1. ಸುದ್ದಿಗಳು

Rain ರಾಜ್ಯದಲ್ಲಿ ಭಾರೀ ಮಳೆ; ಅನಾಹುತ ತಪ್ಪಿಸಲು ಸರ್ಕಾರದಿಂದ ಸರ್ಕಸ್‌!

Hitesh
Hitesh
Heavy rains in the state; Circus by the government to avoid disaster!

ಕರ್ನಾಟಕದ ಹಲವು ಭಾಗದಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಮಳೆಯಿಂದ ಆಗುವ ಅನಾಹುತವನ್ನು ತಪ್ಪಿಸಲು ಸರ್ಕಾರದ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಮಳೆಯಿಂದ ಹಾನಿ ಮತ್ತು ಪ್ರವಾಹದಂತಹ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳ

ಜಿಲ್ಲಾಧಿಕಾರಿಗಳೊಂದಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೋಮವಾರ ಸಭೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಮಳೆಯ ಬಗ್ಗೆ ವರದಿ ಕೇಳಿದ್ದಾರೆ.

ಸೋಮವಾರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಮುಂದುವರೆದಿದೆ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು

ಸೋಮವಾರ ಬೆಂಗಳೂರು ನಗರದ ಸುತ್ತಮುತ್ತಲಿನ ಮಳೆ ಪರಿಸ್ಥಿತಿಯನ್ನು ವಿಶ್ಲೇಷಿಸಲು ಬೆಂಗಳೂರಿನ ನಾಗರಿಕ ಸಂಸ್ಥೆಯಾದ

ಬಿಬಿಎಂಪಿಯ ವಾರ್ ರೂಮ್‌ಗೆ ಭೇಟಿ ನೀಡಿದರು. ದಕ್ಷಿಣ ರಾಜ್ಯದ ಸುಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ

ಸೇರಿದಂತೆ ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, ಆವರಣ ನೀರಿನಿಂದ ಮುಳುಗಿದೆ.

ಬೆಂಗಳೂರಿನಲ್ಲಿ ಡಿ.ಕೆ ಶಿವಕುಮಾರ್‌ ಪರಿಶೀಲನೆ

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಬೆಂಗಳೂರಿನಲ್ಲಿರುವ  ಪಾಲಿಕೆ ಕೇಂದ್ರ ಕಚೇರಿಯಲ್ಲಿರುವ ಕಂಟ್ರೋಲ್ ರೂಂಗೆ ದಿಢೀರ್ ಭೇಟಿ ನೀಡಿದರು. 

ನಗರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ

ಸಚಿವ ಡಿ.ಕೆ ಶಿವಕುಮಾರ್ ಅವರು ಪಾಲಿಕೆ ಕೇಂದ್ರ ಕಚೇರಿಯಲ್ಲಿರುವ ಕಂಟ್ರೋಲ್

ರೂಂಗೆ ದಿಢೀರ್ ಭೇಟಿ ಕಾರ್ಯನಿರ್ವಹಣೆಯನ್ನು ಪರಿವೀಕ್ಷಣೆ ನಡೆಸಿದರು.

Reels ರೀಲ್ಸ್‌ ಮಾಡಲು ಹೋಗಿ ಫಾಲ್ಸ್‌ನಲ್ಲಿ ಕೊಚ್ಚಿ ಹೋದ ಯುವಕ! 

Flood Fear ಭಾರೀ ಮಳೆ; ರಾಜ್ಯದ ಈ ಭಾಗದಲ್ಲಿ ಪ್ರವಾಹ ಭೀತಿ!

Karnataka Weather ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ: ಎಚ್ಚರ

ಪಾಲಿಕೆ ಕೇಂದ್ರ ಕಚೇರಿ ಅನೆಕ್ಸ್ ಕಟ್ಟಡ-3ರ 6ನೇ ಮಹಡಿಯಲ್ಲಿ ಕಂಟ್ರೋಲ್ ರೂಂ ಹಾಗೂ ಐ.ಸಿ.ಸಿ.ಸಿ(ಇಂಟಿಗ್ರೇಟೆಡ್ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್) ಗೆ

ದಿಢೀರ್ ಭೇಟಿ ನೀಡಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ, ಮರಗಳು, ಮರದ ರೆಂಬೆ/ಕೊಂಬೆಗಳು ಬಿದ್ದಿರುವ ಸೇರಿದಂತೆ ಇನ್ನಿತರೆ ದೂರುಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಪರಿಶೀಲನೆಯ ವೇಳೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಮಾತನಾಡಿ, ಐಸಿಸಿಸಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು,

