Gruha lakshmi Scheme Update : ಕಾಂಗ್ರೆಸ್ ಗ್ಯಾರಂಟಿ ನೀಡಿದ್ದ 5 ಭರವಸೆಗಳಲ್ಲಿ ಈಗಾಗಲೇ ಸಾಕಷ್ಟು ಅಡೆತಡೆಗಳ ನಡುವೆ ಸ್ತ್ರೀ ಶಕ್ತಿ, ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆ ಜಾರಿಯಾಗಿವೆ. ಇದೀಗ ಮನೆ ಯಜಮಾನಿಗೆ 2,000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಕೂಡ ಶೀಘ್ರದಲ್ಲೆ ಆರಂಭವಾಗುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
What is Gruha Lakshmi scheme in Karnataka?: ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಪ್ರತಿ ಕುಟುಂಬದ ಯಜಮಾನಿಗೆ ತಲಾ 2,000 ರೂಪಾಯಿಗಳನ್ನು ನೀಡುವ ಕುರಿತು ಚುಣಾವಣಾ ಪೂರ್ವ ಹೇಳಲಾಗಿತ್ತು. ಈ ಕುರಿತು ಇದೀಗ ಶೀಘ್ರದಲ್ಲೇ ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆಯನ್ನು ಆರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಯಾವಾಗಿನಿಂದ ಆರಂಭ? | When did the Gruha lakshmi Yojana start?
ಮನೆಯ ಯಜಮಾನಿ ಮಹಿಳೆಯರಿಗೆ ತಲಾ 2,000 ರೂಪಾಯಿ ನೀಡಲಾಗುವ ಗೃಹಲಕ್ಷ್ಮೀ ಯೋಜನೆಗೆ ಇದೇ ಜುಲೈ 14ರಿಂದ ಅರ್ಜಿ ಸಲ್ಲಿಕೆ ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಈ ಬಗ್ಗೆ ಇನ್ನು 2 ರಿಂದ 3 ದಿನಗಳಲ್ಲಿ ಅಧಿಕೃತವಾಗಿ ಘೋಷಣೆಯನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಏನಿದು ಗೃಹಲಕ್ಷ್ಮೀ ಯೋಜನೆ? What is Gruha lakshmi Yojana?
ಕುಟುಂಬ ನಿರ್ವಹಣೆಯ ಹೊಣೆಹೊತ್ತ ಮನೆಯ ಯಜಮಾನಿಗೆ ಆರ್ಥಿಕ ನೆರವು ನೀಡಿ, ಅವರ ಕಷ್ಟಗಳಿಗೆ ಹೆಗಲಾಗಿ ನಿಲ್ಲುವಂತ ಪ್ರಯತ್ನವೇ ಈ ಗೃಹ ಲಕ್ಷ್ಮೀ ಯೋಜನೆ.
ಇದನ್ನು ಯಾವುದೇ ಜಾತಿ, ಧರ್ಮ, ಭಾಷೆಯನ್ನು ಪರಿಗಣಿಸದೆ ನಾಡಿನ ಪ್ರತಿ ಮನೆಯ ಯಜಮಾನಿಗೆ ಮಾಸಿಕ ರೂ. 2,000 ಸಹಾಯಧನವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಂಪುಟ ಸಭೆಯು ಅನುಮೋದನೆ ನೀಡಿದೆ.
Who is eligible for Gruha Lakshmi scheme? : ಬಿಪಿಎಲ್ ಅಥವಾ ಎಪಿಎಲ್ ಕುಟುಂಬದ ಮಹಿಳೆಯು ತಮ್ಮ ಬ್ಯಾಂಕ್ ಖಾತೆಯ ಮಾಹಿತಿ ಹಾಗೂ ಆಧಾರ್ ಕಾರ್ಡ್ನ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿ, ತನ್ನನ್ನು ಮನೆಯ ಯಜಮಾನಿ ಎಂದು ಘೋಷಿಸಿಕೊಳ್ಳಬೇಕು.
ಜೂನ್ 15 ರಿಂದ ಜುಲೈ 15ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಅರ್ಜಿಗಳ ಪರಿಶೀಲನೆ ಹಾಗೂ ತಂತ್ರಾಂಶ ಅಭಿವೃದ್ಧಿಪಡಿಸಿ ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಯೋಜನೆಗೆ ಚಾಲನೆ ನೀಡಲಾಗುವುದು.
Red Banana Farming : ಕೆಂಪು ಬಾಳೆ ಬೆಳೆದು ತಿಂಗಳಿಗೆ ₹30 ಲಕ್ಷ ಗಳಿಕೆ |ಇಲ್ಲಿದೆ ಈ ಯುವ ರೈತನ ಸಾಹಸಗಾಥೆ
Share your comments