1. ಸುದ್ದಿಗಳು

ಪುಟ್ಬಾಲ್‌ ದಂತಕಥೆ ಬ್ರೇಜಿಲ್‌ನ ಪೆಲೆ ವಿಧಿವಶ

Hitesh
Hitesh
Pele

ಇಂದಿನ ಪ್ರಮುಖ ಸುದ್ದಿಗಳು 

1. ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಜಲ ಆಯೋಗ ಸಮ್ಮತಿ: ಉತ್ತರ ಕರ್ನಾಟಕದ ಬಹುದಿನಗಳ ಕನಸಿಗೆ ಜೀವ
2. ಕಳಸಾ ಬಂಡೂರಿ ಯೋಜನೆಗೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
3. ಹೆಚ್ಚಿನ ಸಬ್ಸಿಡಿ ದರದಲ್ಲಿ ರಸಗೊಬ್ಬರ ಲಭ್ಯತೆ: ಮನ್ಸುಖ್ ಮಾಂಡವಿಯಾ
4. ಎಂಎಸ್‌ಪಿ ನಿಗದಿತ ಬೆಲೆ ಉತ್ತಮ ಬೆಲೆಯಲ್ಲ: ನೀತಿ ಆಯೋಗದ ಸದಸ್ಯ ರಮೇಶ್ ಚಂದ್
5. ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್‌ ಇನ್ನಿಲ್ಲ
6. ಪುಟ್ಬಾಲ್‌ ದಂತಕಥೆ ಬ್ರೇಜಿಲ್‌ನ ಪೆಲೆ ವಿಧಿವಶ
7. ಕೋಲಾರದಲ್ಲಿ ಕರ್ನಾಟಕದ ಮೊದಲ ಆನೆಗಳ ಆರೈಕೆ ಕೇಂದ್ರ
8. ಬೆಳೆ ವಿಮೆಗೆ ಈ ಬಾರಿ 19.61 ಲಕ್ಷ ರೈತರು ಹೆಸರು ನೋಂದಣಿ
9. ರೈತರಿಗೆ ಸಕಾಲದಲ್ಲಿ ಸಿಗದ ಪರಿಹಾರ: ಕೋನರಡ್ಡಿ ಆಕ್ರೋಶ
10. ರಾಜ್ಯದಲ್ಲಿ ಐದು ಮೆಗಾ ಹಾಸ್ಟೆಲ್‌ಗಳ ನಿರ್ಮಾಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

1. ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ. ಇದರಿಂದ ಉತ್ತರ ಕರ್ನಾಟಕದ ಜಿಲ್ಲೆಗಳ ಬಹುದಿನಗಳ ಕನಸು ನನಸಾದಂತಾಗಿದೆ. ಉತ್ತರ ಕರ್ನಾಟಕದ ಧಾರವಾಡ, ಬೆಳಗಾವಿ ಹಾಗೂ ಗದಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದಂತಾಗಿದೆ. ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕಳುಹಿಸಿದ್ದ ಡಿಪಿಆರ್‌ಗೆ ಜಲ ಆಯೋಗದ ಅನುಮತಿ ಸಿಕ್ಕಿದೆ. ಕಳಸಾ ಬಂಡೂರು ಯೋಜನೆಗೆ ಕೇಂದ್ರ ಜಲ ಆಯೋಗ ಸಮ್ಮತಿ ನೀಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ರಾಜ್ಯ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್ ಅವರನ್ನು ಭೇಟಿ ಮಾಡಿದ್ದರು.
-------------------

-------------------
2. ಕಳಸಾ ಬಂಡೂರಿ ಡಿಪಿಆರ್‌ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ತಕ್ಷಣವೇ ಟೆಂಡರ್ ಪ್ರಕ್ರಿಯೆ ಆರಂಭಿಸಿ, ಕಾಮಗಾರಿ ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಗುರುವಾರ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಸಿಹಿಸುದ್ದಿ ನೀಡಿದ್ದಾರೆ. ಕೂಡಲೇ ಕಾಮಗಾರಿ ಕೈಗೊಳ್ಳಲು ಕ್ರಮ ವಹಿಸಲಾಗುವುದು ಎಂದಿದ್ದಾರೆ.   
------------------- 

