1. ಸುದ್ದಿಗಳು

Crop compensation ಕರ್ನಾಟಕದಲ್ಲಿ ಬರ: ರಾಜ್ಯ ಸರ್ಕಾರದಿಂದ 2,000 ಸಾವಿರ ರೂ. ಬೆಳೆ ಪರಿಹಾರ

Hitesh
Hitesh
ರೈತರಿಗೆ ಮೊದಲ ಕಂತಿನಲ್ಲಿ 2 ಸಾವಿರ ರೂಪಾಯಿ ಬೆಳೆ ಪರಿಹಾರ

ಕರ್ನಾಟಕದಲ್ಲಿ ಈ ಬಾರಿ ಬರ ಎದುರಾಗಿದ್ದು, ರೈತರು ಸಂಕಷ್ಟದಲ್ಲಿ ಇದ್ದಾರೆ. ಈ ನಡುವೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ವಾಕ್ಸಮರ ಮುಂದುವರಿದಿದೆ.

ಈ ನಡುವೆ ರಾಜ್ಯ ಸರ್ಕಾರವು ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ 2,000 ಸಾವಿರ ರೂಪಾಯಿ ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡಲು ಮುಂದಾಗಿದೆ.  

ಈ ಸಂಬಂಧ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ  

ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ.

ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ

ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ  2,000 ಸಾವಿರ ರೂಪಾಯಿ

ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ ಅನುಮತಿ ಕೋರಲಾಗಿತ್ತು.

ಆದರೆ,  ಇನ್ನೂ ಅನುಮತಿ ನೀಡಿಲ್ಲ. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಿದ್ದೇವೆ‌.

ಅಲ್ಲದೇ 18,171 ಕೋಟಿ ರೂಪಾಯಿ ಪರಿಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ.

ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ವಾಪಾಸ್ ಕೊಟ್ಟರೂ ಸಾಕು ನಮ್ಮ ರೈತರ ಕಷ್ಟಕ್ಕೆ ಸಹಾಯವಾಗುತ್ತಿತ್ತು ಎಂದು ಹೇಳಿದ್ದಾರೆ.

ಇನ್ನು ಸೆಪ್ಟಂಬರ್ 21ರಂದು ಬರಪರಿಹಾರಕ್ಕಾಗಿ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು.

ಕೇಂದ್ರದ ಅಧ್ಯಯನ ತಂಡ ಅಕ್ಟೋಬರ್ 4 ರಿಂದ 9ರವರೆಗೆ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿ ನೀಡಿದೆ.

ರಾಜ್ಯ ಸರ್ಕಾರವು ಕೇಂದ್ರ ತಂಡವನ್ನು ಭೇಟಿ ಮಾಡಿ ಚರ್ಚಿಸಿ ಬರದ ಸ್ಥಿತಿ ವಿವರಿಸಿದ್ದೇವೆ.

ಕರ್ನಾಟಕದಲ್ಲಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ರೂ.4,663 ಕೋಟಿ ಬೆಳೆ ನಷ್ಟ ಪರಿಹಾರ ಕೇಂದ್ರಕ್ಕೆ ಕೇಳಿದ್ದೆವು.

ಕೇಂದ್ರ ಸಚಿವರಿಗೂ ಮನವಿ ಮಾಡಿದ್ದೇವೆ. ಕೇಂದ್ರ ಕೃಷಿ ಮತ್ತು ಗೃಹ ಸಚಿವರನ್ನು ಖುದ್ದು ಭೇಟಿ ಮಾಡಲು ಸಮಯ

ನೀಡುವಂತೆ ಮನವಿ ಪತ್ರ ಬರೆಯಲಾಗಿತ್ತು. ಆದರೆ, ಅದಕ್ಕೂ ಸಮಯ ಕೊಟ್ಟಿಲ್ಲ ಎಂದು ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ನವೆಂಬರ್‌ ಅಂತ್ಯದ ವರೆಗೂ ಕೇಂದ್ರ ಸರ್ಕಾರ ಸಭೆಯನ್ನೇ ನಡೆಸಿಲ್ಲ. ಸಮಯ ಕೇಳಿದರೂ ಭೇಟಿಗೆ ಅವಕಾಶ ಕೊಟ್ಟಿಲ್ಲ.

ಅಧಿಕಾರಿಗಳನ್ನಾದರೂ ಭೇಟಿ ಮಾಡಿ, ಪರಿಸ್ಥಿತಿ ತಿಳಿಸುವಂತೆ ರಾಜ್ಯದ ಮೂವರು ಸಚಿವರನ್ನು ದೆಹಲಿಗೆ ತೆರಳಲು ಸೂಚನೆ ನೀಡಿದ್ದೆ.

3 ಜನ‌ ದೆಹಲಿಗೆ ಹೋಗಿ ಅಧಿಕಾರಿಗಳಿಗೆ ವಿವರಿಸಿದ್ದಾರೆ.

ವಿತ್ತ ಸಚಿವರನ್ನು ನಮ್ಮ ಮಂತ್ರಿಗಳು ಭೇಟಿ ಮಾಡಿದ್ದಾರೆ. ಆದರೂ ಕೇಂದ್ರ ಸರ್ಕಾರ ಇವತ್ತಿನವರೆಗೆ ಸಭೆ ನಡೆಸಿಲ್ಲ.

ಪರಿಹಾರ ನೀಡುವ‌ ಪ್ರಕ್ರಿಯೆಯನ್ನೇ ಶುರು ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮೆ ಪರಿಹಾರಕ್ಕೆ ರಾಜ್ಯ ಸರ್ಕಾರ ಈಗಾಗಲೇ 6.5 ಲಕ್ಷ ರೈತರಿಗೆ ರೂ.460 ಕೋಟಿ ನಮ್ಮ ಸರ್ಕಾರ ಬಿಡುಗಡೆ ಮಾಡಿದೆ.

ಕುಡಿಯುವ ನೀರು, ಮೇವಿಗೆ ರೂ.327 ಕೋಟಿ ಬಿಡುಗಡೆ, ರೂ.780 ಕೋಟಿ ಡಿಸಿಗಳ PD ಖಾತೆಯಲ್ಲಿದೆ. ಅವರೂ ತಹಶೀಲ್ದಾರ್‌ಗಳಿಗೆ ಬಿಡುಗಡೆ ಮಾಡಿದ್ದಾರೆ.

ಯಾವ ತಾಲ್ಲೂಕುಗಳಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಇಲ್ಲದಂತೆ ನಿರ್ವಹಿಸಿದ್ದೇವೆ ಎಂದು ಹೇಳಿದ್ದಾರೆ.

ವಿವಿಧ ತಾಲ್ಲೂಕುಗಳ 60 ಹಳ್ಳಿಗಳಲ್ಲಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಿದ್ದೇವೆ. ಹೊರ ರಾಜ್ಯಕ್ಕೆ ಮೇವು ಹೋಗದಂತೆ ತಡೆದಿದ್ದೇವೆ.

ಮೇವಿನ‌ ಬೀಜ ವಿತರಣೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.   

ಪೂರಕ ಮಾಹಿತಿ: CMofKarnataka

Published On: 04 December 2023, 12:24 PM English Summary: Drought in Karnataka: 2,000 thousand from the state government. Crop compensation

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.