2020-21 ನೇ ಸಾಲಿನಲ್ಲಿ 160.28 ಲಕ್ಷ ಟನ್ ಆಹಾರ ಧಾನ್ಯ ಉತ್ಪಾದನೆಯಾಗಿದ್ದು, ಪ್ರಸಕ್ತ ಸಾಲಿನಲ್ಲಿ 144.67 ಲಕ್ಷ ಟನ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಇದನ್ನೂ ಓದಿರಿ: ಬ್ರೇಕಿಂಗ್; 276 ಕಳಪೆ ಬೀಜ ವಿತರಣೆ ಪ್ರಕರಣ ದಾಖಲು, 416 ಪರವಾನಗಿ ರದ್ದು!
2020-21 ನೇ ಸಾಲಿನಲ್ಲಿ 160.28 ಲಕ್ಷ ಟನ್ ಆಹಾರ ಧಾನ್ಯ ಉತ್ಪಾದನೆಯಾಗಿದ್ದು, ಪ್ರಸಕ್ತ ಸಾಲಿನಲ್ಲಿ 144.67 ಲಕ್ಷ ಟನ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಬಿ.ಸಿ. ಪಾಟೀಲ ಮಾತನಾಡಿದರು.
ಮುಂಗಾರು ಹಂಗಾಮಿನಲ್ಲಿ 52.67 ಲಕ್ಷ ಟನ್ ಹೆಕ್ಟೇರು ಪ್ರದೇಶದಲ್ಲಿ ಬಿತ್ತನೆ ಗುರಿ ಇದ್ದು, ಈವರೆಗೆ 36.47 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮುಂಗಾರು ಬಿತ್ತನೆ ಮಾಡಲಾಗಿದೆ ಎಂದು ತಿಳಿಸಿದರು.
ಗುಡ್ನ್ಯೂಸ್: ರಾಜ್ಯದ ರೈತರ ಏಳ್ಗೆಗಾಗಿ 400 ಕೋಟಿ ಅನುದಾನ ಮೀಸಲು- ಸಚಿವ ಬಿ.ಸಿ. ಪಾಟೀಲ
2022-23 ನೇ ಸಾಲಿನ ಮುಂಗಾರು ಹಂಗಾಮಿಗೆ 26.76 ಲಕ್ಷ ಟನ್ ರಸಗೊಬ್ಬರದ ಬೇಡಿಕೆ ಇದ್ದು, ಜುಲೈ 4ರವರೆಗೆ 11.91 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜು ಮಾಡಲಾಗಿದೆ ಎಂದರು.
ಖಾಸಗಿ ಮಾರಾಟಗಾರರು ಹಾಗೂ ಸಹಕಾರ ಸಂಘಗಳಲ್ಲಿ ಒಟ್ಟು 6.41 ಲಕ್ಷ ಮೆಟ್ರಿಕ್ ಟನ್ ದಾಸ್ತಾನಿದ್ದು, ರಸಗೊಬ್ಬರದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಮುಂದುವರೆಯಲಿದೆ ಮಳೆಯಬ್ಬರ; ಇನ್ನೂ 4-5 ದಿನಗಳ ಕಾಲ ಭಾರೀ ಮಳೆ..!
Share your comments