ರೈತರಿಗೆ ಪ್ರಮುಖ ಸುದ್ದಿಗಳನ್ನು ತಲುಪಿಸುವ ಉದ್ದೇಶದಿಂದ ಕೃಷಿ ಜಾಗರಣ ಅಗ್ರಿನ್ಯೂಸ್ ಪರಿಚಯಿಸಿದೆ. ಇಂದಿನ ಪ್ರಮುಖ ಸುದ್ದಿಗಳು ಈ ರೀತಿ ಇವೆ.
ರಾಜ್ಯದ ವಿವಿಧೆಡೆ ಮುಂದುವರಿದ ಧಾರಾಕಾರ ಮಳೆ
ಬೆಂಗಳೂರಿನಲ್ಲಿ ಮೋದಿ ಭರ್ಜರಿ ರೋಡ್ ಶೋ!
ಮತಗಟ್ಟೆಯ ಮಾಹಿತಿಗೆ ಚುನಾವಣಾ ಆಯೋಗದಿಂದ ಆ್ಯಪ್
Food Street Project ಯೋಜನೆಗೆ 1 ಕೋಟಿ ರೂ. ಆರ್ಥಿಕ ನೆರವು
ಬ್ಯಾಂಕ್ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ: ಶೀಘ್ರ ನಿರ್ಧಾರ
ಸುದ್ದಿಗಳ ವಿವರ ಈ ರೀತಿ ಇದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ.
ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.
ಬಳ್ಳಾರಿಯ ಹಗರಿ ಕೆವಿಕೆಯಲ್ಲಿ ಬರೋಬ್ಬರಿ ಏಳು ಸೆಂ.ಮೀ ಮಳೆಯಾಗಿದೆ. ಅಲ್ಲದೇ ಕಾರವಾರದಲ್ಲಿ ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 36.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಇನ್ನು ಭಾನುವಾರ ಮತ್ತು ಸೋಮವಾರ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಿಂಚು ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್, ಗದಗ
ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉಳಿದಂತೆ ಕರಾವಳಿ ಹಾಗೂ ಉತ್ತರ ಒಳನಾಡಿನ
ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
---------------
ಬಹಿರಂಗ ಚುನಾವಣಾ ಪ್ರಚಾರಕ್ಕೆ ಕ್ಷಣಗಣನೆ ಪ್ರಾರಂಭಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ರೋಡ್ ಶೋ ನಡೆಸುತ್ತಿದ್ದರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಶನಿವಾರ ಮತ್ತು ಭಾನುವಾರ ಎರಡು ದಿನ ರೋಡ್ ಶೋ ನಡೆಸಲಿದ್ದು, 26 ಕಿ.ಮೀ ರೋಡ್ ಶೋ ನಡೆಯಲಿದೆ.
ರೋಡ್ ಶೋ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಭದ್ರತೆಗೆ 5 ಸಾವಿರಕ್ಕೂ ಹೆಚ್ಚು ಪೊಲೀಸರು, 2,500 ಟ್ರಾಫಿಕ್ ಪೊಲೀಸರನ್ನು ನಿಯೋಜಿಸಲಾಗಿದೆ.
150 ಕೆಎಸ್ಆರ್‌ಪಿ ಹಾಗೂ ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.
---------------
ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಮೇ10 ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಿಗದಿಯಾಗಿದ್ದು, ಚುನಾವಣಾ ಆಯೋಗವು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿದೆ.
ಪ್ರತಿಯೊಬ್ಬರು ತಮ್ಮ ಅಮೂಲ್ಯ ಮತವನ್ನು ಚಲಾಯಿಸಬೇಕು ಎಂದು ಕರ್ನಾಟಕದ ಮುಖ್ಯಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ತಿಳಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಯ ಅಂಗವಾಗಿ ಈಚೆಗೆ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಮುಖ್ಯಚುನಾವ ಣಾಧಿಕಾರಿಗಳ ಕಚೇರಿ ಹಾಗೂ ಅಂಚೆ ಇಲಾಖೆ ಮೂಲಕ ಹೊರತರಲಾಗಿರುವ ವಿಶೇಷ ಅಂಚೆ ಲಕೋಟೆ ಮತ್ತು ಗಾಯಕ ವಿಜಯ್ ಪ್ರಕಾಶ್ ಅವರು
ಸಂಗೀತ ಸಂಯೋಜಿಸಿ ಹಾಡಿರುವ ಚುನಾವಣಾ ಜಾಗೃತಿ ಗೀತೆ ಹಾಗೂ ಮತದಾರರ ಸಹಾಯಕ್ಕಾಗಿ ಅಭಿವೃದ್ಧಿಪಡಿಸಿರುವ ಚುನಾವಣಾ ಆ್ಯಪ್ ಬಿಡುಗಡೆ ಮಾಡಲಾಯಿತು.
