ಕರ್ನಾಟಕದಲ್ಲಿ ಜಾನುವಾರುಗಳಿಗೆ ಹರಡುತ್ತಿರುವ ಲಂಪಿ ಚರ್ಮರೋಗ ತಡೆಯುವ ಉದ್ದೇಶದಿಂದ ಲಸಿಕೆ ಹಾಕಲು, ಚಿಕಿತ್ಸೆ ಹಾಗೂ ಮೃತಪಟ್ಟ ರಾಸುಗಳಿಗೆ ಪರಿಹಾರ ಒದಗಿಸಲು ಒಟ್ಟು ರೂ.13 ಕೋಟಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ.
ಗಮನಿಸಿ: 8.83 ಲಕ್ಷ ರೈತರ ಮುಂಗಾರು ಹಂಗಾಮಿನ ಬೆಳೆಹಾನಿಗೆ ₹947.8 ಕೋಟಿ ಪರಿಹಾರ-ಬಿ.ಸಿ.ಪಾಟೀಲ್
lumpy skin disease: ರಾಜ್ಯದಲ್ಲಿ ಒಟ್ಟು 4380 ಗ್ರಾಮಗಳಲ್ಲಿ 45,645 ಜಾನುವಾರುಗಳು ಲಂಪಿ ಚರ್ಮ ರೋಗಕ್ಕ ತುತ್ತಾಗಿದ್ದು, 26,135 ಜಾನುವಾರುಗಳು ಗುಣಮುಖವಾಗಿವೆ. ಅದರಲ್ಲಿ 2070 ಜಾನುವಾರುಗಳು ಮರಣ ಹೊಂದಿವೆ.
ಶುಕ್ರವಾರ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಜಾನುವಾರುಗಳ ಚರ್ಮಗಂಟು ರೋಗದ ಕುರಿತು ಪರಿಶೀಲನಾ ಸಭೆ ನಡೆಯಿತು.
ಮೃತ ರಾಸುಗಳ ಪರಿಹಾರಕ್ಕೆ ಈಗಾಗಲೇ 2 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಹೆಚ್ಚುವರಿ 5 ಕೋಟಿ ರೂ. ಹಾಗೂ ಜಾನುವಾರುಗಳ ಚಿಕಿತ್ಸೆಗೆ ಮತ್ತು ಲಸಿಕೆಗೆ ಒಟ್ಟು 8 ಕೋಟಿ ರೂ. ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಭತ್ತದ ಹುಲ್ಲು ಆಧಾರಿತ ಪ್ಲಾಂಟ್ಗಳ ಸ್ಥಾಪನೆಗೆ ಉತ್ತೇಜನ; 1.4 ಕೋಟಿ ರೂ ಹಣಕಾಸಿನ ನೆರವು!
ರಾಜ್ಯದ 28 ಜಿಲ್ಲೆಗಳ 160 ತಾಲೂಕುಗಳ 4380 ಗ್ರಾಮಗಳಲ್ಲಿ ರೋಗ ಕಾಣಿಸಿಕೊಂಡಿದೆ. 45,645 ಜಾನುವಾರುಗಳು ಈ ರೋಗಕ್ಕೆ ತುತ್ತಾಗಿದ್ದು, 26,135 ಜಾನುವಾರುಗಳು ಗುಣಮುಖವಾಗಿವೆ. 2070 ಜಾನುವಾರುಗಳು ಮರಣ ಹೊಂದಿವೆ.
15 ಲಕ್ಷ ಲಸಿಕೆ ಒದಗಿಸಲು ಸಿಎಂ ಸೂಚನೆ (lumpy skin disease)
6.57 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಭಾರತ ಸರ್ಕಾರದ ಮಾರ್ಗಸೂಚಿಯಂತೆ ರೋಗ ಕಾಣಿಸಿಕೊಂಡ 5 ಕಿ.ಮೀ. ಸುತ್ತಳತೆಯಲ್ಲಿ ಆರೋಗ್ಯವಂತ ಜಾನುವಾರುಗಳಿಗೆ ಲಸಿಕೆ ಹಾಕಬೇಕು ಎಂದು ಅಧಿಕಾರಿಗಳು ತಿಳಿಸಿದರು.
ಈ ಹಿನ್ನೆಲೆ ರೋಗ ತೀವ್ರವಾಗಿರುವ ಜಿಲ್ಲೆಗಳಲ್ಲಿ ಆದ್ಯತೆಯ ಮೇರೆಗೆ ಲಸಿಕೆ ಹಾಕಲು ಸೂಚಿಸಿದರಲ್ಲದೆ, ಕೂಡಲೇ 15 ಲಕ್ಷ ಡೋಸ್ ಲಸಿಕೆಗಳನ್ನು ಒದಗಿಸುವಂತೆ ತಿಳಿಸಿದರು.
ಜಾನುವಾರು ಮಾಲೀಕರಿಗೆ ಸಿಹಿಸುದ್ದಿ; ದೇಶದ ಎಲ್ಲಾ ಪಂಚಾಯತ್ಗಳಲ್ಲಿ ಸರ್ಕಾರ ಡೈರಿ ತೆರೆಯಲು ನಿರ್ಧಾರ!
ಲಸಿಕೆ ಪೂರೈಕೆ ಕುರಿತು ಭಾರತ ಸರ್ಕಾರ ಅನುಮೋದಿಸಿದ ಕಂಪನಿಗಳೊಂದಿಗೆ ಮಾತುಕತೆ ನಡೆಸಿ, ಲಸಿಕೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಪಶುಸಂಗೋಪನೆ ಇಲಾಖೆ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚಿಸಿದರು.
ರೋಗಪೀಡಿತ ಜಾನುವಾರುಗಳನ್ನು ಪ್ರತ್ಯೇಕಿಸಲು ಪ್ರತಿ ಗ್ರಾಮದಲ್ಲಿ ವ್ಯವಸ್ಥೆ ಮಾಡಲು ತಿಳಿಸಿದರು. ಮರಣ ಹೊಂದಿದ ಜಾನುವಾರುಗಳಿಗೆ 2 ಕೋಟಿ ರೂ. ನೀಡಲಾಗಿದ್ದು, 46.15 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ.
ಬಾಕಿ ಪರಿಹಾರ ತ್ವರಿತವಾಗಿ ವಿತರಿಸುವಂತೆ ಇದೇ ವೇಳೆ ಅವರು ಸೂಚಿಸಿದರು.
lumpy skin disease: ರೋಗಪೀಡಿತ ರಾಸುಗಳ ಹಾಲಿನಿಂದ ಮನುಷ್ಯರಿಗೆ ಈ ಚರ್ಮಗಂಟು ರೋಗ ಹರಡುವುದಿಲ್ಲ. ಈ ಕುರಿತು ಜನರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳಲು ಸಿಎಂ ಸೂಚಿಸಿದರು.
ಚರ್ಮಗಂಟು ರೋಗ ತೀವ್ರವಾಗಿರುವ ಹಾವೇರಿ ಮತ್ತು ಕೋಲಾರ ಜಿಲ್ಲೆಗಳಲ್ಲಿ ರೋಗನಿಯಂತ್ರಣಕ್ಕೆ ತೀವ್ರ ಕ್ರಮ ಕೈಗೊಳ್ಳಬೇಕು.
ಇತರ ಜಿಲ್ಲೆಗಳಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಲಸಿಕೆ ಅಭಿಯಾನ ತೀವ್ರಗೊಳಿಸುವಂತೆ ತಿಳಿಸಿದರು.
ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Share your comments