1. ಸುದ್ದಿಗಳು

ಸಿಹಿಸುದ್ದಿ: ಕಬ್ಬು ಬೆಳೆಗಾರರಿಗೆ ಸಿಗಲಿದೆ 204 ಕೋಟಿ ಲಾಭಾಂಶ!

Hitesh
Hitesh
Good news: Sugarcane growers will get 204 crore dividend!

ಕಬ್ಬು ಬೆಳೆಯುವ ರೈತರಿಗೆ ರಾಜ್ಯ ಸರ್ಕಾರವು ಕೊನೆಗೂ ಸಿಹಿಸುದ್ದಿಯೊಂದನ್ನು ನೀಡಿದೆ. ಕಬ್ಬಿನ ಉಪ ಉತ್ಪನ್ನಗಳ ಲಾಭಾಂಶ ನೀಡಲು ಮುಂದಾಗಿದೆ. 

ಚೀನಾದ ವುಹಾನ್‌ “ಪ್ರಯೋಗ”ದಿಂದಲೇ ಹರಡಿತಂತೆ ಕೊರೊನಾ ಮಹಾಮಾರಿ! 

ಕಬ್ಬಿನ ಉಪ ಉತ್ಪನ್ನ ಎಥೆನಾಲ್‌ ಮೇಲಿನ ಲಾಭಾಂಶವನ್ನು ರೈತರಿಗೆ ನೀಡುವುದಾಗಿ ರಾಜ್ಯ ಸರ್ಕಾರವು ತಿಳಿಸಿದೆ.

ಮೊದಲ ಹಂತದಲ್ಲಿ ಕಬ್ಬು ಬೆಳೆಗಾರರಿಗೆ 204.47 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ. 

38.30 ಲಕ್ಷ ಕೋಟಿ ಡಿಜಿಟಲ್ ಪಾವತಿ; ಚಿನ್ನ- ಬೆಳ್ಳಿ ದರ ತುಸು ಹೆಚ್ಚಳ!

ಈ ಸಂಬಂಧ ಮಾಹಿತಿ ನೀಡಿರುವ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು, ಇಲ್ಲಿವರೆಗೆ ಸಕ್ಕರೆಯ ಉಪ

ಉತ್ಪನ್ನಗಳ ಮೇಲೆ ಲಾಭಾಂಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ಕಬ್ಬಿನ ಉಪ ಉತ್ಪನ್ನದ ಮೇಲೆ

ರೈತರಿಗೆ ಲಾಭಾಂಶ ನೀಡಲು ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು

Heavy Rain| ರಾಜ್ಯದ ವಿವಿಧೆಡೆ ಧಾರಾಕಾರ ಮಳೆ!

ಉಪ ಉತ್ಪನ್ನಗಳ ಲಾಭಾಂಶ ನೀಡುವಂತೆ  ಕಬ್ಬು ಬೆಳೆಗಾರರು ಕಳೆದ 14 ದಿನಗಳಿಂದ  ಅಹೋರಾತ್ರಿ ಧರಣಿ ನಡೆಸುತ್ತಿದ್ದರು.

ಮೊದಲ ಹಂತದಲ್ಲಿ ಕಬ್ಬಿನ ಉಪ ಉತ್ಪನ್ನ ಎಥೆನಾಲ್‌ನ ಮೇಲೆ ಲಾಭ ನೀಡಲು ಸರ್ಕಾರ ಮುಂದಾಗಿದ್ದು, ಎಫ್ಆರ್‌ಪಿ ದರದ ಪಾವತಿ ಬಳಿಕ

ಹೆಚ್ಚುವರಿಯಾಗಿ ಪ್ರತಿಟನ್‌ಗೆ 50 ರೂಪಾಯಿಯನ್ನು ಕಬ್ಬು ಬೆಳೆಗಾರರಿಗೆ ನೀಡಲು ನಿರ್ಧರಿಸಲಾಗಿದ್ದು, ಇದರಿಂದ ಕಬ್ಬು ಬೆಳೆಗಾರರಿಗೆ 204.47 ಕೋಟಿ ರೂಪಾಯಿ ಸಿಗಲಿದೆ.

ರಾಜ್ಯ ಸರ್ಕಾರದ ನಿರ್ಣಯದ ಕುರಿತು ತಕ್ಷಣ ಆದೇಶ ಹೊರಡಿಸುವಂತೆ ಕಬ್ಬು ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ಹೇಳಿದರು.  

38.30 ಲಕ್ಷ ಕೋಟಿ ಡಿಜಿಟಲ್ ಪಾವತಿ; ಚಿನ್ನ- ಬೆಳ್ಳಿ ದರ ತುಸು ಹೆಚ್ಚಳ!

Good news: Sugarcane growers will get 204 crore dividend!

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಬೆಳೆಗಳಿಗೆ

ನ್ಯಾಯಯುತ ಮತ್ತು ಲಾಭದಾಯಕ ಬೆಲೆಗೆ ಒತ್ತಾಯಿಸಿ ಹಲವು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ನಡುವೆ ಕಬ್ಬಿನ ಉಪಉತ್ಪನ್ನಗಳ ಲಾಭದ ಹಂಚಿಕೆಯನ್ನು ಪರಿಶೀಲಿಸಲು ರಾಜ್ಯ ಸರ್ಕಾರವು ತಜ್ಞರ ಸಮಿತಿಯನ್ನು ರಚಿಸಿದೆ.

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ ಸಾಧ್ಯತೆ!

Published On: 06 December 2022, 03:31 PM English Summary: Good news: Sugarcane growers will get 204 crore dividend!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.