1. ಸುದ್ದಿಗಳು

ಭಾರತದಿಂದ ಕುವೈತ್‌ಗೆ ರಫ್ತಾಗುತ್ತಿದೆ ಬರೋಬ್ಬರಿ 192 ಮೆಟ್ರಿಕ್‌ ಟನ್‌ ಹಸುವಿನ ಸಗಣಿ..!ಯಾಕೆ?

Maltesh
Maltesh
Cow Dung Export To Kuwait From Jaipur

ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ದೇಶದಿಂದ ದೂರದ ಕುವೈತ್‌ ರಾಷ್ಟ್ರಕ್ಕೆ ಹಸುವಿನ ಸಗಣಿ ರಫ್ತು ಮಾಡಲಾಗುತ್ತಿದೆ. ಹೌದು ಅದೂ ಕೂಡ 192 ಮೆಟ್ರಿಕ್ ಟನ್‌ಗಳಷ್ಟು ಪ್ರಮಾಣದಲ್ಲಿ ರಫ್ತು ಮಾಡಲಾಗುವುದು ಎಂದು ಭಾರತೀಯ ಸಾವಯವ ರೈತ ಉತ್ಪಾದಕರ ಸಂಘದ ರಾಷ್ಟ್ರೀಯ ಅಧ್ಯಕ್ಷ ಅತುಲ್ ಗುಪ್ತಾ ಹೇಳಿದ್ದಾರೆ.

ರೈತರಿಗೆ ಸಿಹಿ ಸುದ್ದಿ: ಮಾರುಕಟ್ಟೆಯಲ್ಲಿ ಗೋಧಿಗೆ ಬಂಪರ್ ಬೆಲೆ: ರೈತರ ಮುಖದಲ್ಲಿ ನಗೆ!

Paddy: ಉತ್ತಮ ಇಳುವರಿ ನೀಡುವ ರೋಗ ನಿರೋಧಕ ಭತ್ತದ ತಳಿಗಳ ಕುರಿತು ಇಲ್ಲಿದೆ ಸಮಗ್ರ ಮಾಹಿತಿ…

ಗೋವುಗಳ ರಕ್ಷಣೆಗಾಗಿ ನಮ್ಮ ತಂಡ ನಡೆಸಿದ ಅವಿರತ ಪ್ರಯತ್ನಗಳು ಫಲ ನೀಡಿವೆ ಎಂದ ಅವರು ಹೇಳಿದ್ದಾರೆ. ಜೊತೆಗ ಜೈಪುರ ಮೂಲದ ಸನ್‌ರೈಸ್ ಅಗ್ರಿಲ್ಯಾಂಡ್ ಮತ್ತು ಡೆವಲಪ್‌ಮೆಂಟ್ ರಿಸರ್ಚ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಈ ಆರ್ಡ್‌ರ್‌ ಅನ್ನು ಪಡೆದುಕೊಂಡಿದೆ.

ಮುಸ್ಲಿಂ ಬಾಹುಳ್ಯದ ಕುವೈತ್‌ನಿಂದ ಭಾರತದಿಂದ ದೇಶಿ ಹಸುಗಳ ಸಗಣಿ ಆಮದು ಮಾಡಿಕೊಳ್ಳುತ್ತಿರುವುದು ಬಹುಶಃ ಇದೇ ಮೊದಲು ಎಂದು ಕಂಪನಿಯ ನಿರ್ದೇಶಕ ಪ್ರಶಾಂತ್ ಚತುರ್ವೇದಿ ಹೇಳಿದ್ದಾರೆ. 

ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ! ಯಾವಾಗ ದೊರೆಯಲಿದೆ ಗೊತ್ತೆ?

ಹೆಣ್ಣುಮಕ್ಕಳಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ: ಕಾಲೇಜು ಪ್ರವೇಶಕ್ಕೆ 25,000 ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ₹8 ಲಕ್ಷ ನೀಡಲಿದೆ ಸರ್ಕಾರ!

ಜೈಪುರದ ಟೋಂಕ್ ರಸ್ತೆಯ ಶ್ರೀಪಿಂಜ್ರಾಪೋಲ್ ಗೌಶಾಲಾದಲ್ಲಿರುವ ಸನ್‌ರೈಸ್ ಆರ್ಗಾನಿಕ್ ಪಾರ್ಕ್‌ನಲ್ಲಿ ಕಸ್ಟಮ್ಸ್ ಇಲಾಖೆಯ ಮೇಲ್ವಿಚಾರಣೆಯಲ್ಲಿ ಕಂಟೈನರ್‌ಗಳಲ್ಲಿ ಹಸುವಿನ ಸಗಣಿ ಪ್ಯಾಕ್ ಮಾಡುವ ಕೆಲಸ ನಡೆಯುತ್ತಿದೆ. ಇದರ ಮೊದಲ ರವಾನೆಯಾಗಿ ಜೂನ್ 15 ರಂದು ಕಕನಾಪುರ ರೈಲು ನಿಲ್ದಾಣದಿಂದ ರವಾನೆಯಾಗಲಿದೆ ಎಂದು ಅವರು ಮಾಹಿತಿ ನೀಡಿದರು.

