಎಂದು ಅವರು ಹೇಳಿದ್ದಾರೆ.
Share your comments