1. ಸುದ್ದಿಗಳು

ಮೀನುಗಾರರಿಗೆ ಭರ್ಜರಿ ಗಿಫ್ಟ್‌ : ಬಡ್ಡಿ ರಹಿತವಾಗಿ ನೀಡುತ್ತಿದ್ದ ಸಾಲದ ಮಿತಿ 3 ಲಕ್ಷಕ್ಕೆ ಹೆಚ್ಚಳ!

Kalmesh T
Kalmesh T
Fishermen’s interest-free loan limit increased to 3 lakh: CM Siddaramaiah

Interest-free loan : ಮೀನುಗಾರರ ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ ನೀಡಲಾದ 2023ರ ಬಜೆಟ್‌ನ ಯೋಜನೆಗಳು. ಮೀನುಗಾರರಿಗೆ ಇಲ್ಲಿವೆ ಮಹತ್ವದ ಯೋಜನೆಗಳು

ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ. ಗಳಿಂದ 3 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗುವುದು.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್‌ ಮಿತಿಯನ್ನು ಒಂದೂವರೆ ಲಕ್ಷ ಕಿಲೋ ಲೀಟರ್‌ನಿಂದ ಎರಡು ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸಲಾಗುವುದು. ಇದರಿಂದ ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳಷ್ಟು ನೆರವಾಗಲಿದೆ. 

ಮೀನುಗಾರಿಕಾ ದೋಣಿಗಳಲ್ಲಿನ ಸೀಮೆ ಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್‌/ಡೀಸೆಲ್ ಇಂಜಿನ್‌ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 4,000 ಸೀಮೆ ಎಣ್ಣೆ ಇಂಜಿನ್‌ಗಳ ಬದಲಾವಣೆಗೆ 20 ಕೋಟಿ ರೂ. ಸಹಾಯಧನ ಒದಗಿಸಲಾಗುವುದು. 

ರಾಜ್ಯದ ಜಲಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚಿನ ಮೀನು ಮರಿಗಳನ್ನು ಉತ್ಪಾದಿಸುವ ಮೂಲಕ ಒಳನಾಡು ಮೀನುಗಾರಿಕೆಗೆ ಇರುವ ವಿಪುಲ ಅವಕಾಶಗಳನ್ನು ಉಪಯೋಗಿಸಿಕೊಳ್ಳಲಾಗುವುದು. ಜೊತೆಗೆ, ಹೆಚ್ಚಿನ ಬೇಡಿಕೆಯಿರುವ ಕಾಟ್ಲಾ ಮತ್ತು ರೋಹು ಮೀನು ಮರಿಗಳನ್ನು ಅಧಿಕ ಪ್ರಮಾಣದಲ್ಲಿ ಉತ್ಪಾದಿಸಿ ಒಳನಾಡು ಮೀನುಗಾರಿಕೆಯನ್ನು ಪ್ರೋತ್ಸಾಹಿಸಲಾಗುವುದು. 

ಸೀಗಡಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಉತ್ತಮ ಮಾರುಕಟ್ಟೆಯನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು. ಮೀನುಗಾರಿಕೆಗೆ ಈಗ ಲಭ್ಯವಿರುವ ಶೈತ್ಯಾಗಾರಗಳನ್ನು ದುಪ್ಪಟ್ಟುಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ಜಾರಿಗೆ ತರಲಾಗುವುದು.

* ಕೃಷಿ ಭಾಗ್ಯ ಯೋಜನೆಗೆ ಮನ್ರೇಗಾ ಯೋಜನೆಯಡಿಯಲ್ಲಿ ₹100 ಕೋಟಿ

* 20 ಲಕ್ಷದವರೆಗಿನ ಸಾಲಕ್ಕೆ ಶೇಕಡ 4 ರ ಬಡ್ಡಿ ದರದಲ್ಲಿ ಸಹಾಯಧನ

* ಕೃಷಿ ಉದ್ಯಮ ಉತ್ತೇಜಿಸಲು ನವೋದ್ಯಮ ಯೋಜನೆಗೆ ₹10 ಕೋಟಿ

* ನಂದಿನಿ ಮಾದರಿಯ ಏಕೀಕೃತ ಬ್ಯಾಂಡಿಂಗ್‌ಗೆ ₹10 ಕೋಟಿ

* ಕಿರು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ₹5 ಕೋಟಿ

Published On: 07 July 2023, 02:33 PM English Summary: Fishermen’s interest-free loan limit increased to 3 lakh: CM Siddaramaiah

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.