1. ಸುದ್ದಿಗಳು

ತಮಿಳುನಾಡಿನಲ್ಲಿ ಭಾರೀ ಮಳೆ ಸಾಧ್ಯತೆ: ಹೈಅಲರ್ಟ್‌ ಘೋಷಣೆ!

Hitesh
Hitesh
Heavy rain likely in Tamil Nadu: High alert!


ಬುಧವಾರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ತಮಿಳುನಾಡು ಹಾಗೂ

ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದೇಶದಲ್ಲಿ ಪ್ರಸಕ್ತ ವರ್ಷ 31.5 ಮಿಲಿಯನ್‌ ಹೆಕ್ಟೇರ್‌ ಗೋಧಿ ಬಿತ್ತನೆ ಸಾಧ್ಯತೆ!

ತಮಿಳುನಾಡಿನ ಚೆನ್ನೈ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹೈಅಲರ್ಟ್‌ ಘೋಷಿಸಲಾಗಿದ್ದು,

ಮುನ್ನೆಚ್ಚರಿಕೆ ಕ್ರಮವಾಗಿ 10 ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿವೆ.  

Heavy Rain| ರಾಜ್ಯದ ವಿವಿಧೆಡೆ ಧಾರಾಕಾರ ಮಳೆ!

ತಮಿಳುನಾಡಿನ ನಾಗಪಟ್ಟಣಂ, ತಂಜಾವೂರು, ತಿರುವಾರೂರು, ಕಡಲೂರು, ಮೈಲಾಡುತುರೈ, ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು ಮತ್ತು ವಿಲ್ಲುಪುರಂ

ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ.

ಈ ಭಾಗದಲ್ಲಿ ಮುನ್ನೆಚ್ಚರಿಕೆಯಾಗಿ 10 ಎನ್‌ಟಿಆರ್‌ಎಫ್ ಮತ್ತು ಎಸ್‌ಟಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ತಮಿಳುನಾಡು ಕಂದಾಯ

ಮತ್ತು ವಿಪತ್ತು ನಿರ್ವಹಣಾ ಸಚಿವ ಕೆ.ಕೆ.ಎಸ್.ಎಸ್.ಎಸ್.ಆರ್.ರಾಮಚಂದ್ರನ್ ತಿಳಿಸಿದ್ದಾರೆ.

ಚೀನಾದ ವುಹಾನ್‌ “ಪ್ರಯೋಗ”ದಿಂದಲೇ ಹರಡಿತಂತೆ ಕೊರೊನಾ ಮಹಾಮಾರಿ!

ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಆಗ್ನೇಯ ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ

ಡಿಸೆಂಬರ್ 7ರ ಸಂಜೆಯ ವೇಳೆಗೆ ಚಂಡಮಾರುತವಾಗಿ ಪರಿಣಮಿಸುವ ಸಾಧ್ಯತೆಯಿದೆ.

ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಕಂದಾಯ ಇಲಾಖೆ ಜಿಲ್ಲಾಧಿಕಾರಿಗಳು ಮತ್ತು ಚೆನ್ನೈ ಮಹಾನಗರ ಪಾಲಿಕೆಗೆ ನಿರಂತರ ಸೂಚನೆಗಳನ್ನು ನೀಡುತ್ತಿದೆ.

PmKisan | ಪಿ.ಎಂ ಕಿಸಾನ್‌ ಸಮ್ಮಾನ್‌ 13ನೇ ಕಂತಿನ ಹಣಕ್ಕೆ ಕ್ಷಣಗಣನೆ!  

Heavy rain likely in Tamil Nadu: High alert!

ಸಮುದ್ರಕ್ಕೆ ಇಳಿಯದಂತೆ ಈ ಭಾಗದ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಅಲ್ಲದೇ ಸಮುದ್ರ ಭಾಗದ ಜನರಿಗೂ ಸಮಯಾನುಸಾರ ಮುನ್ನೆಚ್ಚರಿಕೆ ನೀಡಲಾಗುತ್ತಿದೆ.

ಚಿನ್ನದ ಬೆಲೆಯಲ್ಲಿ ಅಲ್ಪ ಬದಲಾವಣೆ, ಇಂದಿನ ಚಿನ್ನದ ಬೆಲೆ ಎಷ್ಟಿದೆ ?

Heavy rain likely in Tamil Nadu: High alert!

ಇನ್ನು ಕರ್ನಾಟಕದಲ್ಲಿ ಒಣಹವೆ ಮುಂದುವರಿದಿದ್ದು, ಅಲ್ಲಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  

ರಾಜ್ಯದಲ್ಲಿ ಮುಂದಿನ 24 ಗಂಟೆ ಬಹುತೇಕ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯ ದಟ್ಟಮಂಜು,

ಮಂಜು ಮುಸುಕುವ ಸಾಧ್ಯತೆಗಳಿರುತ್ತ ವೆ. ಉಳಿದಂತೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. 

38.30 ಲಕ್ಷ ಕೋಟಿ ಡಿಜಿಟಲ್ ಪಾವತಿ; ಚಿನ್ನ- ಬೆಳ್ಳಿ ದರ ತುಸು ಹೆಚ್ಚಳ! 

Published On: 07 December 2022, 11:38 AM English Summary: Heavy rain likely in Tamil Nadu: High alert!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.