1. ಸುದ್ದಿಗಳು

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಪ್ರಶ್ನಿಸಿ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

Land

ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961 ಕುರಿತು ಸುಗ್ರೀವಾಜ್ಞೆ ಹೊರಡಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌ ಜಾರಿ ಮಾಡಿದೆ.

ಬಾಗಲಕೋಟೆ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ನಾಗರಾಜ್‌ ಹೊಂಗಲ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ನೇತೃತ್ವದ ನ್ಯಾಯಪೀಠ, ಸರ್ಕಾರಕ್ಕೆ ತನ್ನ ನಿಲುವು ತಿಳಿಸುವಂತೆ ಸೂಚನೆ ನಿಡಿದೆ. 

ಬಾಗಲಕೋಟೆ ಜಿಲ್ಲೆ ಇಳಕಲ್ ಪಟ್ಟಣದ ಸಾಮಾಜಿಕ ಹೋರಾಟಗಾರ ನಾಗರಾಜ್ ಹೊಂಗಲ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ ಸರ್ಕಾರಕ್ಕೆ ತನ್ನ ನಿಲುವು ತಿಳಿಸುವಂತೆ ಸೂಚನೆ ನೀಡಿದೆ. 

ರೈತರ ಹಿತಾಸಕ್ತಿ ಕಾಪಾಡುವ ಉತ್ತಮ ಉದ್ದೇಶದಿಂದ 1961ರ ಕಾಯ್ದೆಯಲ್ಲಿ ಹಲವು ನಿರ್ಬಂಧ ವಿಧಿಸಲಾಗಿದೆ. 2020ರ ಜುಲೈ 13ರಂದು ಅಧಿಸೂಚನೆ ಹೊರಡಿಸಿದ ಭೂಸುಧಾರಣಾ ತಿದ್ದುಪಡಿ ಸುಗ್ರೀವಾಜ್ಞೆಯು ಕೃಷಿ ಭೂಮಿಯನ್ನು ಕೃಷಿಯೇತರರು ಖರೀದಿಸಲು ಆದಾಯ ಮಿತಿಯ ಮೇಲಿನ ನಿರ್ಬಂಧ ತೆಗೆದುಹಾಕಿದೆ. ಇದು ರೈತರ ಮೇಲೆ ಗಂಭೀರ ಪರಿಣಾಮ ಬೀರಲಿದೆ’ ಎಂದು ಅರ್ಜಿದಾರರು ತಿಳಿಸಿದ್ದಾರೆ.

‘ಒಬ್ಬ ವ್ಯಕ್ತಿ ಇನ್ನು ಮುಂದೆ 108 ಎಕರೆ, ಒಂದು ಕುಟುಂಬ 432 ಎಕರೆ ಜಮೀನು ಹೊಂದಬಹುದಾಗಿದೆ. ಇದು ಬಂಡವಾಳಶಾಹಿ ವ್ಯವಸ್ಥೆಯನ್ನು ಮತ್ತಷ್ಟು ಬಲಗೊಳಿಸಲಿದೆ. ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ರೈತ ವರ್ಗವನ್ನು ನಾಶ ಮಾಡಲಿದೆ. ದೇಶದ ಕೃಷಿ ಉತ್ಪನ್ನದ ಮೇಲೆ ದುಷ್ಪರಿಣಾಮ ಬೀರಲಿದೆ. ಸಂವಿಧಾನದಲ್ಲಿ ಉಲ್ಲೇಖಿತವಾದ ಸಮಾಜವಾದದ ಮೂಲ ಪರಿಕಲ್ಪನೆಗೆ ಕೊಡಲಿ ಪೆಟ್ಟು ಬಿದ್ದಿದೆ. ಈ ನಿತಿಗೆ ಬದಲಾವಣೆ ತಂದು ಯಾವುದೇ ವ್ಯಕ್ತಿ ಕೂಡ ಕೃಷಿ ಭೂಮಿ ಖರೀದಿ ಮಾಡಬಹುದು ಎಂಬ ನಿಯಮ ಜಾರಿಗೆ ತರುವುದರಿಂದ ಭೂಮಿಯ ಬೆಲೆ ಗಗನಕ್ಕೇರುವುದಲ್ಲದೆ ಯಾವುದೇ ರೈತರು ಭೂಮಿ ಖರೀದಿಸಲು ಶಕ್ತರಾಗುವುದಿಲ್ಲ ಎಂದು ಆಕ್ಷೇಪಿಸಿದ್ದಾರೆ.

Published On: 21 August 2020, 10:45 AM English Summary: high court notice on Agri land reform act

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.