1. ಸುದ್ದಿಗಳು

ರಾಜಧಾನಿಯಲ್ಲಿ ಸುರಿದ ಜೋರು ಮಳೆ-ಗುಡುಗು ಸಿಡಿಲಿನ ಅಬ್ಬರ

heavy rain in bangaluru

ವಾಯುಭಾರ ಕುಸಿತದಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಮೆಜೆಸ್ಟಿಕ್, ರಾಜಾಜಿನಗರ, ಬಸವೇಶ್ವರನಗರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ ಹಾಗೂ ಸುತ್ತಮುತ್ತ ಧಾರಾಕಾರ ಮಳೆ ಸುರಿದಿದೆ.

ಇಂದು ರಾಜ್ಯಾದ್ಯಂತ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಆಗಾಗ ಅಲ್ಲಲ್ಲಿ ತುಂತುರು ಮಳೆಯೂ ಸುರಿದಿದೆ.ಸಂಜೆಯ ನಂತರ .ಹಲವೆಡೆ ಜಿಟಿ ಜಿಟಿ ಮಳೆ ಆರಂಭವಾಗಿ ಕೆಲವು ನಿಮಿಷಗಳಲ್ಲಿ ಜೋರಾಗಿ‌ ಸುರಿಯಿತು. ರಸ್ತೆಗಳಲ್ಲಿನೀರು ಉಕ್ಕಿ ಹರಿಯಿತು. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಯಿತು.
ಪ್ರಮುಖ ರಸ್ತೆಗಳಲ್ಲಿ ನೀರು ಹರಿಯುತ್ತಿದ್ದು ವಾಹನಗಳು ನೀರಿನಲ್ಕೇ ಚಲಿಸುತ್ರಿವೆ. ಏಕಾಏಕಿ ಮಳೆ ಸುರಿದಿದ್ದರಿಂದ ಕೆಲಸ ಮುಗಿಸಿ ಹೊರಟಿದ್ದವರು ಪರದಾಡುವಂತಾ ಯಿತು.ಮೆಜೆಸ್ಟಿಕ್ ಸುತ್ತಮುತ್ತ ವಾಹನ ದಟ್ಟಣೆ ಉಂಟಾಯಿತು.

ಕಳೆದ ಕೆಲ ದಿನಗಳಿಂದ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಆದರೆ ಈ ಅಕಾಲಿಕ ಮಳೆಯಿಂದಾಗಿ ಕೃಷಿ ಚಟುಟಿಕೆಗಳಿಗೆ ಅಡ್ಡಿಯುಂಟಾಗಿದೆ.

ಕಲಬುರಗಿ, ಬೀದರ್, ಯಾದಗಿರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣದಿಂದಾಗಿ ರೈತರು ಸಂಕಷ್ಟಕ್ಕೊಳಗಾಗಿದ್ದಾರೆ. ರಾಶಿ ಮಾಡುತ್ತಿರುವ ರೈತರಲ್ಲಿ ಆತಂಕ ಮೂಡಿದೆ.

ಕೊಡಗು ಮತ್ತು ಹಾಸನ ಗಡಿಭಾಗದಲ್ಲಿ ಆಲಿ ಕಲ್ಲು ಸಹಿತ ಭಾರೀ ಮಳೆಯಾಗಿದೆ. ಇದು ಸ್ಥಳೀಯರಲ್ಲಿ ಆಂತಕಕ್ಕೆ ಎಡೆ ಮಾಡಿಕೊಟ್ಡಿದೆ. ಅಂಕನ ಹಳ್ಳಿಯಲ್ಲಿ ಏಕಾಏಕಿ ಸುರಿದ ಆಲಿಕಲ್ಲು ಮಳೆಗೆ ಗ್ರಾಮದಲ್ಲಿ ರೈತರು ಬೆಳೆದ ಕಾಫಿ, ಹಸಿ ಮೆಣಸು ಸೇರಿದಂತೆ ವಿವಿಧ ಬೆಳೆಗಳು ನಾಶವಾಗಿದೆ. ಇದರಿಂದ ಈ ಭಾಗದ ರೈತರು ಅಕಾಲಿಕ ಮಳೆಯಿಂದ ಕಂಗಾಲಾಗಿದ್ದಾರೆ. ಕೋಡ್ಲಿಪೇಟೆ ಸುತ್ತಮುತ್ತ ಆಲಿಕಲ್ಲು ಸಹಿತ ಆರಂಭವಾದ ಮಳೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಎಡೆಬಿಡದೆ ಸುರಿಯಿತು.

Published On: 19 February 2021, 08:17 PM English Summary: heavy rain in bengaluru

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.