3 ಪಾಳಿಯಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಮಳೆಗಾಲದ ವೇಳೆ ನಾಗರಿಕರು ಕೇಂದ್ರ ನಿಯಂತ್ರಣ ಕೊಠಡಿಯ

ಉಚಿತ ಸಂಪರ್ಕ ಸಂಖ್ಯೆ 1533ಗೆ ಕರೆ ಮಾಡಿ ದೂರು ನೀಡಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸದರಿ

ದೂರುಗಳ ಮಾಹಿತಿ ನೀಡಿ ಶೀಘ್ರ ಬಗೆಹರಿಸಲಿದ್ದಾರೆ ಎಂದು ಮಾಹಿತಿ ನೀಡಿದರು. 

ಪಾಲಿಕೆ ಕೇಂದ್ರ ಕಛೇರಿ ಹಾಗೂ 8 ವಲಯಗಳು ಸೇರಿದಂತೆ 9 ಶಾಶ್ವತ ನಿಯಂತ್ರಣ ಕೊಠಡಿಗಳಿದ್ದು,

ಮಳೆಗಾಲದ ವೇಳೆ 63 ಉಪ ವಿಭಾಗಗಳಲ್ಲಿ ತಾತ್ಕಾಲಿಕ ನಿಯಂತ್ರಣ ಕೊಠಡಿಗಳನ್ನು ತೆರೆಯಲಾಗಿದೆ.

ಪ್ರತಿ ನಿಯಂತ್ರಣ ಕೊಠಡಿಯಲ್ಲೂ ನುರಿತ ಸಿಬ್ಬಂದಿ, ವಾಹನಗಳು, ಮೋಟಾರು ಪಂಪ್‌ಗಳು,

ಮೋಟಾರ್ ಚಾಲಿತ ಗರಗಸ, ರಿಫ್ಲೆಕ್ಟಿವ್ ಜ್ಯಾಕೆಟ್ಸ್ ಇತ್ಯಾದಿ ಯಂತ್ರೋಪಕರಣಗಳನ್ನು ಸನ್ನದ್ದ ಸ್ಥಿತಿಯಲ್ಲಿರಿಸಲಾಗಿದೆ.

ಇದರ ಜೊತೆಗೆ ಅಗ್ನಿ ಶಾಮಕ ಇಲಾಕೆಯ ಸಿಬ್ಬಂದಿ ಹಾಗೂ ಎಸ್.ಡಿ.ಆರ್.ಎಫ್ ಸಿಬ್ಬಂದಿಯೂ ನಿಯಂತ್ರಣ ಕೊಠಡಿಗಳ ಸಂಪರ್ಕದಲ್ಲಿರಲಿದ್ದಾರೆ.

 ಮಳೆಗಾಲದ ಸಂದರ್ಭದಲ್ಲಿ ಬಿದ್ದ ಮರಗಳು, ರೆಂಬೆ-ಕೊಂಬೆಗಳನ್ನು ತೆರವುಗೊಳಿಸುವ ಸಲುವಾಗಿ 28 ತಂಡಗಳು ಕಾರ್ಯನಿರ್ವಹಿಸಲಿವೆ ಎಂದರು.

ಬೃಹತ್ ನೀರುಗಾಲುವೆ ವಿಭಾಗದ ಮಾಹಿತಿ 

ನಗರದಲ್ಲಿ ಒಟ್ಟು 198 ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದ್ದು, ತಹಲ್‌ವರೆಗೆ 118 ಸೂಕ್ಷ್ಮ ಪ್ರದೇಶಗಳಲ್ಲಿ

ಶಾಶ್ವತ ಪರಿಹಾರವನ್ನು ಒದಗಿಸಲಾಗಿರುತ್ತದೆ. ಇನ್ನುಳಿದ 80 ಸೂಕ್ಷ್ಮ ಪ್ರದೇಶಗಳಲ್ಲಿ ತಾತ್ಕಾಲಿಕ ಕ್ರಮಗಳನ್ನು 

ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ವೇಳೆ ಯೋಜನಾ ವಿಭಾಗದ ವಿಶೇಷ ಆಯುಕ್ತ ಡಾ. ತ್ರಿಲೋಕ್ ಚಂದ್ರ, ಪ್ರಧಾನ ಎಂಜಿನಿಯರ್‌ ಪ್ರಹ್ಲಾದ್ ಸೇರಿದಂತೆ ಹಲವರು ಇದ್ದರು. 

Image Credit: @Krishna Byre Gowda 
@bbmp 

Published On: 25 July 2023, 03:56 PM English Summary: Heavy rains in the state; Circus by the government to avoid disaster!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.