ರಾಜ್ಯದ ವಿವಿಧೆಡೆ ಮಳೆ ಮುಂದುವರಿದಿದ್ದು, ಮುಂದಿನ 24 ಗಂಟೆಯಲ್ಲಿ ರಾಜ್ಯದ ವಿವಿಧೆಡೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿಯ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿದಿತ್ತು.
ಈ ಭಾಗದಲ್ಲಿ ಮಳೆ ಪ್ರಮಾಣ ಸೆಂ.ಮೀನಲ್ಲಿ ಚಿಕ್ಕೋಡಿ 5 ಸೆಂ.ಮೀ, ರಾಯಭಾಗ, ಬೈಲಹೊಂಗಲ, ಕಲಘಟಗಿಯಲ್ಲಿ 2ಸೆಂ.ಮೀ ಮಳೆ ಆಗಿರುವುದು ವರದಿ ಆಗಿದೆ.
ಹಳಿಯಾಳ, ಮುಂಡಗೋಡ, ಜಗಲಬೆಟ್, ಬೀದರ್, ಮಂಠಾಳ, ಭಾಲ್ಕಿ, ನಿಪ್ಪಾಣಿ, ಸುತಗಟ್ಟಿ ಮಟ್ಟಿಕೊಪ್ಪ, ಸದಗಲ, ಇಂಡಿ, ಮಹಾಲಿಂಗಪುರದಲ್ಲಿ ತಲಾ ಒಂದು ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.
ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 40.9 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ,
ವಿಜಯಪುರ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆ/ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು
ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಮುಂದಿನ 48 ಗಂಟೆಗಳು ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್,
ವಿಜಯಪುರ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಗುಡುಗು ಮುನ್ನೆಚ್ಚರಿಕೆ: ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ
ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ,
ಬೆಳಗಾವಿ, ಬೀದರ್, ವಿಜಯಪುರ ಜಿಲ್ಲೆಯ ಒಂದರೆಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆಯನ್ನು ನೀಡಿಲ್ಲ.
ಉಳಿದಂತೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಕಂಡುಬಂದಿಲ್ಲ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶವು 35 ಮತ್ತು ಕನಿಷ್ಠ ಉಷ್ಣಾಂಶವು 22 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.
ಮುಂದಿನ 48 ಗಂಟೆಗಳು: ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶವು 34 ಮತ್ತು ಕನಿಷ್ಠ ಉಷ್ಣಾಂಶವು 22 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು
ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
40 ವರ್ಷದಲ್ಲಿ 44 ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!
Share your comments