1. ಸುದ್ದಿಗಳು

Bengaluru Band ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದಿಂದ ಇಂದು ಬೆಂಗಳೂರು ಬಂದ್‌!

Hitesh
Hitesh
Bengaluru Band today by the Union of Private Transport Associations!

ರೈತರಿಗೆ ಪ್ರಮುಖ ಸುದ್ದಿಗಳನ್ನು ತಲುಪಿಸುವ ಉದ್ದೇಶದಿಂದ ಕೃಷಿ ಜಾಗರಣ ಕನ್ನಡ ಅಗ್ರಿನ್ಯೂಸ್‌ ಪರಿಚಯಿಸಿದೆ. ಇಂದಿನ ಪ್ರಮುಖ ಸುದ್ದಿಗಳು ಈ ರೀತಿ ಇವೆ.

1. ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದಿಂದ ಇಂದು ಬೆಂಗಳೂರು ಬಂದ್‌!
2. ಕರಾವಳಿಯಲ್ಲಿ ಬೃಹತ್ ಗಾತ್ರದ ನೀಲಿ ತಿಮಿಂಗಿಲ ಮೃತದೇಹ ಪತ್ತೆ!
3. ಬಿಜೆಪಿ, ಜೆಡಿಎಸ್ ಮೈತ್ರಿ ಫಿಕ್ಸ್‌ ಎಂದ ಬಿಜೆಪಿ ಮುಖಂಡ
4. ಚಂದ್ರಯಾನ-2ರ ಆರ್ಬಿಟರ್ನಿಂದ ವಿಕ್ರಮ್ ಲ್ಯಾಂಡರ್ ಸೆರೆ
5. ಬರಗಾಲ ನಿಯಮ ಬದಲಾವಣೆಗೆ ಸ್ಪಂದಿಸದ ಕೇಂದ್ರ ಸರ್ಕಾರ: ಸಿದ್ದರಾಮಯ್ಯ ಅಸಮಾಧಾನ
6. ರಾಜ್ಯದ ಕರಾವಳಿ, ಗಡಿಭಾಗದ ರಾಜ್ಯಗಳಲ್ಲಿ ಭಾರೀ ಮಳೆ: ಎಚ್ಚರಿಕೆ!
7. ಧಾರವಾಡ ಕೃಷಿಮೇಳದಲ್ಲಿ ವಿಸ್ಮಯಕಾರಿ ಕೀಟ ಪ್ರಪಂಚ

1. ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದಿಂದ ಸೋಮವಾರ ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ.

ಹೀಗಾಗಿ, ಬೆಂಗಳೂರಿನಲ್ಲಿ ವ್ಯಾಪಕ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಜನರಿಗೆ ಸಮಸ್ಯೆ ಆಗುವುದನ್ನು ತಪ್ಪಿಸುವ ಉದ್ದೇಶದಿಂದ

ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳ ಸಂಖ್ಯೆ ಹೆಚ್ಚಳ ಮಾಡಲಾಗಿದೆ.    
--------------------
2. ಕರ್ನಾಟಕದ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಮುಗಳಿ ಕಡಲಧಾಮದಲ್ಲಿ ಅಳಿವಿನಂಚಿನಲ್ಲಿರುವ ಬೃಹತ್

ಗಾತ್ರದ ನೀಲಿ ತಿಮಿಂಗಿಲವೊಂದರ ಮೃತದೇಹ ಪತ್ತೆಯಾಗಿರುವುದು ವರದಿ ಆಗಿದೆ.

ತಿಮಿಂಗಿಲ ಸುಮಾರು 35 ಮೀಟರ್ ಉದ್ದವಿದ್ದು, ಬಲೀನ್ ತಳಿಗೆ ಸೇರಿದ ತಿಮಿಂಗಿಲ ಎಂದು ಗುರುತಿಸಲಾಗಿದೆ.

ಹಲವು ದಿನಗಳ ಹಿಂದೆ ಮೃತಪಟ್ಟಿದ್ದು, ಅಲೆಗಳ ರಭಸಕ್ಕೆ ಈಗ ದಡಕ್ಕೆ ಬಂದು ಬಿದ್ದಿರುವ ಸಾಧ್ಯತೆ ಇದೆ.

ಆದರೆ, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿಗೆ ಸ್ಪಷ್ಟ ಕಾರಣ ತಿಳಿಯಲಿದೆ

ಎಂದು ಕಾರವಾರದ ಕಡಲ ಜೀವಶಾಸ್ತ್ರ ಸ್ನಾತಕೋತ್ತರ ಅಧ್ಯಯನ ಕೆಂದ್ರದ ಶಿವಕುಮಾರ ಹರಗಿ ತಿಳಿಸಿದ್ದಾರೆ.   
--------------------
3. 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬಹುತೇಕ ಖಚಿತ

ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೇಸೇತರ ಮತಗಳನ್ನು ಒಂದುಗೂಡಿಸುವಲ್ಲಿ ಈ ಬೆಳವಣಿಗೆ ಮಹತ್ವದಾಗಿದೆ ಎಂದಿದ್ದಾರೆ.   

4. ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿದಿರುವ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಚಿತ್ರವನ್ನು

ಚಂದ್ರಯಾನ-2ರ ಆರ್ಬಿಟರ್ ಸೆರೆ ಹಿಡಿದಿದೆ. ಈ ಚಿತ್ರವನ್ನು ಬಾಹ್ಯಾಕಾಶ ಸಂಶೋಧನಾ ಸಂಸ್ಥೆ -ಇಸ್ರೋ ಬಿಡುಗಡೆ ಮಾಡಿದೆ.
--------------------
5. ಬರಗಾಲದ ನಿಯಮಗಳನ್ನು ಬದಲಾಯಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಆದರೆ, ಈ ವಿಚಾರದ ಬಗ್ಗೆ ಕೇಂದ್ರ ಸರ್ಕಾರ ಇನ್ನೂ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.

ರಾಜ್ಯದಲ್ಲಿ ಮುಂಗಾರು ಮಳೆ ಸಮರ್ಪಕವಾಗಿ ಆಗದೆ ಇರುವುದರಿಂದ ಬರಗಾಲದ

ಛಾಯೆ ಆವರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.  
--------------------
6. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯ ಅವಧಿಯಲ್ಲಿ ಭಾರೀ ಮಳೆ ಆಗಲಿದೆ.

ಅಲ್ಲದೇ ಕರ್ನಾಟಕದ ಗಡಿ ಭಾಗಗಳಾದ ಗೋವಾ-ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ.

ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಮತ್ತು ಒಡಿಶಾದಲ್ಲಿ ಮಂಗಳವಾರದವರೆಗೆ ಭಾರೀ ಮಳೆಯಾಗಲಿದೆ

ಎಂದು ಭಾರತೀಯ  ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಅಲ್ಲದೇ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣಗಳಲ್ಲಿ ಮುಂದಿನ

ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
--------------------

7. ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ಕೀಟಶಾಸ್ತ್ರ ವಿಭಾಗದ ವತಿಯಂದ   ವಿಸ್ಮಯಕಾರಿ ಕೀಟ ಪ್ರಪಂಚವನ್ನು ಸೃಷ್ಟಿಸಿದ್ದು, ನೋಡುಗರನ್ನು ಆಕರ್ಷಿಸಿದೆ. 

ವಿಭಾಗದ ವಿದ್ಯಾರ್ಥಿಗಳು ವಿವಿಧ ರೀತಿಯ ಕೀಟಗಳ ಬಗ್ಗೆ ರೈತಪಿ ವರ್ಗ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿದೆ.

ಅಲ್ಲದೇ ಸಾಮಾನ್ಯ ಕೀಟದ ಪರಿಚಯ, ಕೀಟದ ದೇಹ ರಚನೆ, ಕೀಟಗಳಲ್ಲಿ ಸಂಘ ಜೀವನ ಮತ್ತು ಗೂಡು,

ಮಾನವನಿಗೆ ರೋಗವನ್ನು ಹರಡುವ ಕೀಟಗಳು ಸೇರಿದಂತೆ ಹಲವು ವಿಷಯಗಳ ಕುರಿತು ವಿದ್ಯಾರ್ಥಿಗಳು ಮಾಹಿತಿ ನೀಡುತ್ತಿದ್ದಾರೆ.

ಇದರೊಂದಿಗೆ ರೈತ ಮಿತ್ರ ಕೀಟಗಳಾದ ಪರಭಕ್ಷಕ ಕೀಟಗಳು, ಪರಾವಲಂಬಿ ಕೀಟಗಳು, ಜೇಡಗಳು ಮತ್ತು ಗುಲಗಂಜಿ ಹುಳುಗಳ

ಬಗ್ಗೆ ಮಾಹಿತಿ ನೀಡುತ್ತಿದ್ದೇವೆ ಎಂದು  ಕೃಷಿ ಕೀಟಶಾಸ್ತ್ರದ ಪಿ.ಎಚ್.ಡಿ. ವಿದ್ಯಾರ್ಥಿಗಳಾದ ರಾಖೇಶ್ ಮತ್ತು ವಿನುತಾ ತಿಳಿಸಿದ್ದಾರೆ. 

Published On: 11 September 2023, 11:59 AM English Summary: Bengaluru Band today by the Union of Private Transport Associations!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.