1. ಸುದ್ದಿಗಳು

Rain ರಾಜ್ಯದ ದಕ್ಷಿಣ ಜಿಲ್ಲೆಗಳಲ್ಲಿ ಮುಂದುವರಿದ ಮಳೆ!

Hitesh
Hitesh
Continues to rain in the southern districts of the state!

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುತ್ತಿತ್ತು.

ಇದೀಗ ಕಳೆದ ಮೂರ್ನಾಲ್ಕು ದಿನಗಳಿಂದ ಬಿಸಿಲಿನ ಝಳವು ತೀವ್ರವಾಗಿ ಹೆಚ್ಚಳವಾಗುತ್ತಿರುವುದು ವರದಿ ಆಗುತ್ತಿದೆ.

ಕಳೆದ 24 ಗಂಟೆಯ ಅವಧಿಯಲ್ಲಿ ನೋಡುವುದಾದರೆ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಅಲ್ಲದೇ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿತ್ತು ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಉಳಿದಂತೆ ಭಾರೀ ಪ್ರಮಾಣದಲ್ಲಿ ಯಾವುದೇ ಪ್ರದೇಶದಲ್ಲಿ ಮಳೆಯಾಗಿರುವುದು ವರದಿ ಆಗಿಲ್ಲ. 

ಇನ್ನು ಗರಿಷ್ಠ ಉಷ್ಣಾಂಶದ ವಿವರವನ್ನು ನೋಡುವುದೇ ಆದರೆ, ರಾಜ್ಯದಲ್ಲಿ (Daily weather updates )ಅತೀ ಗರಿಷ್ಠ ಉಷ್ಣಾಂಶವು 40.02 ಡಿಗ್ರಿ ಸೆಲ್ಸಿಯಸ್‌ ಪ್ರಮಾಣವು ಕಲಬುರಗಿಯಲ್ಲಿ ದಾಖಲಾಗಿದೆ.

ಮೇ 19ರ ವರೆಗೆ ರಾಜ್ಯದಲ್ಲಿ ಹವಾಮಾನ ವರದಿ: ರಾಜ್ಯದಲ್ಲಿ ಮೇ 19ರ ವರೆಗೆ ಅಂದರೆ, ಶುಕ್ರವಾರದ ವರೆಗೆ

ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ರಾಮನಗರ ಮತ್ತು ಮೈಸೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಬಹಳಷ್ಟು

ಸಾಧ್ಯತೆಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. 

ಇನ್ನು ಉಳಿದಂತೆ ರಾಜ್ಯದಲ್ಲಿ ಭಾರೀ ಮಳೆ ಆಗುವ ಎಚ್ಚರಿಕೆಯನ್ನು ನೀಡಿಲ್ಲ.

ಗುಡುಗು ಮುನ್ನೆಚ್ಚರಿಕೆ

ಮುಂದಿನ 24 ಗಂಟೆಯ ಅವಧಿಯಲ್ಲಿ ನೋಡುವುದೇ ಆದರೆ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಗರಿಷ್ಠ ಉಷ್ಣಾಂಶದ ಮುನ್ಸೂಚನೆ

ಗರಿಷ್ಠ ಉಷ್ಣಾಂಶವು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ

ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆಯನ್ನು ನೀಡಿದೆ.

Continues to rain in the southern districts of the state!

ಮೀನುಗಾರರಿಗೆ ಯಾವುದೇ ಮುನ್ಸೂಚನೆಯನ್ನು ಈ ಅವಧಿಯಲ್ಲಿ ನೀಡಲಾಗಿಲ್ಲ.

ಅಲ್ಲದೇ ಮುಂದಿನ 24 ಗಂಟೆಯ ಅವಧಿಯ ಒಳಗೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ.

ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ

ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ

ಭಾಗಶಃ ಮೋಡ ಕವಿದ ವಾತಾವರಣವರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದ್ದು,

ಕೆಲವು ಕಡೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಗರಿಷ್ಠ ಉಷ್ಣಾಂಶದ ಪ್ರಮಾಣವನ್ನು ನೋಡುವುದೇ ಆದರೆ, ಗರಿಷ್ಠ ಉಷ್ಣಾಂಶವು 35 ಡಿಗ್ರಿ ಸೆಲ್ಸಿಯಸ್‌ ಹಾಗೂ

ಕನಿಷ್ಠ ಉಷ್ಣಾಂಶವು 23 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.   

Pic Credits: pexels  

Published On: 18 May 2023, 10:37 AM English Summary: Continues to rain in the southern districts of the state!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.