ರಾಜ್ಯದಲ್ಲಿ ಶನಿವಾರ ಮತ್ತು ಭಾನುವಾರ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿರಿ: ರಾಜೀವ್ ಗಾಂಧಿ ಹಂತಕರ ಬಿಡುಗಡೆ: ಸೋನಿಯಾಗಾಂಧಿ ಕ್ಷಮಾಪಣೆ, ಬಿಡುಗಡೆ ಹಿನ್ನೆಲೆ ಗೊತ್ತೆ?
ರಾಜ್ಯದಲ್ಲಿ ಈಚೆಗೆ ಮಳೆಯ ಅಬ್ಬರ ತುಸು ಕಡಿಮೆ ಆಗಿತ್ತು. ಇದೀಗ ಮತ್ತೆ ಮಳೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಆರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ .
ಈ ಜಿಲ್ಲೆಗಳ ಅಲ್ಲಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ದಿನವಿಡೀ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆ ಆಗಿದೆ.
ರಾಜೀವ್ ಗಾಂಧಿ ಹತ್ಯೆಗೆ ಕಾರಣವೇನು, ಸಂಚು ರೂಪಿಸಿದ್ದೇಗೆ ?
ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆ ಆಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿತ್ತು.
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 13 ಡಿಗ್ರಿ ಸೆಲ್ಸಿಯಸ್ ವಿಜಯಪುರದಲ್ಲಿ ದಾಖಲಾಗಿತ್ತು.
ಇನ್ನು ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಕೆಲವೆಡೆ ಬೆಳಿಗ್ಗೆ ಮೋಡ ಮುಸುಕಿದ ವಾತಾವರಣ ಇರಲಿದೆ. ಇನ್ನು ಕೆಲವೆಡೆ ಮುಂಜಾನೆ ಮಂಜಿನ ವಾತಾವರಣ ಇರಲಿದೆ.
ಗರಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಇದನ್ನೂ ಓದಿರಿ: ನಾಡಪ್ರಭು ಶ್ರೀ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ
ಏನಿದು ಯೆಲ್ಲೋ ಅಲರ್ಟ್
ಹವಾಮಾನ ಇಲಾಖೆಯು ಆಯಾ ಪ್ರದೇಶದಲ್ಲಿ ಆಗುವ ಮಳೆ ಪ್ರಮಾಣದ ಆಧಾರದ ಮೇಲೆ ಅಲರ್ಟ್ ಘೋಷಿಸುತ್ತದೆ.
ಉದಾ: 64.5 ಮಿ.ಮೀ ನಿಂದ 115.5 ಮಿ.ಮೀ ಪ್ರಮಾಣದಲ್ಲಿ ನಿರ್ದಿಷ್ಟ ಪ್ರದೇಶದಲ್ಲಿ ಮಳೆ ಆಗುವುದಿದ್ದರೆ ಅದನ್ನು ಯೆಲ್ಲೋ ಅಲರ್ಟ್ ಎನ್ನಲಾಗುತ್ತದೆ.
115.5 ಮಿ.ಮೀನಿಂದ 204.4 ಮಿ.ಮೀನ ವರೆಗೆ ಮಳೆ ಆಗುವುದಿದ್ದರೆ (ಭಾರೀ ಮಳೆ) heavy rain ಅದನ್ನು ರೆಡ್ ಅಲರ್ಟ್ ಎಂದು ಕರೆಯಲಾಗುತ್ತದೆ.
ಈ ರೀತಿ ಹಲವು ಮಾದರಿಯ ಅಲರ್ಟ್‌ಗಳನ್ನು ಹವಾಮಾನ ಇಲಾಖೆ ನೀಡುತ್ತದೆ.
Share your comments