ಮತದಾನದ ದಿನ ಮತದಾರರ ಅನುಕೂಲಕ್ಕಾಗಿ ಮತಗಟ್ಟೆಯ ವಿವರ, ಸರತಿ ಸಾಲಿನಲ್ಲಿರುವ ಮತದಾರರ ವಿವರ, ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ
ಹಲವು ಉಪಯುಕ್ತ ಮಾಹಿತಿಗಳುಳ್ಳ ಚುನಾವಣಾ ಆ್ಯಪ್ ಅಭಿವೃದ್ಧಿಪಡಿಸಿದೆ ಎಂದು ಮನೋಜ್ ಕುಮಾರ್ ಮೀನಾ ಅವರು ತಿಳಿಸಿದ್ದಾರೆ.
---------------
ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು “ಫುಡ್ ಸ್ಟ್ರೀಟ್ ಪ್ರಾಜೆಕ್ಟ್” (Food Street Project) ಅನ್ನು ಈಚೆಗೆ ಪರಿಶೀಲಿಸಿದರು.
ಈ ಯೋಜನೆಯ ಮೂಲಕ ದೇಶಾದ್ಯಂತ 100 ಆರೋಗ್ಯಕರ ಆಹಾರ ಬೀದಿಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ.
ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದೊಂದಿಗೆ ಜಂಟಿಯಾಗಿ ಜಾರಿಗೆ ತರಲು ಎಫ್‌ಎಸ್‌ಎಸ್‌ಎಐ ಮಾರ್ಗಸೂಚಿಗಳ ಉಪಕ್ರಮದ ಪ್ರಕಾರ
ಸ್ಟ್ಯಾಂಡರ್ಡ್ ಬ್ರ್ಯಾಂಡಿಂಗ್‌ನೊಂದಿಗೆ ಪ್ರತಿ ಫುಡ್ ಸ್ಟ್ರೀಟ್‌ಗೆ 1 ಕೋಟಿ ರೂಪಾಯಿ ಆರ್ಥಿಕ ನೆರವು ಒದಗಿಸಲಾಗುವುದು.
ಈ ಯೋಜನೆಯ ಗುರಿಯು ಆಹಾರ ವ್ಯವಹಾರಗಳು ಮತ್ತು ಸಮುದಾಯದ ಸದಸ್ಯರಲ್ಲಿ ಸುರಕ್ಷಿತ ಮತ್ತು
ಆರೋಗ್ಯಕರ ಆಹಾರ ಪದ್ಧತಿಯನ್ನು ಉತ್ತೇಜಿಸುವುದು ಎಂದಿದ್ದಾರೆ.
---------------
ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಕೆಲಸದ ಅವಧಿ ಕಡಿಮೆ ಮಾಡುವ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ.
ವಾರದಲ್ಲಿ ಐದು ದಿನ ಮಾತ್ರ ಕೆಲಸ ಹಾಗೂ ಎರಡು ದಿನ ರಜೆ ಪದ್ಧತಿ ಶೀಘ್ರ ಜಾರಿಗೆ ಬರುವ ಸಾಧ್ಯತೆ ಇದೆ.
ಹೊಸ ಪದ್ಧತಿ ಜಾರಿಗೆ ಕೇಂದ್ರ ಹಣಕಾಸು ಸಚಿವಾಲಯ ಇಷ್ಟರಲ್ಲೇ ಅಧಿಸೂಚನೆ ಹೊರಡಿಸಲಿದೆ ಎನ್ನಲಾಗಿದೆ.
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ಬಹುದಿನಗಳಿಂದ ಬೇಡಿಕೆ ಇರಿಸಿದ್ದರು.
ಅಲ್ಲದೇ ಇದಕ್ಕೆ ಭಾರತೀಯ ಬ್ಯಾಂಕ್‌ಗಳ ಸಂಘ ಹಾಗೂ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ ಸಹ ಸಮ್ಮತಿ ನೀಡಿದೆ.
--------------
Pic Credits
Narendra Modi Twitter account
Pexels
Share your comments