1. ಸುದ್ದಿಗಳು

ಭಾರತದಲ್ಲಿ ಬಿಸಿಲು ಗಾಳಿ ತೀವ್ರತೆ ಅಂತ್ಯ: ಹವಾಮಾನ ಇಲಾಖೆ ವರದಿ!

Hitesh
Hitesh
End of Heat waves in India: Meteorological department report!

ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ತೀವ್ರತೆ ಹೆಚ್ಚಾಗಿದೆ. ಇದೀಗ ಬಿಸಿಲಿನ ತೀವ್ರ ಝಳ ಇಳಿಕೆಯಾಗಿದ್ದು,

ಇನ್ನು ಕೆಲವೇ ದಿನಗಳಲ್ಲಿ ಬಿಸಿಲಿನ ತಾಪಮಾನವು ಇಳಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.   

ರಾಜ್ಯದ ವಿವಿಧೆಡೆ ಮುಂದುವರಿದ ಧಾರಾಕಾರ ಮಳೆ!

ರಾಜ್ಯದ ವಿವಿಧೆಡೆ ಮಳೆ ಮುಂದುವರಿದಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ರಾಜ್ಯದ ಹಲವು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.

ಕಳೆದ 24 ಗಂಟೆಯ ಅವಧಿಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವುದು ವರದಿ ಆಗಿದೆ.

ಇನ್ನು ಗುರುವಾರ ಹಾಗೂ ಶುಕ್ರವಾರ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ; ಕರಾವಳಿ ಮತ್ತು

ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಿಂಚು- ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ

ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಒಂದೆರಡು ಸಲ ಬಲವಾದ

ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ

ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
----------------------------------

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ

ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಅಧಿಕಾರಿಗಳಿಗೆ ಕೆಲವು ನಿರ್ದಿಷ್ಟ ಸೂಚನೆಗಳನ್ನು ನೀಡಿದ್ದಾರೆ.

ರಾಜ್ಯದ ಮಾನ್ಸೂನ್‌ ಪ್ರಾರಂಭವಾಗಲಿದ್ದು,  ಬಿತ್ತನೆ ಬೀಜ ವಿತರಣೆ ಸೇರಿದಂತೆ ಅಗತ್ಯ ಕ್ರಮ ವಹಿಸಬೇಕು. 

ಸಿಡಿಲು, ಆಲಿಕಲ್ಲು ಮಳೆಯಿಂದ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ, ಅನಾಹುತಗಳಾಗಿವೆ.

ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ.

ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್‌ ಗೆ ಹೋಗಬೇಕು.

ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು.

ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ ಎಂದು ಹೇಳಿದ್ದಾರೆ.

ಅಲ್ಲದೇ ಯಾವುದೇ ಕಾರಣಕ್ಕೂ ಕರ್ತವ್ಯಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ,

ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ.

ಯಾವುದೇ ಕಾರಣಕ್ಕೂ ಲೋಪ ಆಗಬಾರದು ಎಂದು ಇದೇ ಸಂದರ್ಭದಲ್ಲಿ ಎಚ್ಚರಿಕೆಯನ್ನು ನೀಡಿದ್ದಾರೆ.

ಜಿಲ್ಲಾಧಿಕಾರಿಗಳು, ಸಿಇಒಗಳದ್ದು ಜವಾಬ್ದಾರಿಯುತ ಸ್ಥಾನವಾಗಿದೆ.

ಜೊತೆಗೆ ಪೊಲೀಸ್‌ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ.

ಆಲಸ್ಯ ಬಿಟ್ಟು ಕೆಲಸ ಮಾಡಿ ಬಹಳ ಜನ ಜಿಲ್ಲಾಧಿಕಾರಿಗಳು ತಾಲ್ಲೂಕುಗಳಿಗೆ ಭೇಟಿ ನೀಡಿರುವುದಿಲ್ಲ.

ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು ಎಂದು ತಾಕೀತು ಮಾಡಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ- ಮುನ್ಸೂಚನೆ ಅರಿತು ಕೆಲಸ ಮಾಡಿ.

ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ.

ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು.

ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಸೂಚಿಸಿದರು.
----------------------------------
ಭಾರತದಲ್ಲಿ ಬಿಸಿಲು ಗಾಳಿ ಹಾಗೂ ಬಿಸಿಲಿನ ಝಳ ಇಳಿಕೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಭಾರತದ ವಿವಿಧ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರ ಝಳದಿಂದಾಗಿ ಹಲವರು ಮೃತಪಟ್ಟಿದ್ದರು.

ಕರ್ನಾಟಕದ ಯಾದಗಿರಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗದಲ್ಲಿ ಬಿಸಿಲಿನ ಝಳವು ತೀವ್ರವಾಗಿತ್ತು.

ಇದೀಗ ಭಾರತದಲ್ಲಿ ಬುಧವಾರದಿಂದ ಬಿಸಿಗಾಳಿ ಅಂತ್ಯಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ದಿನಗಳಲ್ಲಿ ತಾಪಮಾನ ಪ್ರಮಾಣ ಇಳಿಕೆಯಾಗಲಿದ್ದು, ಇನ್ನು ಎರಡು ದಿನದಲ್ಲಿ ನೈರುತ್ಯ

ಮುಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  

Pic Credits: pexels  

Published On: 25 May 2023, 12:40 PM English Summary: End of Heat waves in India: Meteorological department report!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.