-------------------
3. ದೇಶಾದ್ಯಂತ 9000ಕ್ಕೂ ಹೆಚ್ಚು ಪ್ರಧಾನ ಮಂತ್ರಿ ಕಿಸಾನ್ ಸಮೃತಿ ಕೇಂದ್ರಗಳಲ್ಲಿ (PMKSK) ರೈತರು ಮತ್ತು ಚಿಲ್ಲರೆ ವ್ಯಾಪಾರಿಗಳೊಂದಿಗೆ ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ವೀಡಿಯೊ ಸಂವಾದ ನಡೆಸಿದರು. PMKSKಗಳು ಎಲ್ಲಾ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸುತ್ತಿದ್ದು, ರೈತರು ಎದುರಿಸುತ್ತಿರುವ ದೈನಂದಿನ ಸಮಸ್ಯೆಗಳನ್ನು ಪರಿಹರಿಸಲು ಇದು ವೇದಿಕೆಯಾಗಿದೆ. ಇನ್ನು ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ ಕೇಂದ್ರ ಸರ್ಕಾರವು ಹೆಚ್ಚಿನ ಸಬ್ಸಿಡಿ ದರದಲ್ಲಿ ರಸಗೊಬ್ಬರಗಳ ಲಭ್ಯತೆಯನ್ನು ಖಾತ್ರಿಪಡಿಸುತ್ತಿದೆ ಎಂದು ಅವರು ಸಭೆಯಲ್ಲಿ ಹೇಳಿದರು.
-------------------

Quick launch of Kalasa Banduri project: Chief Minister Basavaraja Bommai

-------------------

5. ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸ್ಥಿರ ಬೆಲೆಯನ್ನು ಖಾತರಿಪಡಿಸುತ್ತದೆ. ಆದರೆ, ಯಾವಾಗಲೂ ಉತ್ತಮ ಬೆಲೆಯನ್ನು ಮಾರುಕಟ್ಟೆಯಲ್ಲಿ ನ್ಯಾಯಯುತ ಸ್ಪರ್ಧೆಯ ಮೂಲಕ ಮಾತ್ರ ಖಚಿತಪಡಿಸಿಕೊಳ್ಳಬಹುದು ಎಂದು ನೀತಿ ಆಯೋಗದ ಸದಸ್ಯ ರಮೇಶ್ ಚಂದ್ ಶುಕ್ರವಾರ ಹೇಳಿದರು. ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್ ರೂರಲ್ ವಾಯ್ಸ್ ಆಯೋಜಿಸಿದ್ದ ಕೃಷಿ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ರೈತರು ತಮ್ಮ ಉತ್ಪನ್ನಗಳಿಗೆ ಉತ್ತಮ ಬೆಲೆಯನ್ನು ಪಡೆಯಲು ಬಯಸುತ್ತಾರೆ. ಬೆಲೆ ಏರಿಳಿತದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಇಚ್ಛಿಸುತ್ತಾರೆ. ನನ್ನ ದೃಷ್ಟಿಯಲ್ಲಿ ಎಂಎಸ್‌ಪಿ ಖಂಡಿತಾ ನಿಗದಿತ ಬೆಲೆಯೇ ಹೊರತು ಉತ್ತಮ ಬೆಲೆಯಲ್ಲ, ಮಾರುಕಟ್ಟೆಯಲ್ಲಿ ಪೈಪೋಟಿ ಇದ್ದರೆ ಮಾತ್ರ ರೈತರಿಗೆ ಉತ್ತಮ ಬೆಲೆ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.  
-------------------

