1. ಸುದ್ದಿಗಳು

ಅಗಸರು ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವವರಿಗೆ ಪರಿಹಾರ ವಿತರಣೆ- ಅರ್ಜಿ ಸಲ್ಲಿಕೆಗೆ ಜುಲೈ 10 ಕೊನೆ ದಿನ

ಕೊರೋನಾ ವೈರಸ್ (ಕೋವಿಡ್-19)ರ ಲಾಕ್‍ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಅಗಸರು ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರು 5000 ರೂ.ಗಳ ಪರಿಹಾರ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕವನ್ನು  ಜುಲೈ 10 ರವರೆಗೆ ವಿಸ್ತರಿಸಲಾಗಿದೆ.

ಅಗಸ, ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಫಲಾನುಭವಿಗಳು ಸೇವಾ ಸಿಂಧು https://sevasindhu.karnataka.gov.in ಪೋರ್ಟಲ್‍ನಲ್ಲಿ ಅನ್‍ಲೈನ್ ಅರ್ಜಿ ಸಲ್ಲಿಸಬೇಕು. ನಂತರ ಫಲಾನುಭವಿಗಳ ಅರ್ಜಿ ಪರಿಶೀಲಿಸಿ ಆಧಾರ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಡಿ.ಬಿ.ಟಿ. ಮೂಲಕ ಪರಿಹಾರವನ್ನು ವರ್ಗಾಯಿಸಲಾಗುತ್ತದೆ. 

ಕರ್ನಾಟಕದಲ್ಲಿ ಅಗಸ ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ವಲಸೆ ಕಾರ್ಮಿಕರು (ಕುಟುಂಬದಲ್ಲಿ ಒಬ್ಬರಿಗೆ ಮಾತ್ರ)  ಪರಿಹಾರ ಪಡೆಯಲು ಅರ್ಹರು. ಫಲಾನುಭವಿಗಳ ವಯೋಮಿತಿ 18 ರಿಂದ 65 ವರ್ಷದೊಳಗಿರಬೇಕು. ಕರ್ನಾಟಕ ರಾಜ್ಯದಲ್ಲಿ ಬಿ.ಪಿ.ಎಲ್. ಕಾರ್ಡ್ ಹೊಂದಿರಬೇಕು. ಕಡ್ಡಾಯವಾಗಿ ಆಧಾರ್ ಸಂಖ್ಯೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಹೊಂದಿರಬೇಕು.

ಅರ್ಹ ಫಲಾನುಭವಿಗಳು  ಅವಶ್ಯಕ ದಾಖಲೆಗಳಾದ ಅಗಸ, ಕ್ಷೌರಿಕ ವೃತ್ತಿ ನಿರ್ವಹಿಸುತ್ತಿರುವ ಕುರಿತು ನಿಗದಿತ ನಮೂನೆಯಲ್ಲಿ ಅಧಿಕಾರಿಗಳಿಂದ ಪಡೆದ ಉದ್ಯೋಗ ಧೃಡಿಕರಣ ಪತ್ರ, ನಿಗದಿತ ನಮೂನೆಯಲ್ಲಿ ಸ್ವಯಂ ಘೋಷಣೆ, ಬಿ.ಪಿ.ಎಲ್ ಕಾರ್ಡ್, ಆಧಾರ್ ಕಾರ್ಡ್, ಜನ್ಮ ದಿನಾಂಕ ದಾಖಲೆ ಹಾಗೂ ಪಾಸ್ ಪೋರ್ಟ್ ಅಳತೆ ಇತ್ತೀಚಿನ ಭಾವಚಿತ್ರದೊಂದಿಗೆ ಆನ್‍ಲೈನ್ ಮೂಲಕ ಜುಲೈ 10ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಅಗಸರು ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರು ಈ ಪರಿಹಾರದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜೂನ್ 30 ರಂದು ನಿಗದಿಪಡಿಸಲಾಗಿತ್ತು.

Published On: 03 July 2020, 09:25 PM English Summary: Distribution of compensation for laundryman and barbers extension of application date

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.