2020-21ರಲ್ಲಿ ಭಾರತದಿಂದ ಪ್ರಾಣಿ ಉತ್ಪನ್ನಗಳ ರಫ್ತು 27,155.56 ಕೋಟಿ ರೂಪಾಯಿಗಳಾಗಿದೆ ಎಂದು ಅತುಲ್ ಗುಪ್ತಾ ಹೇಳಿದರು. ಇದಲ್ಲದೇ ಸಾವಯವ ಗೊಬ್ಬರದ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದೆ. ದೇಶೀಯ ಹಸುವಿನ ಸಗಣಿ ಸಂಶೋಧನೆಯ ನಂತರ ಅನೇಕ ದೇಶಗಳು ಕಂಡುಕೊಂಡಿವೆ, ಇದು ಬೆಳೆಗಳ ಉತ್ಪಾದನೆಯನ್ನು ಹೆಚ್ಚಿಸುವುದಲ್ಲದೆ, ಅದರಿಂದ ಉತ್ಪತ್ತಿಯಾಗುವ ಉತ್ಪನ್ನಗಳ ಬಳಕೆಯು ಗಂಭೀರ ಕಾಯಿಲೆಗಳಿಂದ ಮನುಷ್ಯರನ್ನು ಮುಕ್ತಗೊಳಿಸುತ್ತದೆ. 

ದಾಸವಾಳದ ಹೂವಿನಲ್ಲಿದೆ ಅದ್ಬುತ ರಹಸ್ಯ! ನೀವು ಇದನ್ನೂ ತಿಳಿಯಲೆಬೇಕು!

ಪಳ-ಪಳ ಹೊಳೆಯುವ ಸೌಂದರ್ಯ ನಿಮ್ಮದಾಗಬೇಕೆ? Vitamin E ನಲ್ಲಿದೆ ರಹಸ್ಯ.

ಇದೇ ಕಾರಣಕ್ಕೆ ಅನೇಕ ದೇಶಗಳು ಭಾರತದಿಂದ ಸಾವಯವ ಗೊಬ್ಬರದ ಜೊತೆಗೆ ದೇಶಿ ಹಸುವಿನ ಸಗಣಿ ಆಮದು ಮಾಡಿಕೊಳ್ಳಲು ಆರಂಭಿಸಿವೆ.

ಖರ್ಜೂರದ ಬೆಳೆಗೆ ಪೌಡರ್ ರೂಪದಲ್ಲಿ ಬಳಸುವುದರಿಂದ ಹಣ್ಣಿನ ಗಾತ್ರದಲ್ಲಿ ಹೆಚ್ಚಳ ಹಾಗೂ ಉತ್ಪಾದನೆಯಲ್ಲಿ ನಿರೀಕ್ಷಿತ ಹೆಚ್ಚಳ ಕಂಡುಬಂದಿರುವುದನ್ನು ಕುವೈತ್ ನ ಕೃಷಿ ವಿಜ್ಞಾನಿಗಳು ವ್ಯಾಪಕ ಸಂಶೋಧನೆಯ ನಂತರ ಕಂಡುಕೊಂಡಿದ್ದಾರೆ ಎಂದರು. ಈ ಕಾರಣಕ್ಕಾಗಿಯೇ ಕುವೈತ್ ಮೂಲದ ಕಂಪನಿ ಲಾಮೋರ್ ಜೈಪುರ ಸಂಸ್ಥೆಯಿಂದ 192 ಮೆಟ್ರಿಕ್ ಟನ್ ದೇಶಿ ಹಸುವಿನ ಸಗಣಿ ಆಮದು ಮಾಡಿಕೊಳ್ಳಲು ಆರ್ಡರ್ ಮಾಡಿದೆ.

Butter milk ‍& Curd: ಮಜ್ಜಿಗೆ ಮತ್ತು ಮೊಸರು ಯಾವುದು ಬೆಸ್ಟ್‌..?

ಹೆಚ್ಚು ಉಪ್ಪು ನಮ್ಮ ದೇಹದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

Published On: 15 June 2022, 11:05 AM English Summary: Cow Dung Export To Kuwait From Jaipur

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.