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ ಅವರು ಶುಕ್ರವಾರ ಮುಂಜಾನೆ ಅನಾರೋಗ್ಯದಿಂದಾಗಿವಿಧಿವಶರಾಗಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ಮಾಡಿದ್ದು, “ಅಮ್ಮನಲ್ಲಿ ನಾನು ತ್ರಿಮೂರ್ತಿಗಳನ್ನು ಕಂಡಿದ್ದೇನೆ. ಅವರ ಜೀವನವು ತಪಸ್ವಿಯ ಪ್ರಯಾಣವಾಗಿತ್ತು. ನಿಷ್ಕಾಮಕರ್ಮಯೋಗಿಯ ಜೀವನ ಮತ್ತು ಮೌಲ್ಯಗಳಿಗೆ ಬದ್ಧವಾದ ಬದುಕಿನ ಸಂಕೇತವಾಗಿದ್ದರು” ಎಂದಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಹೀರಾಬೆನ್‌ ಅವರನ್ನು ಅಹಮದಾಬಾದ್‌ನ ಯು.ಎನ್.
ಮೆಹ್ತಾ ಇನ್‌ಸ್ಟಿಟ್ಯೂಟ್‌ ಆಫ್‌ ಕಾರ್ಡಿಯಾಲಜಿ ಆ್ಯಂಡ್‌ ರೀಸರ್ಚ್‌ ಸೆಂಟರ್‌ ಆಸ್ಪತ್ರೆಗೆ ಬುಧವಾರ ದಾಖಲಿಸಲಾಗಿತ್ತು. 
-------------------
6. ಫುಟ್ಬಾಲ್ನ ದಂತಕಥೆ ಎನಿಸಿಕೊಂಡಿರುವ ಬ್ರೇಜಿಲ್‌ನ ಪುಟ್ಬಾಲ್ ಆಟಗಾರ ಪೆಲೆ ಅವರು ಗುರುವಾರ ನಿಧನರಾಗಿದ್ದಾರೆ. ಪೆಲೆ ಅವರು ಬ್ರೇಜಿಲ್‌ಪುಟ್ಬಾಲ್‌ತಂಡವನ್ನು ಮೂರು ವಿಶ್ವಕಪ್ ಟೂರ್ನಿಗಳಲ್ಲಿ  ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೇ ಬ್ರೆಜಿಲ್ ಪರವಾಗಿ ಅತಿ ಹೆಚ್ಚು ಗೋಲು ಗಳಿಸಿದ ದಾಖಲೆಯನ್ನೂ ಅವರು ಮಾಡಿದ್ದರು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರಿಗೆ ಕಿಮೊಥೆರಪಿ ನೀಡಲಾ
ಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದಿದ್ದಾರೆ.
-------------------  
7. ಕರ್ನಾಟಕದ ಮೊಟ್ಟ ಮೊದಲ ಆನೆಗಳ ಆರೈಕೆ ಕೇಂದ್ರವನ್ನು ಕೋಲಾರ ಸಮೀಪದ ಕಾಜಿಕಲ್ಲಹಳ್ಳಿ ಗ್ರಾಮದಲ್ಲಿ ಪ್ರಾರಂಭಿಸಲಾಗಿದೆ. ಬೆಂಗಳೂರು ಮೂಲದ ಸ್ವಯಂ ಸೇವಾ ಸಂಸ್ಥೆ ವನ್ಯಜೀವಿ ಪಾರುಗಾಣಿಕಾ ಮತ್ತು ಪುನರ್ವಸತಿ ಕೇಂದ್ರದ ಸಹಯೋಗದೊಂದಿಗೆ ಅರಣ್ಯ ಇಲಾಖೆಯು ಈ ಕೇಂದ್ರವನ್ನು ಸ್ಥಾಪಿಸಿದೆ. 20 ಎಕರೆ ವಿಸ್ತೀರ್ಣದಲ್ಲಿ ಕೇಂದ್ರವನ್ನು ಅಭಿವೃದ್ಧಿಪಡಿಸಲಾಗಿದ್ದು, ಇದರಲ್ಲಿ ನಿರ್ಗತಿಕ, ವಯಸ್ಸಾದ, ರೋಗಪೀಡಿತ ಮತ್ತು ಗಾಯಗೊಂಡ ಆನೆಗಳ ಆರೈಕೆಯನ್ನು ಮಾಡಲಾಗುತ್ತಿದೆ. ಕೇಂದ್ರದಲ್ಲಿ ಸದ್ಯ ನಾಲ್ಕು ಹೆಣ್ಣು ಆನೆಗಳ ಆರೈಕೆ ನಡೆಯುತ್ತಿದೆ ಎನ್ನಲಾಗಿದೆ.  

-------------------  
8. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್‌ಭೀಮಾ ಯೋಜನೆಯಡಿ ಬೆಳೆ ವಿಮೆಗಾಗಿ ಈ ಬಾರಿ 19.61 ಲಕ್ಷ ರೈತರು ಹೆಸರು ನೋಂದಾಯಿಸಿದ್ದಾರೆ. ಈ ಮೂಲಕ ಕಳೆದ ಎರಡು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಅತಿ ಹೆಚ್ಚು ನೋಂದಣಿಯಾಗಿದೆ.

