1. ಸುದ್ದಿಗಳು

ಕರಾವಳಿಯಲ್ಲಿ ಜುಲೈ 6 ರಿಂದ 10ರವರೆಗೆ ಭಾರಿ ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಭಾಗದಲ್ಲಿ ಜುಲೈ 6 ರಿಂದ 10ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸೋಮವಾರ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದರಿಂದ ಈ ಜಿಲ್ಲೆಗಳನ್ನು  ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಜು.7ರಿಂದ 9 ರವರೆಗೆ ಮಳೆ ಪ್ರಮಾಣ ಕಡಿಮೆ ಇರಲಿದೆ. ಈ ಭಾಗದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಉಳಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಚದುರಿದ ಮಳೆಯಾಗಲಿದೆ. ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯಾಗಲಿದೆ.

Published On: 06 July 2020, 09:40 AM English Summary: Heavy rain in coastal karantaka up to july 10

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.