ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿಯ ತೀವ್ರತೆಯಿಂದಾಗಿ ಮುಂದಿನ 12 ಗಂಟೆಗಳಲ್ಲಿ ಮತ್ತಷ್ಟು ಮಳೆ ಹೆಚ್ಚಾಗುವ ಸಾಧ್ಯತೆಯಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಹಾಗೂ ಬುಧವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಅ.15ರ ವರೆಗೆ 115 ಮಿ. ಮೀನಿಂದ 204 ಮಿ.ಮೀ ವಲರೆಗೆ ಮಳೆಯಾಗುವ ಸಾಧ್ಯತೆಯಿದೆ.
ವಿಜಯಪುರ, ಬಾಗಲಕೋಟ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿಯೂ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಗದಗ, ಬಳ್ಳಾರಿ, ದಾವಣಗೆರೆ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರದಲ್ಲಿ ಅ.13ಕ್ಕೆ ಯಲ್ಲೋ ಹಾಗೂ ಅ.14ಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.. ಬೀದರ್, ಕಲಬುರಗಿ ಹಾಗೂ ಯಾದಗಿರಿಯಲ್ಲಿ ಅ.13ಕ್ಕೆ ಆರೆಂಜ್ ಹಾಗೂ ಅ.14ಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Share your comments