ಬಿತ್ತಿದ ಬೆಳೆ ಕೈ ಸೇರುವ ಮೊದಲೇ ಅತಿವೃಷ್ಟಿ, ಅನಾವೃಷ್ಟಿಯಂತಹ ಪ್ರಕೃತಿ ವಿಕೋಪಗಳಿಗೆ ಸಿಲುಕಿ ಬೆಳೆ ನಷ್ಟ ಹೊಂದಿದರೆ, ಈ ಯೋಜನೆಯಡಿ ಪರಿಹಾರ ಸಿಗುತ್ತದೆ. ಹೆಚ್ಚುವರಿಯಾಗಿ 7 ಲಕ್ಷ ಮಂದಿ ರೈತರು ಈ ಬಾರಿ ಮುಂಗಾರು ಹಂಗಾಮಿನಲ್ಲಿ ನೋಂದಣಿ ಮಾಡಿಸಿದ್ದಾರೆ. ಕಳೆದ ವರ್ಷ 12 ಲಕ್ಷಕ್ಕೂ ಹೆಚ್ಚು ಮಂದಿ ನೋಂದಾಯಿಸಿದ್ದರು. ಈ ಬಾರಿ ಅದು 19 ಲಕ್ಷ ದಾಟಿದೆ. ಎರಡು ವರ್ಷ ನೋಂದಣಿ ಮಾಡಿಸಿದ ಬೆಳೆಗಳಿಗೆ ಆಯಾ ವರ್ಷವೇ ವಿಮಾ ಪರಿಹಾರ ನೀಡಲಾಯಿತು.
ಈ ಹಿಂದೆ ಬ್ಯಾಂಕ್‌ಗಳು, ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ನೋಂದಣಿಗೆ ಇದ್ದ ಅವಕಾಶವನ್ನು ಈ ಬಾರಿ ಗ್ರಾಮ ಒನ್‌ ಕೇಂದ್ರಗಳಿಗೂ ನೀಡಲಾಗಿತ್ತು. ಈ ಎಲ್ಲಾ ಕಾರಣಗಳಿಂದ ಈ ವರ್ಷ ಹೆಚ್ಚಿನ ನೋಂದಣಿಯಾಗಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.  
-------------------  
9. ಧಾರವಾಡದ ನವಲಗುಂದ ತಾಲ್ಲೂಕಿನಾದ್ಯಂತ ಬೆನ್ನೆಹಳ್ಳ ಹಾಗೂ ತುಪ್ಪರಿಹಳ್ಳದ ಹೊಡೆತಕ್ಕೆ ರೈತರು ನಲುಗಿದ್ದಾರೆ. ಮಳೆಯ ಹೊಡೆತಕ್ಕೆ  ನೂರಾರು ಮನೆಗಳು ನೆಲಕಚ್ಚಿದವು. ಆದರೆ, ಇದುವರೆಗೂ ಸಂತ್ರಸ್ತರಿಗೆ ಯಾವುದೇ ಪರಿಹಾರ ಧನ ಸಿಗದೆ ಇರುವುದು ನವಲಗುಂದ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ನವಲಗುಂದ ಪಟ್ಟಣದಲ್ಲಿ ಮಾತನಾಡಿದ ಕಾಂಗ್ರೆಸ್‌ ಮುಖಂಡ ಎನ್‌ಎಚ್‌ ಕೋನರಡ್ಡಿ ಅವರು ಮಾತನಾಡಿ, ಬೆಳೆ ಪರಿಹಾರ, ಬೆಳೆ ವಿಮೆ, ಮನೆ ಪರಿಹಾರ ಯಾವುದೂ ಸಕಾಲದಲ್ಲಿ ತಲುಪುತ್ತಿಲ್ಲ ಎನ್ನುವ ಮಾತು ಸಂತ್ರಸ್ತರಿಂದ ಕೇಳಿ ಬರುತ್ತಿದೆ ಎಂದು ಆಕ್ರೋಶ ಹೊರ ಹಾಕಿದರು. ರೈತರಿಗೆ ಹಾಗೂ ಮನೆ ಕಳೆದುಕೊಂಡವರಿಗೆ ಹಾಗೂ ವಿಮಾ ಕಂಪನಿಯಿಂದ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. 
-------------------  
10. ರಾಜ್ಯದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಐದು ನಿರ್ದಿಷ್ಟ ಸ್ಥಳಗಳಲ್ಲಿ ಮೆಗಾ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಥಮ ಬಾರಿ ಮೆಗಾ ಹಾಸ್ಟೆಲ್‌ಯೋಜನೆಯನ್ನು ಜಾರಿಗೊಳಿಸುತ್ತಿದ್ದೇವೆ. ಮಂಗಳೂರು, ಧಾರವಾಡ, ಮೈಸೂರು, ಕಲಬುರಗಿ ಮತ್ತು ಬೆಂಗಳೂರಿನಲ್ಲಿ ಮೆಗಾ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುವುದು ಎಂದಿದ್ದಾರೆ. ಅವಶ್ಯವಿದ್ದರೆ, ಶೈಕ್ಷಣಿಕ ಕೇಂದ್ರಗಳಲ್ಲಿ ಮೆಗಾ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುವುದು. ಈ ಯೋಜನೆಯಿಂದ ಪರಿಶಿಷ್ಟರು ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.  

Published On: 30 December 2022, 02:57 PM English Summary: Football legend Pele of Brazil passed away

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.