1. ಸುದ್ದಿಗಳು

ಎಸ್‌ಎಸ್‌ಎಲ್‌ಸಿ , PUC ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ವ್ಯವಸ್ಥೆ

2019-20 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆಗೆ ದಿನಗಣಗೆ ಶುರುವಾಗಿದೆ. ಈ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಬಸ್‌ ವ್ಯವಸ್ಥೆ ಕಲ್ಪಿಸಿದೆ. ಪರೀಕ್ಷೆ ಕೇಂದ್ರಗಳವರೆಗೆ ಸಾರಿಗೆ ನಿಗಮ ಬಸ್ಸುಗಳಲ್ಲಿ ಉಚಿತವಾಗಿ ಕರೆದೊಯ್ಯಲು ಕೆಎಸ್ಆರ್‌ಟಿಸಿ ಸಮ್ಮತಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂಬಂಧ ವಿದ್ಯಾರ್ಥಿಗಳಿಗೆ ಹಾಗೂ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷೆ ನಡೆಯುವ ಅವಧಿಯಲ್ಲಿ ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿದರೆ ಸಾಕು, ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗುವುದು.ಎಂದು ಸಾರಿಗೆ ಸಂಸ್ಥೆ ಪ್ರಕಟಣೆ ತಿಳಿಸಿದೆ.

ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಕೋರಿಕೆ ನಿಲುಗಡೆ ಸ್ಥಳಗಳಲ್ಲಿ ಇಳಿಯಲು ಮತ್ತು ಹತ್ತಲು ಅವಕಾಶ ನೀಡಲಾಗಿದೆ. ಈ ಬಗ್ಗೆ ಸಂಬಂಧ ಪಟ್ಟ ಸಿಬ್ಬಂದಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ.
ಜೂನ್ 18 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪರೀಕ್ಷೆ ಇದ್ದು, ಸದರಿ ದಿನದಂದೂ ಸಹ ಪ್ರವೇಶ ಪತ್ರದೊಂದಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
ಜೂನ್ 25 ರಿಂದ ಜುಲೈ 04 ರವರೆಗೆ ಪರೀಕ್ಷೆಗೆ ಹಾಜರಾಗುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ " ಎಸ್‌ಎಲ್‌ಎಲ್‌ಸಿ ಪರೀಕ್ಷೆ ಪ್ರವೇಶ ಪತ್ರ"ವನ್ನು ತೋರಿಸಿ. ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗು ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣೀಸಲು ಅವಕಾಶ ಕಲ್ಪಿಸಲಾಗಿದೆ.

Published On: 17 June 2020, 01:51 PM English Summary: Free Bus Travel For SSLC Students Too To Attend Examination

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.