1. ಸುದ್ದಿಗಳು

DA Hike: ಸರ್ಕಾರಿ ನೌಕರರಿಗೆ ಮತ್ತು ನಿವೃತ್ತ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್‌ ಸುದ್ದಿ! ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ!

Kalmesh T
Kalmesh T
CM Basavaraj Bommai has cleared the proposal for increase of DA to Govt. employees

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಗಂಗಾ ಕಲ್ಯಾಣ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ! ಅರ್ಜಿ ಸಲ್ಲಿಕೆಗೆ ಅ.20 ಕೊನೆ ದಿನ..

ಇಲ್ಲಿದೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ;

  1. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2022 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 27.25 ರಿಂದ ಶೇಕಡ 31ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ.
  2. ತುಟ್ಟಿಭತ್ಯೆಯ ಉದ್ದೇಶಕ್ಕಾಗಿ "ಮೂಲ ವೇತನ'ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ,

(ಅ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ,

ಸಿಹಿಸುದ್ದಿ: ರೈತರಿಗೆ 5 ತಾಸಿನ ಬದಲು 7 ತಾಸು ವಿದ್ಯುತ್‌ ಪೂರೈಕೆ ಸಿಎಂ ಬೊಮ್ಮಾಯಿ!

(ಅ) 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ,

(ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ, ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ.

  1. ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.

11 ಕೋಟಿಗೂ ಹೆಚ್ಚು ರೈತರ ಖಾತೆಗೆ ಈ ದಿನ ಬರಲಿದೆ ಪಿಎಂ ಕಿಸಾನ್‌ 12ನೇ ಕಂತಿನ ಹಣ!

  1. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜುಲೈ 2022 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 27.25 ರಿಂದ ಶೇಕಡ 31 ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ.
  2. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೂ ಸಹ ಈ ಅದೇಶಗಳು ಅನ್ವಯಿಸುತ್ತವೆ.
  1. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್‌ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.

ಲಂಪಿ ರೋಗಕ್ಕೆ ಬಲಿಯಾದ ಜಾನುವಾರುಗಳಿಗೆ ಸಿಎಂ ಬೊಮ್ಮಾಯಿ ಪರಿಹಾರ ಘೋಷಣೆ: ! ಎಷ್ಟು ಗೊತ್ತೆ?

  1. ಯುಜಿಸಿ/ಎಐಸಿಟಿಇ/ಐಸಿಎಆರ್/ಎನ್‌ಜೆಪಿಸಿ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ಪಿಂಚಣಿದಾರರಿಗೆ ಸಂಬಂಧಿಸಿದಂತ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು. 

    ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು.

  2. ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈನಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು.
  3. ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ.
Published On: 08 October 2022, 11:12 AM English Summary: CM Basavaraj Bommai has cleared the proposal for increase of DA to Govt. employees

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.