ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 3ರಿಂದ 7ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆ (Heavy rain) ಯಾಗುವ ಸಾಧ್ಯತೆಯಿದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 3 ರಿಂದ 7 ರವರಗೆ ‘ಆರೆಂಜ್ ಅಲರ್ಟ್ (Orange alert) ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ‘ಯೆಲ್ಲೊ ಅಲರ್ಟ್ (Yellow alert) ಘೋಷಿಸಲಾಗಿದೆ.
ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.
Share your comments