ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕನಿಷ್ಠ ತಾಪಮಾನ ಗಣನೀಯ ಪ್ರಮಾಣದಲ್ಲಿ ಇಳಿಕೆ ಆಗಲಿದ್ದು, ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ವಿಶ್ವವಿಖ್ಯಾತ ಬಸವನಗುಡಿ ಕಡಲೆ ಪರಿಷೆಗೆ ಕ್ಷಣಗಣನೆ!
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗಣನೀಯ ಪ್ರಮಾಣದಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಈಗಾಗಲೇ ಮಳೆ ಆಗುವುದು ನಿಂತಿದ್ದು, ವಿವಿಧೆಡೆ ಒಣಹವೆ ಮುಂದುವರಿದಿದೆ. ಅಲ್ಲದೇ ಚಳಿ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಕಂಡುಬಂದಿದೆ.
ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 7ನೇ ವೇತನ ಆಯೋಗ ರಚನೆಗೆ ಸಿಎಂ ಅನುಮೋದನೆ: ಆರು ತಿಂಗಳಲ್ಲಿ ಶಿಫಾರಸ್ಸು ಸಾಧ್ಯತೆ!
ರಾಜ್ಯದಲ್ಲಿ ಮುಂದಿನ 24 ಗಂಟೆ ಅಂದರೆ ಸೋಮವಾರದ ವರೆಗೆ ಒಣಹವೆ ಮುಂದುವರಿಯಲಿದ್ದು, ತಾಪಮಾನವು ಸಾಮಾನ್ಯಕ್ಕಿಂತ ಅಂದರೆ ಅತಿ ಗಮನಾರ್ಹವಾಗಿ ಕಡಿಮೆಯಂತೆ
ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿಯ ಒಂದೆರಡು ಕಡೆಗಳಲ್ಲಿ ಕಂಡುಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಇನ್ನು ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆಯಂತೆ ಕರಾವಳಿಯ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಕಂಡುಬರಲಿದೆ ಎಂದು ವರದಿ ತಿಳಿಸಿದೆ.
ಬೆಂಕಿ ರೋಗ ನಿರೋಧಕ ಶಕ್ತಿ ಇರುವ ಕೆಂಪಕ್ಕಿ ಭತ್ತದ ತಳಿ ಅಭಿವೃದ್ಧಿ!
ಇನ್ನು ಮುಂದಿನ 24 ಗಂಟೆಗಳ ಕಾಲ ಒಣಹವೆ ಮುಂದುವರಿಯಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆ ಮೋಡ ಮುಸುಕಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 25 ಮತ್ತು ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಉಳಿದಂತೆ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ. ಇನ್ನು ಶನಿವಾರ ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಕನಿಷ್ಠ ಉಷ್ಣಾಂಶ 8.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಬೀದರ್‌ನಲ್ಲಿ ದಾಖಲಾಗಿದೆ.
ಇದರ ಹೊರತಾಗಿ ರಾಜ್ಯದಲ್ಲಿ ಎಲ್ಲಿಯೂ ಮಳೆ ಆಗಿರುವುದು ವರದಿ ಆಗಿಲ್ಲ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ರೈತರ ಮಕ್ಕಳಿಗೆ ಸಿಹಿಸುದ್ದಿ: ಶಿಕ್ಷಣದಲ್ಲಿ ಶೇ.10% ಮೀಸಲಾತಿ; 430 ಸೀಟು ಲಭ್ಯ- ಬಿ.ಸಿ ಪಾಟೀಲ್!
ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಡೆ ತಾಪಮಾನದಲ್ಲಿ ಭಾರಿ ಇಳಿಕೆ ದಾಖಲಾಗುತ್ತಿದೆ. ಈಚೆಗೆ ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ,
ಉತ್ತರ ಮತ್ತು ಈಶಾನ್ಯ ದಿಕ್ಕಿನಿಂದ ರಾಜ್ಯದತ್ತ ಬೀಸುತ್ತಿರುವ ಗಾಳಿ ಹಾಗೂ ಗಾಳಿಯಲ್ಲಿನ ತೇವಾಂಶದ ಕಾರಣದಿಂದ ನವೆಂಬರ್‌ಎರಡನೇ ವಾರದಿಂದಲೇ ಮೈ ಕೊರೆಯುವ ಚಳಿ ಶುರುವಾಗಿದೆ.
ಶಿವಮೊಗ್ಗ, ಮಡಿಕೇರಿ, ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಕೆಲ ಭಾಗಗಳಲ್ಲಿ ಮುಂಜಾನೆ ಚಳಿ ಆವರಿಸಲಿದ್ದು, ಸಂಜೆ ವೇಳೆಗೆ ತಂಪಾದ ವಾತಾವಾರಣ ಇರಲಿದೆ.
ಶಿವಮೊಗ್ಗ, ಮಡಿಕೇರಿ, ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಕೆಲ ಭಾಗಗಳಲ್ಲಿ ಮುಂಜಾನೆ ಚಳಿ ಆವರಿಸಲಿದ್ದು, ಸಂಜೆ ವೇಳೆಗೆ ತಂಪಾದ ವಾತಾವಾರಣ ಇರಲಿದೆ.
Share your comments