ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 21 ರವರೆಗೆ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಆ.18ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ (heavy rain)ಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ (orange alert), ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಯೆಲ್ಲೊ ಅಲರ್ಟ್ Yellow alert) ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಆ. 21ರವರೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಸಮುದ್ರದಲ್ಲಿ ಗಂಟೆಗೆ 40- 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, 3.2 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು (Fishers) ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.
ಮಳೆ-ಎಲ್ಲಿ,ಎಷ್ಟು?:
ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ 23 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕೊಲ್ಲೂರು 21, ಸಿದ್ದಾಪುರ 19, ಆಗುಂಬೆ 17, ಭಟ್ಕಳ 15, ಕುಂದಾಪುರ 12, ಕೊಪ್ಪ 10, ಬೆಳಗಾವಿ 9, ಕಾರ್ಕಳ, ಅಂಕೋಲಾ 8, ಬೆಳಗಾವಿ, ಶೃಂಗೇರಿ 7, ಬೆಳ್ತಂಗಡಿ, ಸಾಗರ 6, ಮೂಡುಬಿದರೆ, ಉಡುಪಿ, ಬ್ರಹ್ಮಾವರ, ಕಾರವಾರ, ಧಾರವಾಡ, ಸೊರಬ 5, ನಿಪ್ಪಾಣಿ, ಸಕಲೇಶಪುರ 4, ಮಂಗಳೂರು, ಚಿಂಚೋಳಿ, ತರೀಕೆರೆಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.
Share your comments