1. ಸುದ್ದಿಗಳು

ರೈತರಿಗೆ ಗುಡ್‌ನ್ಯೂಸ್‌; ಶೀಘ್ರದಲ್ಲೇ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್‌ ಸ್ಥಾಪನೆ!

Kalmesh T
Kalmesh T
Establishment of Nandini Milky Way Samurdhi Bank soon

ಎಲ್ಲ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್‌ ಪ್ರಾರಂಭಿಸಲಾಗುವುದು ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಇದನ್ನೂ ಓದಿರಿ: ನಕಲಿ ಬೀಜ, ರಸಗೊಬ್ಬರ ಮಾರಾಟಗಾರರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸಚಿವ ಬಿ.ಸಿ. ಪಾಟೀಲ್‌ ಖಡಕ್‌ ಸೂಚನೆ

ರಾಜ್ಯದಲ್ಲಿ 9 ಲಕ್ಷ ಮಹಿಳೆಯರು ಸೇರಿ 26 ಲಕ್ಷ ರೈತರು ಹಾಲು ಉತ್ಪನ್ನ ಸಹಕಾರ ಸಂಘಗಳಿಗೆ ಹಾಲು ಮಾರಾಟ ಮಾಡುತ್ತಿದ್ದಾರೆ. ಆ ಎಲ್ಲ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್‌ ಪ್ರಾರಂಭಿಸಿ 26 ಲಕ್ಷ ಜನರಿಗೆ ಸದಸ್ಯತ್ವ ನೀಡಿ ಕ್ರೆಡಿಟ್ ಕಾರ್ಡ್, ಇತರ ಸೌಲಭ್ಯ ಒಳಗಿಸುವ ಚಿಂತನೆ ನಡೆದಿದೆ.

ಕಲಾಭವನದಲ್ಲಿ ನಡೆದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಹಕಾರ ಕ್ಷೇತ್ರದಲ್ಲಿನ ಸೊಸೈಟಿ, ಬ್ಯಾಂಕ್‌ಗಳಲ್ಲಿನ ಮೋಸ, ಅವ್ಯವಹಾರ, ಭ್ರಷ್ಟಾಚಾರ ಹಾಗೂ ದುರ್ಬಳಕೆ ತಡೆಗೆ ಈಗಿರುವ ಕಾನೂನುಗಳ ಜತೆಗೆ ಇನ್ನೂ ಕಠಿನ ಕಾನೂನು ಜಾರಿಗೆ ತರಲಾಗುವುದು.

ನಬಾರ್ಡ್‌ ನೇಮಕಾತಿ: ಪದವೀಧರರಿಗೆ ಇಲ್ಲಿದೆ ಉತ್ತಮ ಅವಕಾಶ; ತಿಂಗಳಿಗೆ 1,45,000 ಸಂಬಳ!

ಅವ್ಯವಹಾರ ತಡೆಗೆ ಕಠಿನ ಕ್ರಮ

ರಾಜ್ಯದಲ್ಲಿ 21 ಡಿಸಿಸಿ, 1 ಅಪೆಕ್ಸ್ ಬ್ಯಾಂಕ್, 5,400 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿದ್ದು, 40-50 ಸಂಘಗಳಲ್ಲಿ ಮೋಸ, ಅವ್ಯವಹಾರ, ಭ್ರಷ್ಟಾಚಾರ ನಡೆಯಬಹುದು.

ಅಂದ ಮಾತ್ರಕ್ಕೆ ಇಡೀ ಸಹಕಾರ ಕ್ಷೇತ್ರದಲ್ಲಿ ಅವ್ಯವಹಾರ, ಮೋಸ, ಭ್ರಷ್ಟಾಚಾರ ನಡೆಯುತ್ತದೆ ಎನ್ನುವುದು ಸರಿಯಲ್ಲ ಆದರೂ ಅವ್ಯವಹಾರ ತಡೆಗೆ ಸರಕಾರ ಇನ್ನೂ ಹೆಚ್ಚಿನ ಅಗತ್ಯ ಕಠಿನ ಕ್ರಮ ತೆಗೆದುಕೊಳ್ಳಲಿದೆ ಎಂದರು.

Rain Update: ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆ ಸಾಧ್ಯತೆ..!

ಶೀಘ್ರ ಸಾಫ್ಟ್ ವೇರ್ ಅಳವಡಿಕೆ

ರೈತರಿಗೆ ಸಾಲ ವಿತರಣೆ, ಮರುಪಾವತಿ ಇನ್ನಿತರ ವಿಷಯಗಳ ಬಗ್ಗೆ ನಿಗಾ ವಹಿಸಲು ಕೇಂದ್ರ ಸರಕಾರ ಒಂದೇ ಸಾಫ್ಟ್‌ವೇರ್ ಅಳವಡಿಸುವ ಚಿಂತನೆ ನಡೆಸಿದೆ.

ರಾಜ್ಯದಲ್ಲೂ ಸಾಫ್ಟ್ ವೇರ್ ಅಳವಡಿಸಲಾಗುವುದು ಎಲ್ಲ ರೈತರಿಗೆ ಸಹಕಾರ ಸಂಘ, ಬ್ಯಾಂಕ್‌ಗಳ ಮೂಲಕ ಸಾಲ ಸೌಲಭ್ಯ ದೊರೆಯಬೇಕು ಎಂದು ಹೇಳಿದರು.

Published On: 29 June 2022, 05:25 PM English Summary: Establishment of Nandini Milky Way Samurdhi Bank soon

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.