1. ಸುದ್ದಿಗಳು

ಸೆ. 5 ರಿಂದ 9ರವರೆಗೆ ಭಾರಿ ಮಳೆ ಸಾಧ್ಯತೆ-ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಬಿರು ಸುಗೊಂಡಿರುವುದರಿಂದ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಸೆ. 5ರಿಂದ 9ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತುಮಕೂರು, ಶಿವಮೊಗ್ಗ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು,ರಾಮನಗರ, ಮೈಸೂರು,  ಚಾಮರಾಜನಗರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ವ್ಯಾಪಕ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

 ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೆ. 6ರಿಂದ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Published On: 05 September 2020, 08:13 AM English Summary: Heavy rain in karnataka yellow alert (2)

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.