ರಾಜ್ಯದಲ್ಲಿ ಗೋ ಸಂರಕ್ಷಣಾ ಕಾಯ್ದೆ ಜಾರಿಯಾದ ಮೇಲೆ ಸುಮಾರು 30,000ಕ್ಕೂ ಹೆಚ್ಚು ಗೋವುಗಳನ್ನು ಸಂರಕ್ಷಣೆ ಮಾಡಲಾಗಿದೆ ಎಂದು ಪಶುಸಂಗೋಪನಾ ಇಲಾಖೆ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ.
Pradhan Mantri Jan-Dhan Yojana | ಖಾತೆದಾರರಿಗೆ ಸರ್ಕಾರದಿಂದ 10,000 ರೂಪಾಯಿ!
ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ, ಸಂರಕ್ಷಣಾ ಕಾಯ್ದೆ ಜಾರಿಗೆ ಬಂದ ಮೇಲೆ ರಾಜ್ಯದಲ್ಲಿ 30 ಸಾವಿರಕ್ಕೂ ಅಧಿಕ ಜಾನುವಾರುಗಳ ರಕ್ಷಣೆ ಮಾಡಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.
ಸೋಮವಾರ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಗಂಗಾಪುರ ಗ್ರಾಮದ ಗೋಶಾಲೆಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಬಂಗಾರ-ಬೆಳ್ಳಿ ಪ್ರಿಯರಿಗೆ ಸಮಾಧಾನದ ಸುದ್ದಿ; ತಿಂಗಳಾಂತ್ಯಕ್ಕೆ ದೇಶಾದ್ಯಂತ ಬೆಲೆ ಇಳಿಕೆ
ಸರ್ಕಾರ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ಆರಂಭಿಸುತ್ತಿದೆ. ಪ್ರತಿ ಗೋಶಾಲೆಯಲ್ಲೂ ನೂರರಿಂದ ಸಾವಿರದವರೆಗೆ ಜಾನುವಾರು ರಕ್ಷಣೆ ಮಾಡಲಾಗಿದೆ.
ಚರ್ಮಗಂಟು ರೋಗದಿಂದ ರಾಜ್ಯದಲ್ಲಿ ಈವರೆಗೆ 10,413 ರಾಸು ಮೃತಪಟ್ಟಿವೆ. ಉಳಿದ ರಾಸುಗಳು ಚೇತರಿಸಿಕೊಂಡಿವೆ.
ರೋಗ ನಿಯಂತ್ರಣಕ್ಕೆ ಲಸಿಕೆ ನೀಡುವುದು ಸೇರಿದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು.
ಸರ್ಕಾರಿ ನೌಕರರಿಗೆ ಸಿಹಿಸುದ್ದಿ; ಡಿಎ ಹೆಚ್ಚಳದ ನಂತರ ಇದೀಗ ಮತ್ತೊಂದು ಮಹತ್ವದ ಘೋಷಣೆ! ಏನಿದು ತಿಳಿಯಿರಿ
ಹಿನ್ನೆಲೆ:
ವಿಧಾನಸಭೆಯಲ್ಲಿ ಕಳೆದ ಅಧಿವೇಶನದಲ್ಲಿ ಅಂಗೀಕೃತವಾಗಿ ಸುಗ್ರೀವಾಜ್ಞೆ ಹೊರಡಿಸಲಾಗಿದ್ದ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕಕ್ಕೆ (ಗೋಹತ್ಯೆ ನಿಷೇಧ) ಮೇಲ್ಮನೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ವಿರೋಧದ ನಡುವೆ ಧ್ವನಿಮತದಿಂದ ಅಂಗೀಕಾರಗೊಂಡಿತ್ತು.
Share your comments