1. ಸುದ್ದಿಗಳು

ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಉದ್ಯೋಗ!

Hitesh
Hitesh
Basavaraj Bommai

ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಉದ್ಯೋಗ ನೀಡಲು ನಿರ್ಧರಿಸಲಾಗಿದೆ.

ತಮಿಳುನಾಡಿನಲ್ಲಿ ಭಾರೀ ಮಳೆ ಸಾಧ್ಯತೆ: ಹೈಅಲರ್ಟ್‌ ಘೋಷಣೆ!

ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಉದ್ಯೋಗ ನೀಡುವ ಯೋಜನೆಗೆ ಮುಂದಿನ ಸಚಿವ ಸಂಪುಟದಲ್ಲಿ

ಅನುಮೋದನೆ ಪಡೆದು, ಪದವೀಧರರಾದ ಒಲಂಪಿಕ್ಸ್ ಹಾಗೂ ಪ್ಯಾರಾಒಲಂಪಿಕ್ಸ್ ಪದಕವಿಜೇತರಿಗೆ ಗ್ರೂಪ್ ಎ

ಉದ್ಯೋಗ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.  

Heavy Rain| ರಾಜ್ಯದ ವಿವಿಧೆಡೆ ಧಾರಾಕಾರ ಮಳೆ!

ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳ ನೇತೃತ್ವದ ಆಯ್ಕೆ ಸಮಿತಿಯ ಮೂಲಕ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು.

ಕ್ರೀಡಾಪಟುಗಳಿಗೆ ಸರ್ಕಾರದ ಉದ್ಯೋಗ ನೀಡುವ ನೀತಿ ಕರ್ನಾಟಕದ ಹೊರತು ಬೇರೆ ಯಾವುದೇ ರಾಜ್ಯದಲ್ಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಏಕಲವ್ಯ ಕ್ರೀಡಾ ಪ್ರಶಸ್ತಿ ಹಾಗೂ ಇತರ ಕ್ರೀಡಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

ಪದವೀಧರರಾಗಿರುವ ಏಷಿಯನ್ ಗೇಮ್ಸ್ ಹಾಗೂ ಕಾಮನ್ ವೆಲ್ತ್ ಪದಕ ವಿಜೇತರಿಗೆ ಗ್ರೂಪ್ ಬಿ ಉದ್ಯೋಗ, ಇದಕ್ಕಿಂತ ಕಡಿಮೆ ಸ್ತರದ

ಕ್ರೀಡಾಕೂಟದ ಪದಕವಿಜೇತರಿಗೆ ಗ್ರೂಪ್ ಸಿ ಹಾಗೂ ಗ್ರೂಪ್ ಡಿ ಉದ್ಯೋಗವನ್ನು ನೀಡಲಾಗುವುದು ಎಂದರು.

ಕಳೆದ ಆಗಸ್ಟ್ 15 ರಂದು 75 ಕ್ರೀಡಾಪಟುಗಳನ್ನು ದತ್ತುಪಡೆದು, ಮುಂದಿನ ಪ್ಯಾರೀಸ್ ಒಲಂಪಿಕ್ಸ್‌ನಲ್ಲಿ ಭಾಗವಹಿಸಲು ತರಬೇತಿ ನೀಡಲಾಗುತ್ತಿದೆ.

4 ವರ್ಷದ ತರಬೇತಿ, ಉತ್ತಮ ತರಬೇತಿದಾರರು, ಶಾಲಾ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ.

ಇದಕ್ಕಾಗಿ 10 ಲಕ್ಷ ವಿನಿಯೋಗಿಸಲಾಗುತ್ತಿದೆ. ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು.

ಕಾಮನ್ ವೆಲ್ತ್, ಏಷಿಯನ್ ಗೇಮ್ಸ್, ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾಪಟುಗಳು

ಉತ್ತಮ ಸಾಧನೆಗಳನ್ನು ಮಾಡಬೇಕು ಎಂದು ಅವರು ಹೇಳಿದರು.     

ಯುವ ಕ್ರೀಡಾ ಪ್ರತಿಭೆಗಳು ದೇಶದ ಆಸ್ತಿ, ಏಕಾಗ್ರತೆ ಹಾಗೂ ಪರಿಶ್ರಮದಿಂದ ಸಾಧನೆ ಮಾಡಿದರೆ, ಯಶಸ್ಸು ಖಂಡಿತ ಲಭಿಸುತ್ತದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರೀಡೆಗೆ ಮಹತ್ವವನ್ನು ನೀಡಿದೆ. ಕ್ರೀಡೆ ಹವ್ಯಾಸವಾಗಿ ಪ್ರಾರಂಭವಾಗಿ ರಾಷ್ಟ್ರೀಯ

ಸಂಕೇತವಾಗಿ ಇತ್ತೀಚೆಗೆ ಪರಿಗಣಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 

PmKisan | ಪಿ.ಎಂ ಕಿಸಾನ್‌ ಸಮ್ಮಾನ್‌ 13ನೇ ಕಂತಿನ ಹಣಕ್ಕೆ ಕ್ಷಣಗಣನೆ!   

Published On: 07 December 2022, 01:01 PM English Summary: Govt jobs for athletes through direct recruitment!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.