1. ಸುದ್ದಿಗಳು

South Indian states ಕರ್ನಾಟಕ ಸೇರಿ ದಕ್ಷಿಣ ಭಾರತದ ಈ ರಾಜ್ಯಗಳಲ್ಲಿ ಭಾರೀ ಮಳೆ; ಶಾಲಾ- ಕಾಲೇಜು ರಜೆ!

Hitesh
Hitesh
Heavy rains in these South Indian states including Karnataka; School-college vacation!

ನೈರುತ್ಯ ಮುಂಗಾರು ಕಳೆದ ಒಂದು ವಾರದಿಂದ ಚುರುಕು ಪಡೆದುಕೊಂಡಿದ್ದು, ಕರ್ನಾಟಕವು ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಭಾರೀ ಮಳೆಯಿಂದ ಕರ್ನಾಟಕ, ಕೇರಳ ಹಾಗೂ ತೆಲಂಗಾಣದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದ್ದು, ಜನ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. 

ಅಲ್ಲದೇ ಕರ್ನಾಟಕ ಸೇರಿ ವಿವಿಧ ಭಾಗದಲ್ಲಿ ಸಾವು - ನೋವು ಸಹ ಸಂಭವಿಸಿದೆ.

ತೆಲಂಗಾಣದಲ್ಲಿ ಭಾರೀ ಮಳೆ; ಶಾಲಾ- ಕಾಲೇಜುಗಳಿಗೆ ರಜೆ

ತೆಲಂಗಾಣದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಹಾಗೂ ಗುರುವಾರ ತೆಲಂಗಾಣದಲ್ಲಿ

ಶಾಲಾ- ಕಾಲೇಜುಗಳಿಗೆ ಅಲ್ಲಿನ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರು ರಜೆ ಘೋಷಿಸಿದ್ದಾರೆ.

ಇನ್ನು ತೆಲಂಗಾಣದಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳು

ಜಲಾವೃತವಾಗಿದ್ದು, ಜನ ಪರದಾಡುವ ಪರಿಸ್ಥಿತಿ ಎದುರಾಗಿದೆ.

Heavy rains ರಾಜ್ಯದ ಈ ಭಾಗದಲ್ಲಿ ಧಾರಾಕಾರ ಮಳೆ ಹವಾಮಾನ ಇಲಾಖೆ ಮುನ್ಸೂಚನೆ

ರೆಡ್‌ ಅಲರ್ಟ್‌ ಘೋಷಣೆ!

ಕರ್ನಾಟಕದ ಕರಾವಳಿ, ತೆಲಂಗಾಣದ ಹೈದರಾಬಾದ್‌ ಸೇರಿ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ

ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಭಾರೀ ಮಳೆ ಎಚ್ಚರಿಕೆ: ಕರ್ನಾಟಕ, ತೆಲಂಗಾಣ ಮತ್ತು ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ

ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯೊಂದಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

 ಬುಧವಾರ ಹಾಗೂ ಗುರುವಾರವೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು,

ತೆಲಂಗಾಣದಲ್ಲಿ ಇಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಂಗಳವಾರ ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿರುವ ಹೊಳೆಯಲ್ಲಿ

ಇಬ್ಬರು ಬಾಲಕಿಯರು ಕೊಚ್ಚಿಕೊಂಡು ಹೋಗಿದ್ದು, ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ.

ರಾಜ್ಯದ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹೊಳೆ ದಾಟುವಾಗ ಇಬ್ಬರು ಬಾಲಕಿಯರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ.

ನೀರಿನ ಹರಿವು ತಿಳಿಯದೆ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೈದರಾಬಾದ್‌ನಲ್ಲಿ ಸಂಚಾರ ದಟ್ಟಣೆಯನ್ನು ತಪ್ಪಿಸುವ ಉದ್ದೇಶದಿಂದ ಐಟಿ ಕಂಪನಿಗಳ

ಸಮಯದ ಅವಧಿಯನ್ನು ನಿರ್ದಿಷ್ಟವಾಗಿ ಬದಲಾಯಿಸುವಂತೆ  ಮನವಿ ಮಾಡಿರುವುದು ವರದಿ ಆಗಿದೆ.  

ಕರ್ನಾಟಕ, ತೆಲಂಗಾಣ ಮತ್ತು ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ

ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯೊಂದಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

Reels ರೀಲ್ಸ್‌ ಮಾಡಲು ಹೋಗಿ ಫಾಲ್ಸ್‌ನಲ್ಲಿ ಕೊಚ್ಚಿ ಹೋದ ಯುವಕ!

Image Credit: Pexels 

Published On: 26 July 2023, 01:37 PM English Summary: Heavy rains in these South Indian states including Karnataka; School-college vacation!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.